IND-A vs NZ-A: ಕುಲದೀಪ್ ಯಾದವ್ ಹ್ಯಾಟ್ರಿಕ್ ಸಾಧನೆ; ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

ಎಡಗೈ ಮಣಿಕಟ್ಟಿನ ಸ್ಪಿನ್ನರ್ ಕುಲದೀಪ್ ಯಾದವ್ ಅವರು ಭಾನುವಾರ, ಸೆಪ್ಟೆಂಬರ್ 25ರಂದು, ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ಎ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಎ ಪರ ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದರು. ಇದೇ ವೇಳೆ ಭಾರತ ಎ ತಂಡ ನ್ಯೂಜಿಲೆಂಡ್ ಎ ತಂಡದ ವಿರುದ್ಧ 4 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.

PAK vs ENG 4ನೇ ಟಿ20: ವಿರಾಟ್ ಕೊಹ್ಲಿಯ ಪ್ರಮುಖ ದಾಖಲೆ ಮೇಲೆ ಕಣ್ಣಿಟ್ಟಿರುವ ಬಾಬರ್ ಅಜಂPAK vs ENG 4ನೇ ಟಿ20: ವಿರಾಟ್ ಕೊಹ್ಲಿಯ ಪ್ರಮುಖ ದಾಖಲೆ ಮೇಲೆ ಕಣ್ಣಿಟ್ಟಿರುವ ಬಾಬರ್ ಅಜಂ

ಪ್ರವಾಸಿ ನ್ಯೂಜಿಲೆಂಡ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್‌ನ ಅಂತಿಮ ಓವರ್‌ಗಳ ವೇಳೆ ಕುಲದೀಪ್ ಯಾದವ್ ಹ್ಯಾಟ್ರಿಕ್ ವಿಕೆಟ್ ಪಡೆದ ಸಾಧನೆ ಮಾಡಿದರು. ಎಡಗೈ ಆಟಗಾರ 10-0-51-4 ಅಂಕಿಗಳೊಂದಿಗೆ ತಮ್ಮ ಕೋಟಾ ಮುಗಿಸಿದರು ಮತ್ತು ಭಾರತ ಎ ಬೌಲಿಂಗ್‌ನಲ್ಲಿ ನ್ಯೂಜಿಲೆಂಡ್ ಎ ತಂಡವನ್ನು 47 ಓವರ್‌ಗಳಲ್ಲಿ 219 ರನ್‌ಗಳಿಗೆ ಆಲೌಟ್ ಮಾಡಲು ಸಹಾಯ ಮಾಡಿದರು.

47ನೇ ಓವರ್‌ನಲ್ಲಿ ಹ್ಯಾಟ್ರಿಕ್ ಸಾಧನೆ

47ನೇ ಓವರ್‌ನಲ್ಲಿ ಹ್ಯಾಟ್ರಿಕ್ ಸಾಧನೆ

ಕುಲದೀಪ್ ಯಾದವ್ ಇನ್ನಿಂಗ್ಸ್‌ನ 47ನೇ ಓವರ್‌ನಲ್ಲಿ ಲೋಗನ್ ವ್ಯಾನ್ ಬೀಕ್, ಜೋ ವಾಕರ್ ಮತ್ತು ಜಾಕೋಬ್ ಡಫಿ ಅವರ ವಿಕೆಟ್ ಪಡೆದರು. ಪಂದ್ಯದಲ್ಲಿ ಯಾದವ್ ನಾಲ್ಕು ವಿಕೆಟ್ ಕಬಳಿಸುವುದರ ಜೊತೆಗೆ ಹ್ಯಾಟ್ರಿಕ್ ಸಾಧನೆ ಮಾಡಿದರು.

ಮೊದಲಿಗೆ ಕುಲದೀಪ್ ಯಾದವ್ 47ನೇ ಓವರ್‌ನ ನಾಲ್ಕನೇ ಎಸೆತದಲ್ಲಿ ಪೃಥ್ವಿ ಶಾಗೆ ಕ್ಯಾಚ್ ನೀಡಿದ ಲೋಗನ್ ವ್ಯಾನ್ ಬೀಕ್ ಅವರನ್ನು ಔಟ್ ಮಾಡಿದರು. ನಂತರ ಮುಂದಿನ ಎಸೆತದಲ್ಲಿ ಜೋ ವಾಕರ್ ನೀಡಿದ ಕ್ಯಾಚ್ ಅನ್ನು ನಾಯಕ ಸಂಜು ಸ್ಯಾಮ್ಸನ್ ಹಿಡಿದರು. ಕೊನೆಯ ಎಸೆತದಲ್ಲಿ ಜೇಕಬ್ ಡಫಿಗೆ ಎಲ್ಬಿಡಬ್ಲ್ಯೂ ಮಾಡುವ ಮೂಲಕ ಕುಲದೀಪ್ ಯಾದವ್ ಹ್ಯಾಟ್ರಿಕ್ ಪೂರೈಸಿದರು.

ಪೃಥ್ವಿ ಶಾ 77 ರನ್ ಗಳಿಸಿದರೆ, ರುತುರಾಜ್ ಗಾಯಕ್ವಾಡ್ (30)

ಪೃಥ್ವಿ ಶಾ 77 ರನ್ ಗಳಿಸಿದರೆ, ರುತುರಾಜ್ ಗಾಯಕ್ವಾಡ್ (30)

ನ್ಯೂಜಿಲೆಂಡ್ ಎ ಪರ ರಚಿನ್ ರವೀಂದ್ರ 65 ಎಸೆತಗಳಲ್ಲಿ 61 ರನ್ ಸಿಡಿಸಿದರೆ, ಜೋ ಕಾರ್ಟರ್ 80 ಎಸೆತಗಳಲ್ಲಿ 72 ರನ್ ಗಳಿಸಿದರು. ಇನ್ನು 220 ರನ್‌ಗಳ ಸಾಧಾರಣ ಮೊತ್ತ ಬೆನ್ನತ್ತಿದ ಭಾರತ ಎ ತಂಡ ಕೇವಲ 34 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 222 ರನ್ ಗಳಿಸಿ 4 ವಿಕೆಟ್‌ಗಳ ಅಂತರದಿಂದ ಗೆದ್ದು ಬೀಗಿತು. ಆರಂಭಿಕ ಪೃಥ್ವಿ ಶಾ 77 ರನ್ ಗಳಿಸಿದರೆ, ರುತುರಾಜ್ ಗಾಯಕ್ವಾಡ್ (30), ರಜತ್ ಪಾಟಿದಾರ್ (20), ನಾಯಕ ಸಂಜು ಸ್ಯಾಮ್ಸನ್ (37), ರಿಷಿ ಧವನ್ (22) ಮತ್ತು ಶಾರ್ದೂಲ್ ಠಾಕೂರ್ (25) ರನ್ ಗಳಿಸಿ ಗೆಲುವಿಗೆ ಕೊಡುಗೆ ನೀಡಿದರು.

ನ್ಯೂಜಿಲೆಂಡ್ ಎ ವಿರುದ್ಧ "ಚೈನಾಮನ್' ಕುಲದೀಪ್ ಯಾದವ್ ಅತ್ಯುತ್ತಮ ಪ್ರದರ್ಶನ ನೀಡಿದರೂ, ಭಾರತದ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲಿಲ್ಲ. ಭಾರತದ ಪರ ಏಳು ಟೆಸ್ಟ್‌, 69 ಏಕದಿನ ಹಾಗೂ 26 ಟಿ20 ಪಂದ್ಯಗಳಲ್ಲಿ ಕ್ರಮವಾಗಿ 26, 112 ಮತ್ತು 44 ವಿಕೆಟ್‌ಗಳು ಸೇರಿದಂತೆ ಒಟ್ಟು 182 ವಿಕೆಟ್‌ಗಳನ್ನು ಪಡೆದಿದ್ದಾರೆ. ಅವರು ಜಿಂಬಾಬ್ವೆ ಪ್ರವಾಸದಲ್ಲಿ ಭಾರತಕ್ಕಾಗಿ ಕೊನೆಯ ಪಂದ್ಯವನ್ನು ಆಡಿದ್ದರು.

ಏಕದಿನ ಪಂದ್ಯಗಳಲ್ಲಿ ಎರಡು ಬಾರಿ ಹ್ಯಾಟ್ರಿಕ್ ವಿಕೆಟ್

ಏಕದಿನ ಪಂದ್ಯಗಳಲ್ಲಿ ಎರಡು ಬಾರಿ ಹ್ಯಾಟ್ರಿಕ್ ವಿಕೆಟ್

ಸ್ಪಿನ್ನರ್ ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಎರಡು ಬಾರಿ ಹ್ಯಾಟ್ರಿಕ್ ವಿಕೆಟ್ ಪಡೆದಿದ್ದಾರೆ. 2017ರಲ್ಲಿ ಕೋಲ್ಕತ್ತಾದಲ್ಲಿ ಆಸ್ಟ್ರೇಲಿಯಾ ವಿರುದ್ಧ ಕುಲದೀಪ್ ಹ್ಯಾಟ್ರಿಕ್ ಸಾಧನೆ ಮಾಡಿದ್ದರು. ಇದರ ನಂತರ 2019ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧವೂ ಈ ಸಾಧನೆಯನ್ನು ಮಾಡಿದರು.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಕುಲದೀಪ್ ಯಾದವ್ ಎರಡು ಬಾರಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಗಾಗಿ ಆಡುವಾಗ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಅದರ ನಂತರ ಅವರು ಡೆಲ್ಲಿ ಕ್ಯಾಪಿಟಲ್ಸ್ (DC) ತಂಡದಲ್ಲಿ ರಿಷಭ್ ಪಂತ್ ನಾಯಕತ್ವದಲ್ಲಿ ಕುಲದೀಪ್ ಯಾದವ್ ಆಡುತ್ತಿದ್ದಾರೆ.

For Quick Alerts
ALLOW NOTIFICATIONS
For Daily Alerts
Story first published: Sunday, September 25, 2022, 18:24 [IST]
Other articles published on Sep 25, 2022

Latest Videos

  + More
  POLLS
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Yes No
  Settings X