Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐರ್ಲೆಂಡ್‌, ಇಂಗ್ಲೆಂಡ್ ಪ್ರವಾಸಕ್ಕೆ ಇದೇ ದಿನ ತಂಡ ಪ್ರಕಟ

ಅಫ್ಘಾನಿಸ್ತಾನ ವಿರುದ್ದದ ಸರಣಿಗೆ ದಿನಗಣನೆ ಆರಂಭವಾಗಿದೆ. ಈ ಸರಣಿಯ ಬಳಿಕ ಟೀಮ್ ಇಂಡಿಯಾ ಸಾಲು ಸಾಲು ಸರಣಿಗಳನ್ನು ಆಡಲಿದೆ. ಅಫ್ಘಾನಿಸ್ತಾನ ವಿರುದ್ಧದ ಸರಣಿಯ ಬಳಿಕ ಟೀಮ್ ಇಂಡಿಯಾ ಜೂನ್‌ 26 ರಿಂದ ಐರ್ಲೆಂಡ್‌ ಪ್ರವಾಸ ಕೈಗೊಳ್ಳಲಿದೆ. ಈ ವೇಳೆ ಭಾರತ ತಂಡ ಎರಡು ಟಿ20 ಪಂದ್ಯಗಳನ್ನು ಆಡಲಿದೆ. ಈ ಸರಣಿಯ ನಂತರ, ಭಾರತೀಯ ಕ್ರಿಕೆಟ್ ತಂಡವು ಜುಲೈ 1 ರಿಂದ ಇಂಗ್ಲೆಂಡ್‌ನಲ್ಲಿ ಐದು ಟಿ20 ಮತ್ತು ಮೂರು ಏಕದಿನ ಪಂದ್ಯಗಳನ್ನು ಆಡಲಿದೆ. ಈ ಎರಡೂ ಪ್ರವಾಸಕ್ಕೆ ಭಾರತ ತಂಡವನ್ನು ಶೀಘ್ರದಲ್ಲಿ ಪ್ರಕಟಿಸುವ ಸಾಧ್ಯತ ಇದೆ.

ಭಾರತ ಕ್ರಿಕೆಟ್ ತಂಡ ಮತ್ತು ಐರ್ಲೆಂಡ್ ನಡುವೆ ಎರಡು ಟಿ20 ಪಂದ್ಯಗಳು ನಡೆಯಲಿವೆ. ಜೂನ್ 26 ರಂದು ಮೊದಲ ಟಿ20 ಮತ್ತು ಜೂನ್ 28 ರಂದು ಎರಡನೇ ಟಿ20 ಪಂದ್ಯ ನಡೆಯಲಿದೆ. 2026 ರ ಐಸಿಸಿ ಟಿ20 ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಮೊದಲ ಟಿ20 ಸರಣಿಯನ್ನು ಆಡಲಿದ್ದು, ಎಲ್ಲರ ಚಿತ್ತ ನೆಟ್ಟಿದೆ.

IND Tour of Ireland amp amp England

ಟೈಮ್ಸ್ ಆಫ್ ಇಂಡಿಯಾದ ವರದಿಗಳ ಪ್ರಕಾರ, ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ತಂಡವನ್ನು ಜೂನ್ 6 ರಂದು ಪ್ರಕಟಿಸುವ ನಿರೀಕ್ಷೆಯಿದೆ. ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯವೂ ಅದೇ ದಿನ ಆರಂಭವಾಗಲಿದೆ.

ಜೂನ್ 6 ರಂದು ಮುಂಬೈನಲ್ಲಿ ಆಯ್ಕೆ ಸಮಿತಿ ಸಭೆ ನಡೆಯಲಿದ್ದು, ಅಲ್ಲಿ ನಾಯಕತ್ವ ಬದಲಾವಣೆ ಬಗ್ಗೆಯೂ ಚರ್ಚೆ ನಡೆಯಲಿದೆ. ಹಾಲಿ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಅವರನ್ನು ತಂಡದಿಂದ ಕೈ ಬಿಡುವ ಸಾಧ್ಯತೆ ಇದೆ. ಇವರ ಬದಲಿಗೆ ಶ್ರೇಯಸ್ ಅಯ್ಯರ್ ಅವರನ್ನು ತಂಡದ ನಾಯಕನನ್ನಾಗಿ ಘೋಷಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಈ ಆಟಗಾರರಿಗೆ ಅವಕಾಶ ಸಾಧ್ಯತೆ

ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಮ್ ಇಂಡಿಯಾ ತಂಡದಲ್ಲಿ ವೈಭವ್ ಸೂರ್ಯವಂಶಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ. ಇದಲ್ಲದೆ, ಆರ್‌ಸಿಬಿ ನಾಯಕ ರಜತ್ ಪಟಿದಾರ್ ಕೂಡ ತಂಡಕ್ಕೆ ಪ್ರವೇಶ ಪಡೆಯಬಹುದು ಎಂದು ಲೆಕ್ಕಾಚಾರ ಹಾಕಿಕೊಳ್ಳಲಾಗಿದೆ.

ಇಂಗ್ಲೆಂಡ್‌ ಪ್ರವಾಸದ ವೇಳಾ ಪಟ್ಟಿ

ಐರ್ಲೆಂಡ್‌ ಪ್ರವಾಸದ ಬಳಿಕ ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಪ್ರವಾಸದ ಆರಂಭದಲ್ಲಿ ಟೀಮ್ ಇಮಡಿಯಾ ಟಿ20 ಸರಣಿಗಳನ್ನು ಆಡಲಿದೆ. ಮೊದಲ ಪಂದ್ಯ ಜುಲೈ 1 ರಂದು, ಎರಡನೇ ಪಂದ್ಯ ಜುಲೈ 4 ರಂದು, ಮೂರನೇ ಪಂದ್ಯ ಜುಲೈ 7 ರಂದು, ನಾಲ್ಕನೇ ಪಂದ್ಯ ಜುಲೈ 9 ರಂದು ಮತ್ತು ಅಂತಿಮ ಪಂದ್ಯ ಜುಲೈ 11 ರಂದು ನಡೆಯಲಿದೆ. ಟಿ20 ಸರಣಿಯ ಬಳಿಕ ಏಕದಿನ ಸರಣಿ ಸಹ ನಡೆಯಲಿದೆ. ಏಕದಿನ ಸರಣಿಯ ಮೊದಲ ಪಂದ್ಯ ಜುಲೈ 14 ರಂದು, ಎರಡನೇ ಪಂದ್ಯ ಜುಲೈ 16 ರಂದು ಮತ್ತು ಫೈನಲ್ ಪಂದ್ಯ ಜುಲೈ 19 ರಂದು ನಡೆಯಲಿದೆ.

Story first published: Thursday, June 4, 2026, 17:42 [IST]
Other articles published on Jun 4, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+