ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ರಹಾನೆ, ಪೂಜಾರ ಉಳಿಸಿ ಮಯಾಂಕ್ ಹೊರಗಿಡಿ ಎಂದು ಸಲಹೆ ನೀಡಿದ ವಿವಿಎಸ್ ಲಕ್ಷ್ಮಣ್!

Ind v NZ, Mumbai Test: VVS Laxman suggestion to Dravid and Kohli on Team India batting lineup

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯದ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾದ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಪ್ರತಿಕ್ರಿಯಿಸಿದ್ದಾರೆ. ತಂಡದ ನೂತನ ಕೋಚ್ ರಾಹುಲ್ ದ್ರಾವಿಡ್ ಹಾಗೂ ನಾಯಕ ವಿರಾಟ್ ಕೊಹ್ಲಿ ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲೇಬೇಕಿದೆ ಎಂದಿದ್ದಾರೆ ವಿವಿಎಸ್ ಲಕ್ಷ್ಮಣ್. ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ಕ್ರಮಾಂಕ ಹೇಗಿರಬೇಕು ಎಂಬ ವಿಚಾರವಾಗಿ ಈ ಇಬ್ಬರು ಕೂಡ ಈ ಕಠಿಣ ತೀರ್ಮಾನಗಳನ್ನು ಮಾಡಬೇಕು ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದ್ದಾರೆ.

ಅಚ್ಚರಿಯೆಂದರೆ ವಿವಿಎಸ್ ಲಕ್ಷ್ಮಣ್ ನೀಡಿದ ಸಲಹೆ ಹೆಚ್ಚಿನ ಕ್ರಿಕೆಟ್ ಪ್ರೇಮಿಗಳು ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತೆ ಮಾಡಿದೆ. ಸತತವಾಗಿ ಕಳಪೆ ಪ್ರದರ್ಶನ ನೀಡುತ್ತಾ ಬಂದಿರುವ ಅಜಿಂಕ್ಯಾ ರಹಾನೆ ಹಾಗೂ ಚೇತೇಶ್ವರ್ ಪೂಜಾರಾಗೆ ಅವಕಾಶ ನೀಡಿ ಮಯಾಂಕ್ ಅಗರ್ವಾಲ್‌ ಅವರನ್ನು ಆಡುವ ಬಳಗದಿಂದ ಹೊರಗಿಡಿ ಎಂದು ಸಲಹೆ ನೀಡಿದ್ದಾರೆ ಟೀಮ್ ಇಂಡಿಯಾದ ಈ ಮಾಜಿ ಆಟಗಾರ.

ಕೊಹ್ಲಿ ಏಕದಿನ ನಾಯಕತ್ವದ ಭವಿಷ್ಯ ಈ ವಾರವೇ ನಿರ್ಧಾರ; ಈ ಇಬ್ಬರು ಕೊಹ್ಲಿ ಬೇಡ ಎಂದರೆ ಹೊಸ ನಾಯಕ ಫಿಕ್ಸ್!ಕೊಹ್ಲಿ ಏಕದಿನ ನಾಯಕತ್ವದ ಭವಿಷ್ಯ ಈ ವಾರವೇ ನಿರ್ಧಾರ; ಈ ಇಬ್ಬರು ಕೊಹ್ಲಿ ಬೇಡ ಎಂದರೆ ಹೊಸ ನಾಯಕ ಫಿಕ್ಸ್!

ಐಯ್ಯರ್ ಪ್ರದರ್ಶನ ಹೊಗಳಿದ ಲಕ್ಷ್ಮಣ್: ಇನ್ನು ಈ ಸಂದರ್ಭದಲ್ಲಿ ಲಕ್ಷ್ಮಣ್ ಪದಾರ್ಪಣಾ ಪಂದ್ಯದಲ್ಲಿ ಶ್ರೇಯಸ್ ಐಯ್ಯರ್ ನೀಡಿದ ಪ್ರದರ್ಶನವನ್ನು ಕಡೆಗಣನೆ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ. ಅಲ್ಲದೆ ಕಾನ್ಪುರ ಟೆಸ್ಟ್‌ನಲ್ಲಿ ಶ್ರೇಯಸ್ ಐಯ್ಯರ್ ಅವರನ್ನು ಆಡಿಸುವ ಮೂಲಕ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದಿದ್ದಾರೆ ಲಕ್ಷ್ಮಣ್.

ಶ್ರೇಯಸ್ ಐಯ್ಯರ್ ತಮ್ಮ ಚೊಚ್ಚಲ ಪಂದ್ಯದಲ್ಲಿಯೇ ಭರ್ಜರಿ ಶತಕ ಹಾಗೂ ಅರ್ಧ ಶತಕ ಸಿಡಿಸುವ ಮೂಲಕ ದಾಖಲೆಯ ಪ್ರದರ್ಶನ ನೀಡಿದರು. ಮೊದಲ ಇನ್ನಿಂಗ್ಸ್‌ನಲ್ಲಿ 105 ರನ್‌ಗಳಿಸಿದ್ದ ಐಯ್ಯರ್ ಎರಡನೇ ಇನ್ನಿಂಗ್ಸ್‌ನಲ್ಲಿ 65 ರನ್ ಸಿಡಿಸಿದ್ದರು. ಒತ್ತಡದ ಸಂದರ್ಭದಲ್ಲಿ ನೀಡಿದ ಈ ಪ್ರದರ್ಶನ ತಂಡಕ್ಕೆ ಭಾರೀ ಪರಿಣಾಮ ಬೀರಿತು. ರೋಚಕವಾಗಿ ಡ್ರಾದಲ್ಲಿ ಅಂತ್ಯವಾದ ಈ ಟೆಸ್ಟ್ ಪಂದ್ಯದಲ್ಲಿ ಶ್ರೇಯಸ್ ಐಯ್ಯರ್ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಚೊಚ್ಚಲ ಪಂದ್ಯದಲ್ಲಿ ಶತಕ ಹಾಗೂ ಅರ್ಧ ಶತಕ ಸಿಡಿಸಿದ ಭಾರತದ ಮೊದಲ ಆಟಗಾರ ಎನಿಸಿದ್ದಾರೆ ಶ್ರೇಯಸ್ ಐಯ್ಯರ್.

"ಶ್ರೇಯಸ್ ಐಯ್ಯರ್ ಚೊಚ್ಚಲ ಟೆಸ್ಟ್ ಪಂದ್ಯದ ಎರಡು ಇನ್ನಿಂಗ್ಸ್‌ನಲ್ಲಿಯೂ ಅದ್ಭುತವಾದ ಪ್ರದರ್ಶನ ನೀಡಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ಸಿಡಿಸಿದರೆ ನಂತರ ಅರ್ಧ ಶತಕ ಸಿಡಿಸಿದ್ದಾರೆ. ನೀವು ಗಮನಿಸಬೇಕಾದ ಪ್ರಮುಖ ಸಂಗತಿಯೆಂದರೆ ಎರಡು ಪ್ರದರ್ಶನ ಕೂಡ ತಂಡ ಸಾಕಷ್ಟು ಒತ್ತಡದಲ್ಲಿದ್ದಾಗ ಬಂದಿತ್ತು. ಹಾಗಾಗಿ ಇದು ಶ್ರೇಯಸ್ ಐಯ್ಯರ್ ಅವರಿಂದ ಬಂದಿರುವ ಅಮೋಘ ಆಟವಾಗಿದೆ" ಎಂದಿದ್ದಾರೆ ವಿವಿಎಸ್ ಲಕ್ಷ್ಮಣ್.

ಭಾರತ vs ನ್ಯೂಜಿಲೆಂಡ್‌ 2ನೇ ಟೆಸ್ಟ್ ಆರಂಭಕ್ಕೂ ಮುನ್ನವೇ ಅಡ್ಡಿಯಾದ ಮಳೆರಾಯ!ಭಾರತ vs ನ್ಯೂಜಿಲೆಂಡ್‌ 2ನೇ ಟೆಸ್ಟ್ ಆರಂಭಕ್ಕೂ ಮುನ್ನವೇ ಅಡ್ಡಿಯಾದ ಮಳೆರಾಯ!

ಮಯಾಂಕ್ ಬದಲಿಗೆ ಪೂಜಾರ ಆರಂಭಿಕನಾಗಲಿ ಎಂದ ಲಕ್ಷ್ಮಣ್: ಇನ್ನು ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಬ್ಯಾಟಿಂಹ್ ಕ್ರಮಾಂಕ ಹೇಗಿರಬೇಕು ಎಂದು ಲಕ್ಷ್ಮಣ್ ಸಲಹೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಅಬರು ಮಯಾಂಕ್ ಅಗರ್ವಾಲ್ ಎರಡು ಇನ್ನಿಂಗ್ಸ್‌ಗಳಲ್ಲಿಯೂ ಉತ್ತಮವಾಗಿ ಪ್ರದರ್ಶನ ನೀಡಲು ವಿಫಲವಾಗಿರುವ ಕಾರಣ ಹಾಗೂ ಕ್ರೀಸ್‌ನಲ್ಲಿ ಅವರು ಹೆಚ್ಚು ಕಾಲ ಇರಲು ಸಾಧ್ಯವಾಗಲಿಲ್ಲ ಎಂದ ಲಕ್ಷ್ಮಣ್ ಆರಂಭಿಕನಾಗಿ ಚೇರ್ತೇಶ್ವರ್ ಪೂಜಾರ ಕಣಕ್ಕಿಳಿಯಲಿ ಎಂದಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಅಜಿಂಕ್ಯಾ ರಹಾನೆ ಕಣಕ್ಕಿಳಿಯಬಹುದು ಎಂದು ಸಲಹೆ ನೀಡಿದ್ದಾರೆ. ಇನ್ನು ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಹಾಗೂ ಐದನೇ ಕ್ರಮಾಂಕದಲ್ಲಿ ಶ್ರೇಯಸ್ ಐಯ್ಯರ್ ಆಡಲು ಇಳಿಯಲು ಸಲಹೆ ನೀಡಿದ್ದಾರೆ. ಆದರೆ ಈ ನಿರ್ಧಾರವನ್ನು ರಾಹುಲ್ ದ್ರಾವಿಡ್ ಹಾಗೂ ವಿರಾಟ್ ಕೊಹ್ಲಿಗೆ ತೆಗೆದುಕೊಳ್ಳಲು ಕಠಿಣ ಎಂದು ಕೂಡ ಹೇಳಿಕೊಂಡಿದ್ದಾರೆ.

ಟೀಮ್ ಇಂಡಿಯಾ ಸ್ಕ್ವಾಡ್: ವಿರಾಟ್ ಕೊಹ್ಲಿ (ನಾಯಕ), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಮಯಾಂಕ್ ಅಗರ್ವಾಲ್, ಶುಬ್ಮನ್ ಗಿಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್, ಅಕ್ಷರ್ ಪಟೇಲ್, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್, ಶ್ರೀಕರ್ ಯಾದವ್, ಜಯಂತ್ ಸಿರಾಜ್ , ಪ್ರಸಿದ್ಧ್ ಕೃಷ್ಣ, ಸೂರ್ಯಕುಮಾರ್ ಯಾದವ್

ನ್ಯೂಜಿಲೆಂಡ್ ಸ್ಕ್ವಾಡ್: ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಟಾಮ್ ಲ್ಯಾಥಮ್, ವಿಲ್ ಯಂಗ್, ರಾಸ್ ಟೇಲರ್, ಹೆನ್ರಿ ನಿಕೋಲ್ಸ್, ರಚಿನ್ ರವೀಂದ್ರ, ಕೈಲ್ ಜೇಮಿಸನ್, ಟಿಮ್ ಸೌಥಿ, ವಿಲಿಯಂ ಸೋಮರ್‌ವಿಲ್ಲೆ, ಮಿಚೆಲ್ ಸ್ಯಾಂಟ್ನರ್, ಅಜಾಜ್ ಪಟೇಲ್, ನೀಲ್ ವ್ಯಾಗ್ನರ್, ಗ್ಲೆನ್ ಮಿಚೆಲ್, ಗ್ಲೆನ್ ಮಿಚೆಲ್

Virat Kohliಗೆ ಮೊದಲ ಬಾರಿಗೆ ಅಭ್ಯಾಸ ಮಾಡಿಸಿದ Rahul Dravid | Oneindia Kannada

Story first published: Thursday, December 2, 2021, 23:55 [IST]
Other articles published on Dec 2, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X