For Quick Alerts
ALLOW NOTIFICATIONS  
For Daily Alerts
 

ಭಾರತ vs ಶ್ರೀಲಂಕಾ: ಪ್ರಥಮ ಟಿ ಟ್ವೆಂಟಿ ಪಂದ್ಯದಿಂದ ರುತುರಾಜ್ ಗಾಯಕ್ವಾಡ್ ಹೊರಗುಳಿದದ್ದು ಈ ಕಾರಣಕ್ಕೆ

IND v SL: Here’s why Ruturaj Gaikwad isn’t played the 1st T20I against Sri Lanka

ಇತ್ತೀಚಿಗಷ್ಟೆ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡು ಕಾಂಗರೂಗಳ ನೆಲದಲ್ಲಿ ನಡೆದ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ 1 - 4 ಅಂತರದಿಂದ ಹೀನಾಯವಾಗಿ ಸೋಲನ್ನು ಕಂಡಿರುವ ಶ್ರೀಲಂಕಾ ಇದೀಗ ಭಾರತ ಪ್ರವಾಸವನ್ನು ಕೈಗೊಂಡಿದ್ದು ಟೀಮ್ ಇಂಡಿಯಾ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯುತ್ತಿದೆ. ಇತ್ತ ಇತ್ತೀಚೆಗಷ್ಟೇ ಭಾರತ ಪ್ರವಾಸವನ್ನು ಕೈಗೊಂಡಿದ್ದ ವೆಸ್ಟ್ ಇಂಡೀಸ್ ತಂಡದ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಹಾಗೂ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಸೆಣಸಾಟವನ್ನು ನಡೆಸಿದ್ದ ಟೀಮ್ ಇಂಡಿಯಾ ಎರಡೂ ಸರಣಿಗಳ ಎಲ್ಲಾ ಪಂದ್ಯಗಳನ್ನೂ ಗೆಲ್ಲುವುದರ ಮೂಲಕ ವೈಟ್ ವಾಷ್ ಸಾಧನೆ ಮಾಡಿ ಸಾಲು ಸಾಲು ಗೆಲುವುಗಳನ್ನು ಕಂಡಿದೆ.

ಹೀಗೆ ವೆಸ್ಟ್ ಇಂಡೀಸ್ ವಿರುದ್ಧ ಸಾಲು ಸಾಲು ಗೆಲುವುಗಳನ್ನು ಸಾಧಿಸಿರುವ ಟೀಮ್ ಇಂಡಿಯಾ ಇದೀಗ ಭಾರತ ಪ್ರವಾಸವನ್ನು ಕೈಗೊಂಡಿರುವ ಶ್ರೀಲಂಕಾ ತಂಡದ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗವಹಿಸುತ್ತಿವೆ. ಇತ್ತಂಡಗಳ ನಡುವೆ ಮೊದಲಿಗೆ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಆರಂಭವಾಗಿದ್ದು, ಇಂದು (ಫೆಬ್ರವರಿ 24) ಲಕ್ನೋದ ಏಕನ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಟಿ ಟ್ವೆಂಟಿ ಸರಣಿಯ ಚೊಚ್ಚಲ ಪಂದ್ಯ ನಡೆಯುತ್ತಿದೆ. ಈ ಪಂದ್ಯ ಆರಂಭವಾಗುವುದಕ್ಕೂ ಮುನ್ನ ಟೀಮ್ ಇಂಡಿಯಾ ಪರ ಇಶಾನ್ ಕಿಶನ್ ಮತ್ತು ರುತುರಾಜ್ ಗಾಯಕ್ವಾಡ್ ಆರಂಭಿಕ ಆಟಗಾರರಾಗಿ ಕಣಕ್ಕಿಳಿಯಲಿದ್ದು ರೋಹಿತ್ ಶರ್ಮಾ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ ಎಂಬ ಊಹೆಗಳು ಹೆಚ್ಚಾಗಿ ನಡೆದಿದ್ದವು.

ಆದರೆ, ಯುವ ಕ್ರಿಕೆಟಿಗ ರುತುರಾಜ್ ಗಾಯಕ್ವಾಡ್ ಅವರನ್ನು ಈ ಪಂದ್ಯದಿಂದ ಕೈಬಿಡಲಾಗಿದ್ದು ಎಂದಿನಂತೆ ರೋಹಿತ್ ಶರ್ಮಾ ಮತ್ತು ಇಶಾನ್ ಕಿಶನ್ ಆರಂಭಿಕ ಆಟಗಾರರಾಗಿ ಪಂದ್ಯದಲ್ಲಿ ಕಣಕ್ಕಿಳಿದರು. ಕಳೆದ ವೆಸ್ಟ್ ಇಂಡೀಸ್ ವಿರುದ್ಧದ ಟಿ ಟ್ವೆಂಟಿ ಸರಣಿಯ ಅಂತಿಮ ಪಂದ್ಯದಲ್ಲಿ ಕಣಕ್ಕಿಳಿದಿದ್ದ ರುತುರಾಜ್ ಗಾಯಕ್ವಾಡ್ ಅವರನ್ನು ಇದೀಗ ದಿಢೀರನೇ ತಂಡದಿಂದ ಕೈಬಿಟ್ಟಿದ್ದು ಯಾಕೆ ಎಂಬ ಪ್ರಶ್ನೆ ಮೂಡಿತ್ತು. ಈ ಪ್ರಶ್ನೆಗೆ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯ ಮೂಲಕ ಉತ್ತರ ನೀಡಿರುವ ಬಿಸಿಸಿಐ ರುತುರಾಜ್ ಗಾಯಕ್ವಾಡ್ ಬಲಗೈನ ಮಣಿಕಟ್ಟಿನ ಗಾಯದ ಸಮಸ್ಯೆಗೆ ಒಳಗಾಗಿರುವುದರಿಂದ ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ ಎಂಬುದನ್ನು ತಿಳಿಸಿದೆ. ಹಾಗೂ ಈ ಪಂದ್ಯದಲ್ಲಿ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಮತ್ತು ಇಶಾನ್ ಕಿಶನ್ ಉತ್ತಮ ಆರಂಭವನ್ನು ನೀಡಿ 111 ರನ್‌ಗಳ ಜತೆಯಾಟವಾಡಿದರು. ರೋಹಿತ್ ಶರ್ಮಾ 44 ರನ್ ಗಳಿಸಿದರೆ, ಅಬ್ಬರಿಸಿದ ಇಶಾನ್ ಕಿಶನ್ 89 ರನ್ ಕಲೆ ಹಾಕಿದರು. ಇನ್ನುಳಿದಂತೆ ಶ್ರೇಯಸ್ ಅಯ್ಯರ್ ಅಜೇಯ 57 ಮತ್ತು ರವೀಂದ್ರ ಜಡೇಜಾ ಅಜೇಯ 3 ರನ್ ಗಳಿಸಿದರು. ಈ ಮೂಲಕ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 199 ರನ್‌ ಗಳಿಸಿತು.

ಭಾರತ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ದೀಪಕ್ ಹೂಡಾ, ವೆಂಕಟೇಶ್ ಅಯ್ಯರ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಹಾಲ್

ವಿರಾಟ್ ಗೆ ಬುದ್ದಿ ಹೇಳುವಂತೆ ಸಚಿನ್ ಗೆ ಮನವಿ ಮಾಡಿದ ಅಭಿಮಾನಿಗಳು | Oneindia Kannada

ಶ್ರೀಲಂಕಾ ಪ್ಲೇಯಿಂಗ್ ಇಲೆವೆನ್: ಪಾತುಮ್ ನಿಸ್ಸಾಂಕ, ಕಮಿಲ್ ಮಿಶ್ರಾ, ಚರಿತ್ ಅಸಲಂಕಾ, ದಿನೇಶ್ ಚಂಡಿಮಲ್ (ವಿಕೆಟ್ ಕೀಪರ್), ಜನಿತ್ ಲಿಯಾನಗೆ, ದಸುನ್ ಶನಕ (ನಾಯಕ), ಚಾಮಿಕ ಕರುಣಾರತ್ನೆ, ದುಷ್ಮಂತ ಚಮೀರ, ಪ್ರವೀಣ್ ಜಯವಿಕ್ರಮ, ಜೆಫ್ರಿ ವಾಂಡರ್ಸೆ, ಲಹಿರು ಕುಮಾರ

Story first published: Friday, February 25, 2022, 9:44 [IST]
Other articles published on Feb 25, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+