IND vs AFG: ಮೊದಲ ಟಿ20 ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ; ಟಿವಿ, ಲೈವ್ ಸ್ಟ್ರೀಮಿಂಗ್ ಮಾಹಿತಿ
2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಗೂ ಮುನ್ನ ಭಾರತ ತಂಡ ತನ್ನ ಕೊನೆಯ ಟಿ20 ಸರಣಿಯಲ್ಲಿ ಪ್ರವಾಸಿ ಅಫ್ಘಾನಿಸ್ತಾನ ತಂಡದ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿದೆ.
ಗುರುವಾರ, ಜನವರಿ 11ರಂದು ಮೊಹಾಲಿಯ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಮೊದಲ ಟಿ20 ಪಂದ್ಯ ಆಡುವ ಮೂಲಕ ಸರಣಿಗೆ ಚಾಲನೆ ಸಿಗಲಿದೆ.

ಇನ್ನು ಒಂದು ವರ್ಷಕ್ಕೂ ಹೆಚ್ಚು ಸಮಯದ ನಂತರ, ಟಿ20 ತಂಡಕ್ಕೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರಂತಹ ಅನುಭವಿ ಆಟಗಾರರ ಪುನರಾಗಮನವನ್ನು ಸೂಚಿಸುತ್ತದೆ.
ಆಸ್ಟ್ರೇಲಿಯಾದ ಅಡಿಲೇಡ್ ಓವಲ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ 2022ರ ಐಸಿಸಿ ಟಿ20 ವಿಶ್ವಕಪ್ ಎರಡನೇ ಸೆಮಿಫೈನಲ್ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇಬ್ಬರನ್ನೂ ಒಳಗೊಂಡ ಕೊನೆಯ ಟಿ20 ಪಂದ್ಯವಾಗಿದೆ. ಅಂದಿನಿಂದ ಟೀಮ್ ಇಂಡಿಯಾ ಸ್ಟಾರ್ ಜೋಡಿಯ ಅನುಪಸ್ಥಿತಿಯಲ್ಲಿ ಟಿ20 ಪಂದ್ಯ ಆಡುತ್ತಿದ್ದಾರೆ.
ಮತ್ತೊಂದೆಡೆ, ಅಫ್ಘಾನಿಸ್ತಾನ ತಂಡವು ಯುಎಇ ತಂಡದ ವಿರುದ್ಧ 2-1 ಅಂತರದ ಸರಣಿ ಗೆಲುವಿನಿಂದ ಉತ್ತಮವಾಗಿ ಕಾಣುತ್ತಿದೆ ಮತ್ತು ಭಾರತದಲ್ಲಿ ತಮ್ಮ ಗೆಲುವಿನ ಆವೇಗವನ್ನು ಮುಂದುವರಿಸಲು ಎದುರು ನೋಡುತ್ತಿದೆ. ಸದ್ಯಕ್ಕೆ ಹಂಗಾಮಿ ನಾಯಕ ಇಬ್ರಾಹಿಂ ಜದ್ರಾನ್ ಅಫ್ಘಾನಿಸ್ತಾನ ತಂಡವನ್ನು ಮುನ್ನಡೆಸಲಿದ್ದಾರೆ.
ಆಲ್‌ರೌಂಡರ್ ರಶೀದ್ ಖಾನ್ ಅವರನ್ನು ಸರಣಿಗಾಗಿ ಅಫ್ಘಾನಿಸ್ತಾನದ ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಆದರೆ, ಬೆನ್ನಿನ ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿರುವ ಕಾರಣ ಅವರು ಆಡುವ ಸಾಧ್ಯತೆ ಕಡಿಮೆ ಇದೆ.
ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ
ಭಾರತ vs ಅಫ್ಘಾನಿಸ್ತಾನ ಟಿ20 ಸರಣಿಯನ್ನು ಟಿವಿಯಲ್ಲಿ ಸ್ಪೋರ್ಟ್ಸ್ 18 ಚಾನೆಲ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಇನ್ನು JioCinema (ಜಿಯೋಸಿನಿಮಾ) ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮ್ ಮಾಡಲಾಗುತ್ತದೆ.
ಭಾರತ vs ಅಫ್ಘಾನಿಸ್ತಾನ ಟಿ20 ಸರಣಿಯ ವೇಳಾಪಟ್ಟಿ
ಜನವರಿ 11: ಮೊದಲ ಟಿ20 ಪಂದ್ಯ - ಪಂಜಾಬ್ ಕ್ರಿಕೆಟ್ ಸಂಸ್ಥೆ ಐಎಸ್ ಬಿಂದ್ರಾ ಸ್ಟೇಡಿಯಂ, ಮೊಹಾಲಿ
ಜನವರಿ 14: ಎರಡನೇ ಟಿ20 ಪಂದ್ಯ - ಹೋಳ್ಕರ್ ಕ್ರಿಕೆಟ್ ಸ್ಟೇಡಿಯಂ, ಇಂದೋರ್
ಜನವರಿ 17: ಮೂರನೇ ಟಿ20 ಪಂದ್ಯ - ಎಂ ಚಿನ್ನಸ್ವಾಮಿ ಸ್ಟೇಡಿಯಂ, ಬೆಂಗಳೂರು
ಅಫ್ಘಾನಿಸ್ತಾನ ವಿರುದ್ಧ ಭಾರತದ ಸಂಭಾವ್ಯ ಆಡುವ 11ರ ಬಳಗ
ರೋಹಿತ್ ಶರ್ಮಾ(ನಾಯಕ), ಯಶಸ್ವಿ ಜೈಸ್ವಾಲ್/ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್/ಕುಲದೀಪ್ ಯಾದವ್, ಅವೇಶ್ ಖಾನ್, ಅರ್ಶ್‌ದೀಪ್ ಸಿಂಗ್, ಮುಖೇಶ್ ಕುಮಾರ್.
ಅಫ್ಘಾನಿಸ್ತಾನ ಪೂರ್ಣ ತಂಡ
ಇಬ್ರಾಹಿಂ ಜದ್ರಾನ್ (ನಾಯಕ), ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ಹಜರತುಲ್ಲಾ ಝಜೈ, ರಹಮತ್ ಷಾ, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಕರೀಂ ಜನತ್, ಅಜ್ಮತುಲ್ಲಾ ಒಮರ್ಜಾಯ್, ಶರಫುದ್ದೀನ್ ಅಶ್ರಫ್, ಮುಜೀಬ್-ಉರ್-ರಹಮಾನ್, ಫಝಲ್ಹಕ್ ಫಾರೂಕಿ, ಫರೀದ್ ಅಹ್ಮದ್, ನವೀನ್-ಉಲ್-ಹಕ್, ನೂರ್ ಅಹ್ಮದ್, ಮೊಹಮ್ಮದ್ ಸಲೀಮ್, ಖೈಸ್ ಅಹ್ಮದ್, ಗುಲ್ಬದಿನ್ ನೈಬ್, ರಶೀದ್ ಖಾನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications