For Quick Alerts
ALLOW NOTIFICATIONS  
For Daily Alerts
 

IND vs AFG: ಟಿ20 ಕ್ರಿಕೆಟ್‌ನಲ್ಲಿ ವಿಶೇಷ ದಾಖಲೆ ಬರೆದ ಅಕ್ಷರ್ ಪಟೇಲ್

ಭಾನುವಾರ, ಜನವರಿ 14ರಂದು ಇಂದೋರ್‌ನಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ ಪ್ರವಾಸಿ ಅಫ್ಘಾನಿಸ್ತಾನ ತಂಡದ ವಿರುದ್ಧ ಭಾರತ ತಂಡ 6 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸುವ ಮೂಲಕ, ಸರಣಿಯನ್ನು 2-0 ಅಂತರದಲ್ಲಿ ವಶಪಡಿಸಿಕೊಂಡಿತು.

ಇದೇ ವೇಳೆ ಅಫ್ಘಾನಿಸ್ತಾನ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತದ ಸ್ಟಾರ್ ಸ್ಪಿನ್ನರ್ ಅಕ್ಷರ್ ಪಟೇಲ್ ಭರ್ಜರಿ ಪ್ರದರ್ಶನ ನೀಡಿದರು. ಈ ಪಂದ್ಯದಲ್ಲಿ ಅಕ್ಷರ್ ಪಟೇಲ್ 4 ಓವರ್​ಗಳಲ್ಲಿ 17 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದರು.

IND vs AFG: Axar Patel Set the Milestone of 200 Wickets in T20 Cricket

ಈ ಎರಡು ವಿಕೆಟ್​ಗಳೊಂದಿಗೆ ಅಕ್ಷರ್ ಪಟೇಲ್ ಟಿ20 ಕ್ರಿಕೆಟ್​ನಲ್ಲಿ 200 ವಿಕೆಟ್​ಗಳ ಮೈಲಿಗಲ್ಲು ಸ್ಥಾಪಿಸಿದರು. ಒಟ್ಟು 230 ಟಿ20 ಇನಿಂಗ್ಸ್​ಗಳ ಮೂಲಕ ಎಡಗೈ ಸ್ಪಿನ್ನರ್ ಈ ದಾಖಲೆ ಬರೆದರು. ಈ ಸಾಧನೆ ಮಾಡಿದ ಭಾರತದ 11ನೇ ಬೌಲರ್​ ಎನಿಸಿಕೊಂಡರು.

ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಯುಜ್ವೇಂದ್ರ ಚಹಾಲ್ 287 ಟಿ20 ಇನಿಂಗ್ಸ್​ಗಳಲ್ಲಿ ಸ್ಪಿನ್ ಮೋಡಿ ಮಾಡಿ 336 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡದ ಪರ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು.

ಇನ್ನು ದ್ವಿತೀಯ ಸ್ಥಾನದಲ್ಲಿ ಪಿಯೂಷ್ ಚಾವ್ಲಾ ಇದ್ದಾರೆ. ಒಟ್ಟು 283 ಟಿ20 ಇನಿಂಗ್ಸ್ ಆಡಿದ್ದು, 302 ವಿಕೆಟ್​ಗಳನ್ನು ಕಬಳಿಸಿ ಭಾರತದ 2ನೇ ಯಶಸ್ವಿ ಟಿ20 ಸ್ಪಿನ್ನರ್ ಎನಿಸಿಕೊಂಡಿದ್ದಾರೆ.

ಹಾಗೆಯೇ ರವಿಚಂದ್ರನ್ ಅಶ್ವಿನ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. 306 ಟಿ20 ಇನಿಂಗ್ಸ್​ಗಳಿಂದ ಒಟ್ಟು 302 ವಿಕೆಟ್ ಕಬಳಿಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ 300ಕ್ಕಿಂತ ಅಧಿಕ ವಿಕೆಟ್​ ಕಬಳಿಸಿದ 3ನೇ ಭಾರತೀಯ ಎನಿಸಿಕೊಂಡಿದ್ದಾರೆ.

ಯುಜ್ವೇಂದ್ರ ಚಹಾಲ್, ಪಿಯೂಷ್ ಚಾವ್ಲಾ ಹಾಗೂ ರವಿಚಂದ್ರನ್ ಅಶ್ವಿನ್ ಅವರನ್ನು ಹೊರತುಪಡಿಸಿ ಭಾರತದ ಯಾವುದೇ ಬೌಲರ್ ಟಿ20 ಕ್ರಿಕೆಟ್​ನಲ್ಲಿ 300 ವಿಕೆಟ್​ಗಳನ್ನು ಕಬಳಿಸಿಲ್ಲ ಎಂಬುದು ಗಮನಾರ್ಹ.

ಇನ್ನು ಭಾರತೀಯ ಬೌಲರ್‌ಗಳ ಸಾಹಸದಿಂದಾಗಿ ಭಾರತ ತಂಡವು ಅಫ್ಘಾನಿಸ್ತಾನ ತಂಡವನ್ನು ನಿಗದಿತ 20 ಓವರ್​ಗಳಲ್ಲಿ 172 ರನ್​ಗಳಿಗೆ ಆಲೌಟ್ ಮಾಡಿತು.

173 ರನ್​ಗಳ ಗುರಿಯನ್ನು ಬೆನ್ನಟ್ಟಿದ ಭಾರತ ತಂಡದ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (68) ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಶಿವಂ ದುಬೆ (63) ಅರ್ಧಶತಕ ಬಾರಿಸಿ ಮಿಂಚಿದರು.

2022ರ ನವೆಂಬರ್‌ ನಂತರ ಮೊದಲ ಟಿ20 ಪಂದ್ಯವನ್ನು ಆಡಿದ ವಿರಾಟ್ ಕೊಹ್ಲಿ ಅದ್ಭುತ ಬೌಂಡರಿ ಬಾರಿಸುವ ಮೂಲಕ ಪ್ರಾರಂಭಿಸಿದರು.

ಎಂಸಿಜಿನಲ್ಲಿ 2022ರ ಟಿ20 ವಿಶ್ವಕಪ್‌ನಲ್ಲಿ ಹ್ಯಾರಿಸ್ ರೌಫ್ ವಿರುದ್ಧ ಆಡಿದ ಪ್ರಸಿದ್ಧ ಶಾಟ್ ಅನ್ನು ಮರುಸೃಷ್ಟಿಸಿದ ವಿರಾಟ್ ಕೊಹ್ಲಿ, ನವೀನ್-ಉಲ್-ಹಕ್ ಎಸೆತವನ್ನು ಬೌಲರ್‌ನ ತಲೆಯ ಮೇಲೆ ಬೌಂಡರಿಗೆ ಅಟ್ಟಿದರು.

Story first published: Monday, January 15, 2024, 9:44 [IST]
Other articles published on Jan 15, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+