For Quick Alerts
ALLOW NOTIFICATIONS  
For Daily Alerts
 

IND vs AFG: ಅಪ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಭಾರತ ತಂಡ; ಕೊಹ್ಲಿ, ರೋಹಿತ್‌ಗೆ ಬುಲಾವ್ ಸಾಧ್ಯತೆ!

ಭಾರತ ಕ್ರಿಕೆಟ್ ತಂಡ ಬರೋಬ್ಬರಿ ಒಂದು ತಿಂಗಳ ಕಾಲ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿತ್ತು. ಇತ್ತೀಚಿಗೆ ಉಭಯ ತಂಡಗಳ ನಡುವಿನ ಟೆಸ್ಟ್ ಸರಣಿಯ ಮುಕ್ತಾಯದ ನಂತರ, ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಸಜ್ಜಾಗುತ್ತಿದೆ.

ತಂಡವನ್ನು ಅಂತಿಮಗೊಳಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆಯ್ಕೆ ಸಮಿತಿ ಮತ್ತು ತಂಡದ ಮ್ಯಾನೇಜ್‌ಮೆಂಟ್‌ ಸ್ವಲ್ಪ ಬಿಡುವಿನ ಸಮಯವನ್ನು ತೆಗೆದುಕೊಳ್ಳುತ್ತದೆ.

IND vs AFG: India Squad For T20 Series Against Afghanistan; Kohli, Rohit likely to Select

ಅಫ್ಘಾನಿಸ್ತಾನ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವು ಜನವರಿ 11ರಂದು ಪ್ರಾರಂಭವಾಗಲಿದ್ದು, ಬಿಸಿಸಿಐ ಆಯ್ಕೆ ಸಮಿತಿಯು ಶುಕ್ರವಾರ ಸಭೆ ಸೇರಿ ತಂಡವನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.

ಒಂದು ವರ್ಷದ ನಂತರ ಮೊದಲ ಬಾರಿಗೆ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಅನುಭವಿ ಜೋಡಿಯು ಚುಟುಕು ಸ್ವರೂಪಕ್ಕೆ ಮರಳಬಹುದು. ಇಬ್ಬರು ಆಯ್ಕೆಗೆ ಲಭ್ಯವಾಗಿರುವಂತೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಯ ಪ್ರಕಾರ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇಬ್ಬರೂ ಮುಂದಿನ ವರ್ಷದ ಟಿ20 ವಿಶ್ವಕಪ್‌ನ ಮೇಲೆ ಕಣ್ಣಿಟ್ಟು ಕಡಿಮೆ ಸ್ವರೂಪಕ್ಕೆ ಮರಳಲು ಉತ್ಸುಕರಾಗಿದ್ದಾರೆ.

2022ರ ಟಿ20 ವಿಶ್ವಕಪ್‌ನಲ್ಲಿ ಕೊನೆಯ ಬಾರಿಗೆ ಟಿ20 ಅಂತಾರಾಷ್ಟ್ರೀಯ ಆಟದಲ್ಲಿ ಕಾಣಿಸಿಕೊಂಡಿದ್ದು, ಅಂದಿನಿಂದ ಟೆಸ್ಟ್ ಮತ್ತು ಏಕದಿನ ಪಂದ್ಯಗಳನ್ನು ಮಾತ್ರ ಆಡುತ್ತಿದ್ದಾರೆ.

ಈ ಅನುಭವಿಗಳ ಅನುಪಸ್ಥಿತಿಯ ಕಾರಣದಿಂದ ಬಿಸಿಸಿಐ ಆಯ್ಕೆ ಸಮಿತಿಯು ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್ ಮತ್ತು ಇಶಾನ್ ಕಿಶನ್ ಅವರಂತಹ ಅತ್ಯುತ್ತಮ ಪ್ರತಿಭೆಗಳನ್ನು ಹೊರತರಲು ಸಹಾಯ ಮಾಡಿತು.

ಈ ವರ್ಷದ ಮಧ್ಯದಲ್ಲಿ ಐಸಿಸಿ ಟಿ20 ವಿಶ್ವಕಪ್‌ಗೆ ಮೊದಲು ಚುಟುಕು ಸ್ವರೂಪದಲ್ಲಿ ಭಾರತದ ಅಂತಿಮ ಟಿ20 ನಿಯೋಜನೆಯಲ್ಲಿ ವಿಷಯಗಳು ಬದಲಾಗುವ ಸಾಧ್ಯತೆ ಇದೆ.

ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ

ವೇಗಿಗಳಾದ ಮೊಹಮ್ಮದ್ ಸಿರಾಜ್ ಮತ್ತು ಜಸ್ಪ್ರೀತ್ ಬುಮ್ರಾ ಅವರ ವೇಗದ ಜೋಡಿಯು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕೇಂದ್ರಬಿಂದುವಾಗಿದ್ದರು. ಹೀಗಾಗಿ ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ ಎಂದು ವರದಿಗಳು ಹೇಳುತ್ತದೆ.

ಮತ್ತೊಬ್ಬ ಅನುಭವಿ ವೇಗಿ ಮೊಹಮ್ಮದ್ ಶಮಿ ಲಭ್ಯತೆಯ ಬಗ್ಗೆ ಪ್ರಶ್ನಾರ್ಥಕ ಚಿಹ್ನೆ ಉಳಿದಿವೆ. ಅವರು ದಕ್ಷಿಣ ಆಫ್ರಿಕಾದಲ್ಲಿ ಯಾವುದೇ ಎರಡು ಟೆಸ್ಟ್‌ ಪಂದ್ಯಗಳಲ್ಲಿ ಕಾಣಿಸಿಕೊಳ್ಳಲಿಲ್ಲ.

ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್ ಗೈರು ಸಾಧ್ಯತೆ

ಗಾಯದ ಸಮಸ್ಯೆಯಿಂದಾಗಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ನಂ.1 ಟಿ20 ಬ್ಯಾಟರ್ ಸೂರ್ಯಕುಮಾರ್ ಯಾದವ್ ಜೋಡಿ ಅಫ್ಘಾನಿಸ್ತಾನ ವಿರುದ್ಧದ ಸರಣಿಗೆ ಅಲಭ್ಯವಾಗುವ ಲಕ್ಷಣಗಳು ಕಾಣಿಸಿವೆ.

2023ರ ಏಕದಿನ ವಿಶ್ವಕಪ್‌ನಿಂದ ಹಾರ್ದಿಕ್ ಪಾಂಡ್ಯ ಕ್ರಿಕೆಟ್‌ನಿಂದ ಹೊರಗುಳಿದಿದ್ದಾರೆ ಮತ್ತು ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಸೂರ್ಯಕುಮಾರ್ ಯಾದವ್ ಗಾಯಗೊಂಡಿದ್ದರು. ಮುಂದಿನ ತಿಂಗಳವರೆಗೆ ಅವರು ಮತ್ತೆ ಆಟಕ್ಕೆ ಮರಳುವ ನಿರೀಕ್ಷೆಯಿಲ್ಲ.

ಅಫ್ಘಾನಿಸ್ತಾನ ವಿರುದ್ಧದ ಸರಣಿಯನ್ನು ಹೊರತುಪಡಿಸಿ, ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಎರಡು ಟೆಸ್ಟ್‌ ಪಂದ್ಯಗಳಿಗೆ ಬಿಸಿಸಿಐ ತಂಡವನ್ನು ಪ್ರಕಟಿಸುವ ಸಾಧ್ಯತೆಯಿದೆ.

Story first published: Friday, January 5, 2024, 14:10 [IST]
Other articles published on Jan 5, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+