Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs AFG ODI: ಏಕದಿನ ಸರಣಿಯಿಂದ ವಿರಾಟ್‌ ಕೊಹ್ಲಿ ಔಟ್‌

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಸರಣಿ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಏಕೈಕ ಟೆಸ್ಟ್‌ ಪಂದ್ಯ ನ್ಯೂ ಚಂಡೀಗಢದಲ್ಲಿ ನಡೆಯಲಿದೆ. ಈ ಟೆಸ್ಟ್‌ ಪಂದ್ಯದ ಬಳಿಕ ಉಭಯ ದೇಶಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಈ ಸರಣಿಗೆ ಈಗಾಗಲೇ ಬಿಸಿಸಿಐ ತಂಡವನ್ನು ಪ್ರಕಟಿಸಿದೆ. ಈಗ ಈ ಸರಣಿಗೆ ಸಂಬಂಧಿಸಿದಂತೆ ದೊಡ್ಡ ಸುದ್ದಿಯೊಂದು ಹೊರ ಬಿದ್ದಿದೆ. ಸೂಪರ್ ಸ್ಟಾರ್ ಆಟಗಾರ ವಿರಾಟ್‌ ಕೊಹ್ಲಿ ಮಂಡಿರಜ್ಜು ಗಾಯದಿಂದಾಗಿ ಸರಣಿಯಿಂದ ಹೊರಗುಳಿದಿದ್ದಾರೆ ಎಂದು ತಿಳಿದುಬಂದಿದೆ.

ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಚಾಂಪಿಯನ್ ಪಟ್ಟವನ್ನು ಅಲಂಕರಿಸುವಲ್ಲಿ ವಿರಾಟ್‌ ದೊಡ್ಡ ಕೊಡುಗೆ ನೀಡಿದ್ದಾರೆ. ಇವರ ಆಟದ ಧಾಟಿ ಅಭಿಮಾನಿಗಳು ಹುಚ್ಚೆದ್ದು ಕುಣಿಯುವಂತೆ ಮಾಡಿತ್ತು. ಮತ್ತೆ ವಿರಾಟ್‌ ಕೊಹ್ಲಿ ಕಣಕ್ಕೆ ಇಳಿಯುವುದು ಯಾವಾಗ ಎಂಬ ಪ್ರಶ್ನೆಗಳು ಸಹ ಅಭಿಮಾನಿಗಳಲ್ಲಿ ಮೂಡಿದ್ದವು. ಈಗ ಅಭಿಮಾನಿಗಳ ಕಾಯುವಿಕೆ ಇನ್ನು ಮುಂದೂಡಲ್ಪಟ್ಟಿದೆ. ವಿರಾಟ್‌ ಕೊಹ್ಲಿ, ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಆಡುತ್ತಾರೆ ಎಂದು ಭಾವಿಸಲಾಗಿತ್ತು. ಆದರೆ ಗಾಯಕ್ಕೆ ತುತ್ತಾಗಿದ್ದು, ತವರಿನಲ್ಲಿ ನಡೆಯುವ ಏಕದಿನ ಪಂದ್ಯಗಳಿಂದ ದೂರ ಉಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

IND vs AFG ODI

ವಿರಾಟ್ ಕೊಹ್ಲಿ ಮಂಡಿರಜ್ಜು ಗಾಯದಿಂದಾಗಿ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಅವರ ಅನುಪಸ್ಥಿತಿಯು ನಿಶ್ಚಿತವಾಗಿ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ವಿರಾಟ್ ಕೊಹ್ಲಿ ಟೀಮ್ ಇಂಡಿಯಾದ ಪರ ಈಗ ಬರೀ ಏಕದಿನ ಕ್ರಿಕೆಟ್‌ನಲ್ಲಿ ಮಾತ್ರ ಆಡುತ್ತಿದ್ದಾರೆ. ಹೀಗಾಗಿ ವಿಶ್ವದ ಅಪಾರ ಅಭಿಮಾನಿಗಳು ಇವರ ಆಟವನ್ನು ಕಣ್ಣು ತುಂಬಿಕೊಳ್ಳಲು ಕಾತುರರಾಗಿದ್ದಾರೆ. ಆದರೆ ಅಫ್ಘಾನಿಸ್ತಾನ ವಿರುದ್ಧ ಕಣಕ್ಕೆ ಇಳಿಯದೇ ಇರುವುದು ತಂಡಕ್ಕೆ ದೊಡ್ಡ ಪೆಟ್ಟು ಬಿದ್ದಿದೆ. ಆದರೆ ಬಿಸಿಸಿಐ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿಲ್ಲ. ಅಲ್ಲದೆ ಬದಲಿ ಆಟಗಾರರನ್ನು ಸಹ ಘೋಷಿಸಿಲ್ಲ.

ವೃಂದಾವನಕ್ಕೆ ಭೇಟಿ ನೀಡಿದ್ದ ಕೊಹ್ಲಿ, ಅನುಷ್ಕಾ

ಐಪಿಎಲ್ ಮುಗಿದ ನಂತರ, ಕೊಹ್ಲಿ ನೇರವಾಗಿ ಅಹಮದಾಬಾದ್‌ನಿಂದ ಆಗ್ರಾಕ್ಕೆ ಮತ್ತು ನಂತರ ವೃಂದಾವನಕ್ಕೆ ವಿಮಾನದಲ್ಲಿ ಹೋದರು. ಅವರೊಂದಿಗೆ ಅವರ ಪತ್ನಿ ನಟಿ ಅನುಷ್ಕಾ ಶರ್ಮಾ ಇದ್ದರು ಮತ್ತು ಇಬ್ಬರೂ ಪ್ರೇಮಾನಂದ ಮಹಾರಾಜ್ ಅವರ ಆಶೀರ್ವಾದ ಪಡೆದರು. ಈ ಭೇಟಿಯ ವಿಡಿಯೋಗಳು ಸಾಮಾಜಿಕ ತಾಣದಲ್ಲಿ ಸಖತ್ ಸದ್ದು ಮಾಡಿದ್ದವು. ಕೊಹ್ಲಿ ಹಾಗೂ ಅನುಷ್ಕಾ ಯಾರು ಅವರನ್ನು ಗುರುತಿಸದಂತೆ ಮುಖವಾಡ ಧರಿಸಿ ಆಶ್ರಮಕ್ಕೆ ಬಂದು ದರ್ಶನ ಪಡೆದಿದ್ದರು.

ಅಫ್ಘಾನಿಸ್ತಾನ ವಿರುದ್ಧದ ಸರಣಿಗೆ ಭಾರತ ಏಕದಿನ ತಂಡ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಅರ್ಶ್‌ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಗುರುನೂರ್ ಸಿಂಗ್, ಹರ್ಷ ದುಬೆ.

Story first published: Thursday, June 4, 2026, 16:09 [IST]
Other articles published on Jun 4, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+