Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ind vs Afg: ಈ ಮುಖಾಮುಖಿಗಾಗಿ ಕಾಯುತ್ತಿದ್ದಾರಂತೆ ರಾಬಿನ್ ಉತ್ತಪ್ಪ!

ಭಾರತ ಹಾಗೂ ಅಫ್ಘಾನಿಸ್ತಾನ ತಂಡಗಳು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದೆ. ಈ ಪಂದ್ಯದ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾದ ಮಾಜಿ ಆಟಗಾರ ಕನ್ನಡಿಗ ರಾಬಿನ್ ಉತ್ತಪ್ಪ ಪ್ರತಿಕ್ರಿಯೆ ನೀಡಿದ್ದು ಪಂದ ಮೇಲೆ ತಮ್ಮ ಕುತೂಹಲವನ್ನು ಹಂಚಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಅನುಭವಿ ಆಟಗಾರ ವಿರಾಟ್ ಕೊಹ್ಲಿ ಹಾಗೂ ಅಫ್ಘಾನಿಸ್ತಾನದ ವೇಗಿ ನವೀನ್ ಉಲ್ ಹಕ್ ಮುಖಾಮುಖಿಯಾಗುವುದನ್ನು ಕಾಯುತ್ತಿದ್ದೇನೆ ಎಂದಿದ್ದಾರೆ ರಾಬಿನ್ ಉತ್ತಪ್ಪ.

ಈ ಪಂದ್ಯಕ್ಕೂ ಮುನ್ನ ಮಾತನಾಡಿದ ರಾಬಿನ್ ಉತ್ತಪ್ಪ ಭಾರತ ಹಾಗೂ ಅಫ್ಘಾನಿಸ್ತಾನ ತಂಡಗಳ ಮುಖಾಮುಖಿಯಲ್ಲಿ ಯಾವ ಪೈಪೋಟಿಯನ್ನು ನೋಡಲು ಕಾಯುತ್ತಿದ್ದೀರಿ ಎಂಬ ಪ್ರಶ್ನೆಗೆ ಉತ್ತಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ರೋಹಿತ್ ಶರ್ಮಾ ಮತ್ತು ಇಶಾನ್ ಕಿಶನ್ ಅವರಿಗೆ ಮುಜೀಬ್ ಉರ್ ರೆಹಮಾನ್ ಬೌಲಿಂಗ್ ಕುತೂಹಲಕಾರಿಯಾಗಿರಲಿದೆ. ಇನ್ನು ಭಾರತದ ಅಗ್ರ ಕ್ರಮಾಂಕದ ವಿರುದ್ಧ ಫಜಲ್ಹಕ್ ಫಾರೂಕಿ ಹೇಗೆ ಬೌಲಿಂಗ್ ನಡೆಸುತ್ತಾರೆ ಎನ್ನುವುದು ಕೂಡ ಮುಖ್ಯ. ಇನ್ನು ನವೀನ್-ಉಲ್-ಹಕ್ vs ವಿರಾಟ್ ಕೊಹ್ಲಿ ಕಾದಾಟ ಕುತೂಹಲಕಾರಿಯಾಗಿರಲಿದೆ ಎಂದಿದ್ದಾರೆ ರಾಬಿನ್ ಉತ್ತಪ್ಪ.

IND vs AFG: Robin Uthappa said battle Naveen-ul-Haq and Virat Kohli will be interesting

"ಕೊಹ್ಲಿ ಹಾಗೂ ನವೀನ್ ಉಲ್ ಹಕ್ ಮಧ್ಯೆ ಇತಿಹಾಸವಿದೆ. ಅವರು ಪರಸ್ಪರ ವಿರುದ್ಧವಾಗಿ ಮುಖಾಮುಖಿಯಾಗುವುದನ್ನು ನೋಡುವುದು ರೋಚಕತೆ ನೀಡಲಿದೆ. ಅಲ್ಲದೆ ರಶೀದ್ ಖಾನ್ ವಿರುದ್ಧ ಕೆಎಲ್ ರಾಹುಲ್ ಆಡುವುದನ್ನು ಕೂಡದ ನೋಡಲು ಬಯಸುತ್ತೇನೆ" ಎಂದು ಉತ್ತಪ್ಪ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡುತ್ತಾ ಹೇಳಿದರು.

ಕಳೆದ ಐಪಿಎಲ್ ಆವೃತ್ತಿಯಲ್ಲಿ ಆರ್‌ಸಿಬಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ನವೀನ್ ಉಲ್ ಹಕ್ ಮಧ್ಯೆ ಈ ಮಾತಿನ ಚಕಮಕಿ ನಡೆದಿತ್ತು. ಪಂದ್ಯದ ಮುಕ್ತಾಯದ ಬಳಿಕ ಶೇಕ್ ಹ್ಯಾಂಡ್ ಸಂದರ್ಭದಲ್ಲಿ ಇದು ಉಲ್ಬಣಿಸಿತ್ತು. ಇದೇ ವಿಚಾರವಾಗಿ ಎಲ್‌ಎಸ್‌ಜಿ ಮೆಂಟರ್ ಗೌತಮ್ ಗಂಭೀರ್ ಕೂಡ ವಿರಾಟ್ ಕೊಹ್ಲಿ ಜೊತೆಗೆ ಮಾತಿನ ಚಕಮಕಿಗೆ ಇಳಿಯುವ ಮೂಲಕ ದೊಡ್ಡ ಸುದ್ದಿಯಾಗಿತ್ತು. ಈ ಘಟನೆಯ ನಂತರ ನವೀನ್ ಉಲ್ ಹಕ್ ಸಾಮಾಜಿಕ ಜಾಲತಾಣದಲ್ಲಿ ಕೊಹ್ಲಿಯನ್ನು ಕೆಣಕುವಂಥಾ ಕೆಲ ಪೋಸ್ಟ್‌ಗಳನ್ನು ಮಾಡಿ ಮತ್ತಷ್ಟು ಅಭಿಮಾಣಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಹೀಗಾಗಿ ನವೀನ್ ಉಲ್ ಹಕ್‌ಗೆ ಭಾರತದಲ್ಲಿ ಹೋದಕ್ಕೆಲ್ಲಾ 'ಕೊಹ್ಲಿ' ಘೋಷಣೆಯ ಸ್ವಾಗತಗಳೇ ದೊರೆಯುತ್ತಿದೆ.

ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಎಲ್ಲಾ ವಿಭಾಗದಲ್ಲಿಯೂ ಅದ್ಭುತವಾದ ಪ್ರದರ್ಶನ ನೀಡಿ ಭರ್ಜರಿ ಗೆಲುವು ಸಾಧಿಸಿದೆ. ಬ್ಯಾಟಿಂಗ್‌ನಲ್ಲಿ ಆರಂಭದಲ್ಲಿ ಭಾರೀ ಹಿನ್ನಡೆ ಅನುಭವಿಸಿದ್ದರೂ ಬಳಿಕ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಅವರ ಅಮೋಘ ಪ್ರದರ್ಶನದಿಂದಾಗಿ ಭಾರತ ಬರೊಬ್ಬರಿ 6 ವಿಕೆಟ್‌ಗಳ ಅಂತರದಿಂದ ಗೆಲುವು ಸಾಧಿಸಲು ಕಾರಣವಾಯಿತು. ಈ ಪ್ರದರ್ಶನ ತಂಡದ ಆತ್ಮವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ. ಹೀಗಾಗಿ ಅಫ್ಘಾನಿಸ್ತಾನ ಭಾರತ ತಂಡದಿಂದ ಕಠಿಣ ಸವಾಲನ್ನು ಎದುರಿಸುವುದು ನಿಶ್ಚಿತ.

ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಸೂರ್ಯಕುಮಾರ್ ಯಾದವ್, ಶುಭಮನ್ ಗಿಲ್, ಶಾರ್ದೂಲ್ ಠಾಕೂರ್.

ಅಫ್ಘಾನಿಸ್ತಾನ: ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಜದ್ರಾನ್, ರಿಯಾಜ್ ಹಸನ್, ರಹಮತ್ ಶಾ, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್, ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ ರೆಹಮಾನ್, ನೂರ್ ಅಹ್ಮದ್, ಫಜಲ್ಹಕ್ ಫಾರೂಕಿ, ಅಬ್ದುಲ್ ರಹಮಾನ್, ನವೀನ್ ಉಲ್ ಹಕ್.

Story first published: Wednesday, October 11, 2023, 12:52 [IST]
Other articles published on Oct 11, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+