For Quick Alerts
ALLOW NOTIFICATIONS  
For Daily Alerts
 

IND vs AFG: ಟಿ20 ಕ್ರಿಕೆಟ್‌ ಇತಿಹಾಸದಲ್ಲಿ ಎಂಎಸ್ ಧೋನಿ ದಾಖಲೆ ಸರಿಗಟ್ಟಿದ ರೋಹಿತ್ ಶರ್ಮಾ

ಭಾನುವಾರ, ಜನವರಿ 14ರಂದು ಇಂದೋರ್‌ನ ಹೋಳ್ಕರ್ ಸ್ಟೇಡಿಯಂನಲ್ಲಿ ಮುಕ್ತಾಯಗೊಂಡ ಅಫ್ಘಾನಿಸ್ತಾನ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡವು ಆರು ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು. ಅಲ್ಲದೆ, ಸರಣಿಯನ್ನು ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ 2-0 ಅಂತರದಲ್ಲಿ ವಶಪಡಿಸಿಕೊಂಡಿತು.

ಇದೇ ವೇಳೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅಫ್ಘಾನಿಸ್ತಾನ ವಿರುದ್ಧದ ಗೆಲುವಿನ ನಂತರ ದಾಖಲೆ ಪುಸ್ತಕಗಳಲ್ಲಿ ತಮ್ಮ ಹೆಸರನ್ನು ಬರೆದುಕೊಂಡರು. ಏಕೆಂದರೆ, ಚುಟುಕು ಸ್ವರೂಪದಲ್ಲಿ ಜಂಟಿ-ಅತ್ಯಂತ ಯಶಸ್ವಿ ಭಾರತೀಯ ನಾಯಕರೆನಿಸಿದರು.

IND vs AFG: Rohit Sharma Equals MS Dhonis Record As Captan in T20 Cricket

ಗಮನಾರ್ಹವಾಗಿ, ರೋಹಿತ್ ಶರ್ಮಾ ಟೀಮ್ ಇಂಡಿಯಾ ನಾಯಕರಾಗಿ ತಮ್ಮ 53ನೇ ಟಿ20 ಪಂದ್ಯದಲ್ಲಿ ತಮ್ಮ 41ನೇ ಗೆಲುವನ್ನು ದಾಖಲಿಸಿದರು. ಇದಕ್ಕೂ ಮುನ್ನ 72 ಪಂದ್ಯಗಳಿಂದ 41 ಗೆಲುವುಗಳನ್ನು ಹೊಂದಿರುವ ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯನ್ನು ಸಮಬಲಗೊಳಿಸಿದರು.

2017ರಲ್ಲಿ ಶ್ರೀಲಂಕಾ ವಿರುದ್ಧದ ಸ್ವದೇಶಿ ಸರಣಿಯಲ್ಲಿ ರೋಹಿತ್ ಶರ್ಮಾ ಮೊದಲ ಬಾರಿಗೆ ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದರು. ನಾಯಕನಾಗಿ ತಮ್ಮ ಎರಡನೇ ಟಿ20 ಪಂದ್ಯದಲ್ಲಿ 36 ವರ್ಷದ ಅನುಭವಿ ಕ್ರಿಕೆಟಿಗ ಕೇವಲ 35 ಎಸೆತಗಳಲ್ಲಿ ಹೆಗ್ಗುರುತನ್ನು ತಲುಪುವ ಮೂಲಕ ಟಿ20 ಸ್ವರೂಪದಲ್ಲಿ ಅಂದಿನ ವೇಗದ ಶತಕವನ್ನು ಗಳಿಸಿದರು.

IND vs AFG: Rohit Sharma Equals MS Dhonis Record As Captan in T20 Cricket

ರೋಹಿತ್ ಶರ್ಮಾ 2018ರ ಮಾರ್ಚ್‌ನಲ್ಲಿ ಶ್ರೀಲಂಕಾ ಮತ್ತು ಬಾಂಗ್ಲಾದೇಶ ವಿರುದ್ಧದ ಟಿ20 ತ್ರಿಕೋನ ಸರಣಿಯಲ್ಲಿ ಭಾರತದ ಗೆಲುವಿಗೆ ಕಾರಣರಾದರು.

ನಾಗ್ಪುರ ಮೂಲದ ಕ್ರಿಕೆಟಿಗ ರೋಹಿತ್ ಶರ್ಮಾ 2022ರ ಕೊನೆಯ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದರು. ಈ ವೇಳೆ ಎರಡನೇ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಹತ್ತು ವಿಕೆಟ್‌ಗಳ ಹೀನಾಯ ಸೋಲಿನ ನಂತರ ಭಾರತ ತಂಡ ಟೂರ್ನಿಯಿಂದ ಹೊರಬಿತ್ತು.

ಜೂನ್ 1ರಿಂದ ವೆಸ್ಟ್ ಇಂಡೀಸ್ ಮತ್ತು ಯುಎಸ್ಎನಲ್ಲಿ ನಡೆಯಲಿರುವ ಮುಂಬರುವ 2024ರ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡದ ನಾಯಕತ್ವ ವಹಿಸಲು ರೋಹಿತ್ ಶರ್ಮಾ ಮತ್ತೊಮ್ಮೆ ಮುಂಚೂಣಿಯಲ್ಲಿದ್ದಾರೆ.

36 ವರ್ಷದ ರೋಹಿತ್ ಶರ್ಮಾ ಅಫ್ಘಾನಿಸ್ತಾನ ವಿರುದ್ಧದ ಎರಡನೇ ಪಂದ್ಯದಲ್ಲಿ 150 ಟಿ20 ಪಂದ್ಯಗಳನ್ನು ಆಡಿದ ಮೊದಲ ಪುರುಷ ಕ್ರಿಕೆಟಿಗರೆನಿಸದರು. ಆದಾಗ್ಯೂದರೆ, ಸರಣಿಯ ಎರಡೂ ಪಂದ್ಯಗಳಲ್ಲೂ ಸತತ ಡಕ್‌ಗೆ ಔಟ್ ಆದರು.

ರೋಹಿತ್ ಶರ್ಮಾ ಟಿ20 ಪಂದ್ಯಗಳಲ್ಲಿ ಆಡಿದ 142 ಇನ್ನಿಂಗ್ಸ್‌ಗಳಲ್ಲಿ 30.82ರ ಸರಾಸರಿ ಮತ್ತು 139.09ರ ಸ್ಟ್ರೈಕ್ ರೇಟ್‌ನೊಂದಿಗೆ 3853 ರನ್ ಗಳಿಸಿದ್ದಾರೆ. ಇದರಲ್ಲಿ ನಾಲ್ಕು ಶತಕಗಳು ಮತ್ತು 29 ಅರ್ಧಶತಕಗಳೊಂದಿಗೆ ವಿಶ್ವದ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ.

ಕೊನೆಯ ಟಿ20 ಪಂದ್ಯದಲ್ಲಿ ಎಂಎಸ್ ಧೋನಿ ಸಾಧನೆ ಹಿಂದಿಕ್ಕಲಿದ್ದಾರೆ ರೋಹಿತ್ ಶರ್ಮಾ

2007ರಲ್ಲಿ ನಡೆದ ಟಿ20 ವಿಶ್ವಕಪ್ ಪಂದ್ಯಾವಳಿಯ ಉದ್ಘಾಟನಾ ಆವೃತ್ತಿಯಲ್ಲಿ ಚೊಚ್ಚಲ ಪ್ರವೇಶ ಮಾಡಿದ ರೋಹಿತ್ ಶರ್ಮಾ, ಇಲ್ಲಿಯವರೆಗೆ ಟಿ20 ವಿಶ್ವಕಪ್‌ನ ಎಲ್ಲಾ ಆವೃತ್ತಿಗಳಲ್ಲಿ ಕಾಣಿಸಿಕೊಂಡ ಏಕೈಕ ಕ್ರಿಕೆಟಿಗನಾಗಿದ್ದಾರೆ.

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ, ಜನವರಿ 17ರಂದು ನಡೆಯಲಿರುವ ಸರಣಿಯ ಕೊನೆಯ ಟಿ20 ಪಂದ್ಯವನ್ನು ಗೆಲ್ಲುವ ಮೂಲಕ ಎಂಎಸ್ ಧೋನಿ ಸಾಧನೆ ಹಿಂದಿಕ್ಕಲು ಎದುರು ನೋಡುತ್ತಿದ್ದಾರೆ. ಅಲ್ಲದೆ, ಭಾರತ ತಂಡದ ನಾಯಕ ಅಫ್ಘಾನಿಸ್ತಾನ ವಿರುದ್ಧ 3-0 ವೈಟ್‌ವಾಶ್ ಪೂರ್ಣಗೊಳಿಸುವ ಗುರಿಯನ್ನು ಹೊಂದಿದ್ದಾರೆ.

Story first published: Monday, January 15, 2024, 19:11 [IST]
Other articles published on Jan 15, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+