ಟಿ20 ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿಗೆ ವಿಶ್ವದಾಖಲೆ ನಿರ್ಮಿಸಲು ಸಜ್ಜಾದ ರೋಹಿತ್ ಶರ್ಮಾ!
ಪ್ರವಾಸಿ ಅಫ್ಘಾನಿಸ್ತಾನ ತಂಡದ ವಿರುದ್ಧದ ಮೂರು ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯದಲ್ಲಿ ಆತಿಥೇಯ ಭಾರತ ತಂಡ 6 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿ, ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ.
ಇದೀಗ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಿ20 ಕ್ರಿಕೆಟ್‌ನಲ್ಲಿ ಬೃಹತ್ ದಾಖಲೆ ನಿರ್ಮಿಸಲು ಸಜ್ಜಾಗಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 150 ಟಿ20 ಪಂದ್ಯಗಳಲ್ಲಿ ಕಾಣಿಸಿಕೊಂಡ ವಿಶ್ವದ ಮೊದಲ ಆಟಗಾರನಾಗಲು ಸ್ಟಾರ್ ಬ್ಯಾಟರ್‌ಗೆ ಕೇವಲ ಒಂದು ಪಂದ್ಯ ಮಾತ್ರ ಅವಶ್ಯಕತೆ ಇದೆ.

ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ರೋಹಿತ್ ಶರ್ಮಾ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಲಾಗಿದ್ದು, ಇದು 14 ತಿಂಗಳ ಸುದೀರ್ಘ ಅಂತರದ ಬಳಿಕ ಅವರು ಚುಟುಕು ಕ್ರಿಕೆಟ್ ಸ್ವರೂಪಕ್ಕೆ ಮರಳಿದ್ದಾರೆ.
2022ರ ನವೆಂಬರ್‌ನಲ್ಲಿ ನಡೆದ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಸೋತು ನಿರ್ಗಮಿಸಿದ ನಂತರ, ಭಾರತ ತಂಡದ ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಬ್ಬರೂ ಟಿ20 ತಂಡದಿಂದ ಹೊರಗುಳಿದಿದ್ದರು ಎಂಬುದು ಗಮನಾರ್ಹ ಸಂಗತಿ.
ಅತಿ ಹೆಚ್ಚು ಟಿ20 ಪಂದ್ಯಗಳಲ್ಲಿ ಕಾಣಿಸಿಕೊಂಡಿರುವ ವಿಶ್ವದ ಟಾಪ್ 5 ಆಟಗಾರರು
ರೋಹಿತ್ ಶರ್ಮಾ (ಭಾರತ) - 149
ಪಾಲ್ ಸ್ಟಿರ್ಲಿಂಗ್ (ಐರ್ಲೆಂಡ್) - 134
ಜಾರ್ಜ್ ಡಾಕ್ರೆಲ್ (ಐರ್ಲೆಂಡ್) - 128
ಶೋಯೆಬ್ ಮಲಿಕ್ (ಪಾಕಿಸ್ತಾನ) - 124
ಮಾರ್ಟಿನ್ ಗಪ್ಟಿಲ್ (ನ್ಯೂಜಿಲೆಂಡ್) - 122
ಮೊಹಾಲಿಯಲ್ಲಿ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯಕ್ಕೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಿ20 ತಂಡಕ್ಕೆ ಮರಳಿದ್ದು ಅವರ ಅಭಿಮಾನಿಗಳು ಖುಷಿಕೊಟ್ಟಿದೆ. ಟಾಸ್‌ಗಾಗಿ ಮೈದಾನಕ್ಕೆ ಇಳಿದ ರೋಹಿತ್ ಶರ್ಮಾರನ್ನು ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಪ್ರೇಕ್ಷಕರು ಜೋರಾಗಿ ಶಿಳ್ಳೆ, ಚಪ್ಪಾಳೆಗಳ ಮೂಲಕ ಸ್ವಾಗತಿಸಿದರು.
ಇನ್ನು ಎರಡನೇ ಟಿ20 ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡವನ್ನು ಎದುರಿಸುವಾಗ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಕೂಡ ಕಾಣಿಸಿಕೊಳ್ಳಲಿದ್ದಾರೆ. ರೋಹಿತ್ ಶರ್ಮಾರಂತೆ 14 ತಿಂಗಳ ಸುದೀರ್ಘ ವಿಶ್ರಾಂತಿಯ ಬಳಿಕ ಟಿ20 ತಂಡಕ್ಕೆ ಪುನರಾಗಮನ ಮಾಡುತ್ತಿದ್ದಾರೆ.
ಮೊದಲ ಪಂದ್ಯದ ಗೆಲುವಿನ ನಂತರ ಭಾರತ ತಂಡವು ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು. ಎರಡನೇ ಪಂದ್ಯವು ಭಾನುವಾರ, ಜನವರಿ 14ರಂದು ಇಂದೋರ್‌ನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications