Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs AFG: ಅಫ್ಘಾನಿಸ್ತಾನ ವಿರುದ್ಧ ಗೆದ್ದು ಗುರುವಿಗೆ ಜನ್ಮದಿನದ ಕಾಣಿಕೆ ನೀಡಿದ ಟೀಮ್ ಇಂಡಿಯಾ

ಗುರುವಾರ, ಜನವರಿ 11ರಂದು ಮೊಹಾಲಿಯ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆದ ಪ್ರವಾಸಿ ಅಫ್ಘಾನಿಸ್ತಾನ ತಂಡದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆತಿಥೇಯ ಭಾರತ ತಂಡ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.

ಈ ಮೂಲಕ ಟೀಮ್ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಜನ್ಮದಿನದ ಕಾಣಿಕೆ ನೀಡಿತು. ಅಲ್ಲದೆ, ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿತು.

IND vs AFG: Team India Beat Afghanistan by 6 Wickets in 1st T20 Match

ನಡುಗುವ ಚಳಿಯಲ್ಲಿ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡ ಅನುಭವಿ ಆಲ್‌ರೌಂಡರ್ ಮೊಹಮ್ಮದ್ ನಬಿ ಅವರ ಅದ್ಭುತ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 158 ರನ್‌ ಕಲೆಹಾಕಿತು.

159 ರನ್‌ಗಳ ಸವಾಲಿನ ಗುರಿ ಬೆನ್ನಟ್ಟಿದ ಭಾರತ ತಂಡ ಆಲ್‌ರೌಂಡರ್ ಶಿವಂ ದುಬೆ ಅವರ ಅಮೋಘ ಅರ್ಧಶತಕದ ಸಹಾಯದಿಂದ 17.3 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗೆಲುವಿನ ಗಡಿ ತಲುಪಿತು.

ಅಫ್ಘಾನಿಸ್ತಾನ ತಂಡದ ಇನ್ನಿಂಗ್ಸ್ ಆರಂಭಿಸಿದ ನಾಯಕ ಇಬ್ರಾಹಿಂ ಜದ್ರಾನ್ ಮತ್ತು ರಹಮಾನುಲ್ಲಾ ಗುರ್ಬಾಜ್ ಮೊದಲ ವಿಕೆಟ್‌ಗೆ 50 ರನ್‌ಗಳ ಜೊತೆಯಾಟ ನೀಡಿದರು. ರಹಮಾನುಲ್ಲಾ ಗುರ್ಬಾಜ್ 23 ರನ್ ಗಳಿಸಿ ಔಟಾದರೆ, ಇಬ್ರಾಹಿಂ ಜದ್ರಾನ್ 25 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ನಂತರ ಬಂದ ರಹಮತ್ ಶಾ ಕೇವಲ 3 ರನ್ ಗಳಿಸಿ ಔಟಾದರು. ಈ ವೇಳೆ ಮೊಹಮ್ಮದ್ ನಬಿ ಮತ್ತು ಅಜ್ಮತುಲ್ಲಾ ಒಮರ್ಜಾಯ್ ಅಫ್ಘಾನಿಸ್ತಾನ ತಂಡವನ್ನು ಆಟಕ್ಕೆ ಮರಳಿ ಪಡೆಯಲು 68 ರನ್‌ಗಳ ಜೊತೆಯಾಟ ನೀಡಿದರು.

ಅಜ್ಮತುಲ್ಲಾ ಓಮರ್ಜಾಯ್ 22 ಎಸೆತಗಳಲ್ಲಿ ಎರಡು ಬೌಂಡರಿ ಮತ್ತು ಒಂದು ಸಿಕ್ಸರ್ ಸಮೇತ 29 ರನ್ ಗಳಿಸಿದರೆ, ಮೊಹಮ್ಮದ್ ನಬಿ 27 2 ಬೌಂಡರಿ ಮತ್ತು 3 ಸಿಕ್ಸರ್ ಮೂಲಕ 42 ರನ್ ಬಾರಿಸಿದರು.

ಕೊನೆಯಲ್ಲಿ ನಜಿಬುಲ್ಲಾ ಜದ್ರಾನ್ ಮತ್ತು ಕರೀಂ ಜನತ್ ಕ್ರಮವಾಗಿ 19 ಮತ್ತು 9 ರನ್ ಗಳಿಸಿ ಅಫ್ಘಾನಿಸ್ತಾನ ತಂಡಕ್ಕೆ 158 ರನ್‌ ಗಳಿಸಲು ನೆರವಾದರು.

ಭಾರತದ ಪರ ಬೌಲಿಂಗ್‌ನಲ್ಲಿ ಅಕ್ಷರ್ ಪಟೇಲ್ 4 ಓವರ್‌ಗಳಲ್ಲಿ 23 ರನ್ ನೀಡಿ 2 ವಿಕೆಟ್ ಪಡೆದರೆ, ಮುಖೇಶ್ ಕುಮಾರ್ 4 ಓವರ್‌ಗಳಲ್ಲಿ 33 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಶಿವಂ ದುಬೆ 2 ಓವರ್‌ಗಳಲ್ಲಿ 9 ರನ್ ನೀಡಿ 1 ವಿಕೆಟ್ ಕಬಳಿಸಿದರು.

ನಂತರ, ಬ್ಯಾಟಿಂಗ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಸೊನ್ನೆಗೆ ರನೌಟ್ ಆದರು. ಈ ವೇಳೆ ಶುಭ್ಮನ್ ಗಿಲ್ ಆಕ್ರಮಣಕಾರಿ ಆಟಕ್ಕೆ ಮುಂದಾದರು ಮತ್ತು 12 ಎಸೆತಗಳಲ್ಲಿ 5 ಬೌಂಡರಿ ಸಮೇತ 23 ರನ್ ಬಾರಿಸಿದರು. ತಿಲಕ್ ವರ್ಮಾ ಕೂಡ 22 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 26 ರನ್ ಗಳಿಸಿ ಔಟಾದರು.

ಪಂದ್ಯ ವಿಜೇತ ಆಟವಾಡಿದ ಶಿವಂ ದುಬೆ 40 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್‌ಗಳ ನೆರವಿನಿಂದ 60 ರನ್ ಬಾರಿಸಿದರೆ, ಜಿತೇಶ್ ಶರ್ಮಾ 20 ಎಸೆತಗಳಲ್ಲಿ 5 ಬೌಂಡರಿ ಸಮೇತ 31 ರನ್ ಗಳಿಸಿದರು. ಕೊನೆಯಲ್ಲಿ ಬಂದ ರಿಂಕು ಸಿಂಗ್ 9 ಎಸೆತಗಳಲ್ಲಿ 16 ರನ್ ಗಳಿಸಿದರು.

Story first published: Thursday, January 11, 2024, 22:26 [IST]
Other articles published on Jan 11, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+