Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ind vs Afg: ತವರಿನ ಪ್ರೇಕ್ಷಕರ ಜೊತೆಗೆ ಸ್ಟೆಪ್ ಹಾಕಿದ ವಿರಾಟ್ ಕೊಹ್ಲಿ: ವಿಡಿಯೋ

ಭಾರತ ಹಾಗೂ ಅಫ್ಘಾನಿಸ್ತಾನ ತಂಡಗಳ ನಡುವಿನ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ಮೊದಲಿಗೆ ಬ್ಯಾಟಿಂಗ್ ನಡೆಸಿದ್ದು ಭಾರತ ತಂಡಕ್ಕೆ 273 ರನ್‌ಗಳ ಸವಾಲಿನ ಗುರಿ ನೀಡಿದೆ. ಅಫ್ಘನ್ ನಾಯಕ ಹಶ್ಮತುಲ್ಲಾ ಶಾಹಿದಿ ಮತ್ತು ಅಜ್ಮತುಲ್ಲಾ ಒಮರ್ಜಾಯ್ ಭರ್ಜರಿ ಅರ್ಧ ಶತಿಕ ಸಿಡಿಸಿ ಸವಾಲಿನ ಮೊತ್ತ ಗಳಿಸಲು ಕಾರಣವಾದರು.

ಇನ್ನು ಈ ಪಂದ್ಯದ ದೆಹಲಿಯಲ್ಲಿ ನಡೆಯುತ್ತಿದ್ದು ಪ್ರೇಕ್ಷಕರು ಭರ್ಜರಿಯಾಗಿ ಬೆಂಬಲ ನೀಡಿದ್ದಾರೆ. ವಿರಾಟ್ ಕೊಹ್ಲಿಯ ತವರಿನ ಅಂಗಳವಾಗಿರುವ ಕಾರಣ ಕೊಹ್ಲಿಯ ಉತ್ಸಾಹ ಈ ಮೈದಾನದಲ್ಲಿ ತುಸಿ ಹೆಚ್ಚೇ ಕಾಣಿಸಿದೆ. ಇನ್ನು ಈ ಪಂದ್ಯದ ಮಧ್ಯದಲ್ಲಿ ವಿರಾಟ್ ಕೊಹ್ಲಿ ಲವಲವಿಕೆಯಿಂದ ಸ್ಟೆಪ್ ಹಾಕಿ ಪ್ರೇಕ್ಷಕರನ್ನು ಮನರಂಜಿಸಿದ್ದಾರೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Ind vs Afg: Virat Kohli enjoying with dance in between India vs Afghanistan match

ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ ತಂಡ ಸಾಧಾರಣ ಆರಂಭವನ್ನು ಪಡೆಯಿತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಅದ್ಭುತ ಪ್ರದರ್ಶನ ಬಂದ ಕಾರಣ ಸವಾಲಿನ ಮೊತ್ತಗಳಿಸಲು ಕಾರಣವಾಯಿತು. ನಾಯಕ ಶಾಹಿದಿ 88 ಎಸೆತಗಳನ್ನು ಎದುರಿಸಿ 80 ರನ್‌ಗಳನ್ನು ಗಳಿಸಿದರೆ ಒಮರ್ಜಾಯ್ 69 ಎಸೆತಗಳಲ್ಲಿ 62 ರನ್‌ಗಳನ್ನು ಬಾರಿಸಿದ್ದಾರೆ.

ಭಾರತದ ಪರವಾಗಿ ಬೂಮ್ರಾ ಅದ್ಭುತ ಬೌಲಿಂಗ್ ದಾಳಿ ನಡೆಸಿದ್ದು 10 ಓವರ್‌ಗಳಲ್ಲಿ ಕೇವಲ 39 ರನ್‌ಗಳನ್ನು ನೀಡಿ 4 ವಿಕೆಟ್ ಕಬಳಿಸಿದ್ದಾರೆ. ಇನ್ನು ಹಾರ್ದಿಕ್ ಪಾಂಡ್ಯ ಎರಡು ವಿಕೆಟ್ ಪಡೆದರೆ ಶಾರ್ದೂಕ್ ಠಾಕೂರ್ ಹಾಗೂ ಕುಲ್‌ದೀಪ್ ಯಾದವ್ ತಲಾ 1 ವಿಕೆಟ್ ಪಡೆದುಕೊಂಡಿದ್ದಾರೆ.

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ಬೆಂಚ್: ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಸೂರ್ಯಕುಮಾರ್ ಯಾದವ್,

ಅಫ್ಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಜದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ನಜಿಬುಲ್ಲಾ ಜದ್ರಾನ್, ಮೊಹಮ್ಮದ್ ನಬಿ, ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ ರೆಹಮಾನ್, ನವೀನ್-ಉಲ್-ಹಕ್, ಫಜಲ್ಹಕ್ ಫಾರೂಕಿ
ಬೆಂಚ್: ಇಕ್ರಂ ಅಲಿಖಿಲ್, ಅಬ್ದುಲ್ ರೆಹಮಾನ್, ರಿಯಾಜ್ ಹಸನ್, ನೂರ್ ಅಹ್ಮದ್

Story first published: Wednesday, October 11, 2023, 18:38 [IST]
Other articles published on Oct 11, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+