IND vs AUS 1st: ಉಪನಾಯಕನನ್ನು ಹೊರಗಿಟ್ಟು ಆಸೀಸ್ ವಿರುದ್ಧ ಭಾರತದ ಆಡುವ 11ರ ಬಳಗ ಆಯ್ಕೆ ಮಾಡಿದ ಭಜ್ಜಿ

ನಾಳೆಯಿಂದ (ಗುರುವಾರ, ಫೆಬ್ರವರಿ 9) ಆರಂಭಗೊಳ್ಳುವ ಭಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ತಂಡಗಳ ನಡುವಿನ ಬಹು ನಿರೀಕ್ಷಿತ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ (ವಿಸಿಎ) ಸಜ್ಜುಗೊಂಡಿದೆ.
ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಆರಂಭಿಕ ಟೆಸ್ಟ್ ಪಂದ್ಯಕ್ಕಾಗಿ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು ಭಾರತದ ಆಡುವ ಸಂಭಾವ್ಯ 11ರ ಬಳಗವನ್ನು ಆಯ್ಕೆ ಮಾಡಿದ್ದು, ಚೊಚ್ಚಲ ಟೆಸ್ಟ್ ಪಂದ್ಯವನ್ನಾಡಲು ಎದುರು ನೋಡುತ್ತಿರುವ ಸ್ಫೋಟಕ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಅವರನ್ನು ಆಯ್ಕೆ ಮಾಡಿ 5ನೇ ಸ್ಥಾನ ನೀಡಿದ್ದಾರೆ.
ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ವಿಶೇಷವಾಗಿ ಟಿ20 ಪಂದ್ಯಗಳಲ್ಲಿ ಸೂರ್ಯಕುಮಾರ್ ಯಾದವ್ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಮುಂಬಯ ಮೂಲದ ಬಲಗೈ ಆಟಗಾರ 79 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ ಅನುಭವವನ್ನು ಹೊಂದಿದ್ದಾರೆ. ಅದರಲ್ಲಿ 14 ಶತಕಗಳು ಮತ್ತು 28 ಅರ್ಧ ಶತಕಗಳೊಂದಿಗೆ 5549 ರನ್ ಗಳಿಸಿದ್ದಾರೆ.
ಪಂದ್ಯ ಆರಂಭಕ್ಕೂ ಒಂದು ದಿನದ ಮುಂಚೆ ತನ್ನ ಆಯ್ಕೆ ತಂಡವನ್ನು ಪ್ರಕಟಿಸಿದ ಹರ್ಭಜನ್ ಸಿಂಗ್, ಸೂರ್ಯಕುಮಾರ್ ಯಾದವ್ ಹೊರತುಪಡಿಸಿ, ಕೆಎಸ್ ಭರತ್‌ಗೆ ಚೊಚ್ಚಲ ಟೆಸ್ಟ್ ಪಂದ್ಯವಾಡಲು ಬೆಂಬಲಿಸಿದ್ದಾರೆ ಮತ್ತು ಗಾಯಾಳು ರಿಷಭ್ ಪಂತ್ ಅನುಪಸ್ಥಿಯಲ್ಲಿ ವಿಕೆಟ್ ಕೀಪರ್ ಜವಾಬ್ದಾರಿ ನೀಡಿದ್ದಾರೆ.

ಪ್ರಮುಖ ಅಂಶವೆಂದರೆ, ಹರ್ಭಜನ್ ಸಿಂಗ್ ಆಯ್ಕೆಯ ತಂಡದಲ್ಲಿ ಉಪನಾಯಕ ಕೆಎಲ್ ರಾಹುಲ್‌ಗೆ ಅವಕಾಶ ನೀಡಲಾಗಿಲ್ಲ. ಆದರೆ, ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ತಂಡಕ್ಕೆ ಅಗತ್ಯವಿದ್ದರೆ, ಅದನ್ನು ಸಂತೋಷದಿಂದ ಮಾಡುತ್ತೇನೆ ಎಂದು ಕೆಎಲ್ ರಾಹುಲ್ ಹೇಳಿದ್ದರು. ಹೀಗಾಗಿ ಮಧ್ಯಮ ಕ್ರಮಾಂಕದಲ್ಲಿ ಸ್ಥಾನ ಖಾಲಿ ಇಲ್ಲ ಎಂಬ ಕಾರಣಕ್ಕೆ ಕೈಬಿಟ್ಟಿರಬಹುದು.
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ತೆರೆಯಲು ನಾಯಕ ರೋಹಿತ್ ಶರ್ಮಾ ಮತ್ತು ಶುಭ್ಮನ್ ಗಿಲ್‌ರನ್ನು ಆಯ್ಕೆ ಮಾಡಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಚೇತೇಶ್ವರ ಪೂಜಾರ, ನಾಲ್ಕನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಸ್ಥಾನ ಭದ್ರವಾಗಿದೆ.

ಇದೇ ವೇಳೆ ನಾಗ್ಪುರ ಟೆಸ್ಟ್‌ನಲ್ಲಿ ಮೂವರು ಸ್ಪಿನ್ನರ್‌ಗಳಾದ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್‌ಗೆ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಆಯ್ಕೆ ಮಾಡಿದ್ದಾರೆ. ಇನ್ನು ಬಾಂಗ್ಲಾದೇಶ ವಿರುದ್ಧದ ಚಟ್ಟೋಗ್ರಾಮ್ ಟೆಸ್ಟ್‌ನಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಕುಲದೀಪ್ ಯಾದವ್‌ರನ್ನು ಹೊರಗಿಡಲಾಗಿದೆ.
ಹರ್ಭಜನ್ ಸಿಂಗ್ ಅವರ ಸಂಭಾವ್ಯ ಭಾರತದ ವೇಗದ ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ಸ್ಥಾನ ಪಡೆದಿದ್ದಾರೆ.
ಮೊದಲ ಟೆಸ್ಟ್ ಪಂದ್ಯಕ್ಕಾಗಿ ಹರ್ಭಜನ್ ಸಿಂಗ್ ಆಯ್ಕೆಯ ಸಂಭಾವ್ಯ ಭಾರತ ತಂಡ
ರೋಹಿತ್ ಶರ್ಮಾ, ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಕೆಎಸ್ ಭರತ್, ರವಿ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications