IND vs AUS 1st ODI: ಭಾರತದ ಇನ್ನಿಂಗ್ಸ್ ಆರಂಭಿಕರನ್ನು ಹೆಸರಿಸಿದ ನಾಯಕ ಹಾರ್ದಿಕ್ ಪಾಂಡ್ಯ

ಆತಿಥೇಯ ಭಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಶುಕ್ರವಾರ, ಮಾರ್ಚ್ 17ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದ್ದು, ಉಭಯ ತಂಡಗಳು ಮುಖಾಮುಖಿಗೆ ಸಜ್ಜಾಗಿವೆ.
ಭಾರತ ತಂಡದ ಖಾಯಂ ನಾಯಕ ರೋಹಿತ್ ಶರ್ಮಾ ಅವರು "ವೈಯಕ್ತಿಕ ಕಾರಣಗಳಿಂದ' ಮೊದಲ ಏಕದಿನ ಪಂದ್ಯದಲ್ಲಿ ಆಡುತ್ತಿಲ್ಲ. ಹೀಗಾಗಿ ಹಂಗಾಮಿ ನಾಯಕರಾಗಿ ಹಾರ್ದಿಕ್ ಪಾಂಡ್ಯ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.
ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಮಾತನಾಡಿದ ನಾಯಕ ಹಾರ್ದಿಕ್ ಪಾಂಡ್ಯ ಅವರು ಆಸ್ಟ್ರೇಲಿಯಾ ವಿರುದ್ಧದ ಆರಂಭಿಕ ಏಕದಿನ ಪಂದ್ಯದಲ್ಲಿ ಭಾರತದ ಇನ್ನಿಂಗ್ಸ್ ಆರಂಭಿಸುವ ಜೋಡಿಯನ್ನು ಖಚಿತಪಡಿಸಿದ್ದಾರೆ.
ಯುವ ಬ್ಯಾಟ್ಸ್‌ಮನ್‌ಗಳಾದ ಶುಭ್ಮನ್ ಗಿಲ್ ಮತ್ತು ಇಶಾನ್ ಕಿಶನ್ ಭಾರತ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ತೆರೆಯುತ್ತಾರೆ ಎಂದು ಹಾರ್ದಿಕ್ ಪಾಂಡ್ಯ ತಿಳಿಸಿದರು.

ಜನವರಿಯಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಶುಭ್ಮನ್ ಗಿಲ್ ಒಂದು ದ್ವಿಶತಕ ಮತ್ತು ಒಂದು ಶತಕವನ್ನು ಗಳಿಸುವ ಮೂಲಕ ಅದ್ಭುತ ಬ್ಯಾಟಿಂಗ್ ಪ್ರದರ್ಶನವನ್ನು ನೀಡಿ ಗಮನ ಸೆಳೆದಿದ್ದಾರೆ.
ಮತ್ತೊಂದೆಡೆ, ಆಕ್ರಮಣಕಾರಿ ಆಟದ ಮೂಲಕ ಇಶಾನ್ ಕಿಶನ್ ರನ್ ಶಿಖರ ನಿರ್ಮಿಸುವ ಸೂಚನೆ ನೀಡಿದ್ದಾರೆ. ಯಾವುದೇ ಸಂದರ್ಭದಲ್ಲಿ 2023ರ ಏಕದಿನ ವಿಶ್ವಕಪ್ ಪಂದ್ಯಾವಳಿಗಾಗಿ ಭಾರತ ತಂಡದ ಕರೆಯ ನಿರೀಕ್ಷೆಯಲ್ಲಿದ್ದಾರೆ. ಶುಭ್ಮನ್ ಗಿಲ್ ಮತ್ತು ಇಶಾನ್ ಕಿಶನ್ ಇಬ್ಬರೂ ಹೆಚ್ಚಿನ ರನ್‌ಗಳನ್ನು ಗಳಿಸಲು ಮತ್ತು ತಂಡದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಎದುರು ನೋಡುತ್ತಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಿಂದ ಹೊರಗುಳಿಯಲು ನಿರ್ಧರಿಸಿದ ಹಾರ್ದಿಕ್ ಪಾಂಡ್ಯ
ಇತ್ತೀಚೆಗೆ ಮುಕ್ತಾಯಗೊಂಡ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 2-1 ಅಂತರದ ಗೆಲುವು ಸಾಧಿಸಿತು. ಅಲ್ಲದೇ ಜೂನ್ 7ರಿಂದ ಆರಂಭವಾಗುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕೆ ಅರ್ಹತೆ ಪಡೆದಿದೆ.
ಆಸ್ಟ್ರೇಲಿಯಾ ವಿರುದ್ಧ ನಡೆಯುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕೆ ರೋಹಿತ್ ಶರ್ಮಾ ನಾಯಕತ್ವದ ಭಾರತ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳುವಲ್ಲಿ ಶ್ರೀಲಂಕಾ ವಿರುದ್ಧದ ನ್ಯೂಜಿಲೆಂಡ್ ತಂಡದ ರೋಚಕ ಗೆಲುವು ನೆರವಾಯಿತು.
2023ರ ಐಪಿಎಲ್ ನಂತರ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಜೂನ್ 7ರಿಂದ ದಿ ಓವಲ್‌ನಲ್ಲಿ ನಡೆಯುವ ಫೈನಲ್ ಪಂದ್ಯಕ್ಕಾಗಿ ಎರಡು ತಂಡಗಳು ಸಜ್ಜಾಗುತ್ತಿವೆ.

ಇದೇ ವೇಳೆ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಿಂದ ಹೊರಗುಳಿಯುವುದಾಗಿ ಸ್ವತಃ ಭಾರತದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ತಿಳಿಸಿದ್ದಾರೆ. ಏಕೆಂದರೆ, ಕಳೆದ ಕೆಲವು ವರ್ಷಗಳಿಂದ ಅಷ್ಟೇನೂ ಟೆಸ್ಟ್ ಪಂದ್ಯ ಆಡಿಲ್ಲ ಎಂದು ಪರಿಗಣಿಸಿ ಅದು 'ನೈತಿಕವಾಗಿ ತಪ್ಪು' ಎಂದು ಹೇಳಿದ್ದಾರೆ.
"ನಾನು ನೈತಿಕವಾಗಿ ತುಂಬಾ ಬಲಿಷ್ಠ ವ್ಯಕ್ತಿ. ನಾನು ಅಲ್ಲಿಗೆ ತಲುಪಲು ಶೇ.10 ಪ್ರಯತ್ನ ಮಾಡಿಲ್ಲ. ಪೈನಲ್ ತಲುಪಲು ನಾನು ಶೇ.1ರ ಭಾಗವೂ ಶ್ರಮ ಹಾಕಿಲ್ಲ. ಹಾಗಾಗಿ ನಾನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್್‌ನಲ್ಲಿ ಆಡಿ ಬೇರೊಬ್ಬರ ಸ್ಥಾನವನ್ನು ಕಿತ್ತುಕೊಳ್ಳುವುದು ನೈತಿಕವಾಗಿ ಸರಿಯಲ್ಲ".
"ನಾನು ಟೆಸ್ಟ್ ಕ್ರಿಕೆಟ್ ಆಡಲು ಬಯಸಿದರೆ, ನಾನು ಮೊದಲ ಪಂದ್ಯದ ಮೂಲಕ ನನ್ನ ಸ್ಥಾನವನ್ನು ಗಳಿಸುತ್ತೇನೆ. ಈ ಮೂಲಕ ಫೈನಲ್‌ನಲ್ಲಿ ನಾನು ನನ್ನ ಸ್ಥಾನವನ್ನು ಗಳಿಸಿದ್ದೇನೆ ಎಂದು ಭಾವಿಸುವವರೆಗೆ ನಾನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಅಥವಾ ಭವಿಷ್ಯದ ಟೆಸ್ಟ್ ಸರಣಿಗೆ ಲಭ್ಯವಾಗಿರಲಾರೆ," ಎಂದು ಭಾರತ ತಂಡದ ಹಂಗಾಮಿ ನಾಯಕ ಹಾರ್ದಿಕ್ ಪಾಂಡ್ಯ ತಿಳಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications