For Quick Alerts
ALLOW NOTIFICATIONS  
For Daily Alerts
 

IND Vs AUS ODI: ಮುಂಬೈನ ಗಲ್ಲಿಯಲ್ಲಿ ಕ್ರಿಕೆಟ್ ಆಡಿದ ಡೇವಿಡ್ ವಾರ್ನರ್: ವಿಡಿಯೋ ವೈರಲ್

IND Vs AUS 1st ODI: David Warner Play Cricket In Mumbai Streets : Video Went Viral

ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಮತ್ತೆ ಭಾರತಕ್ಕೆ ಬಂದಿದ್ದಾರೆ. ಟೆಸ್ಟ್ ಸರಣಿಯ ಎರಡನೇ ಪಂದ್ಯದ ವೇಳೆ ಗಾಯಗೊಂಡಿದ್ದ ಅವರು ಸರಣಿಯ ಅರ್ಧದಲ್ಲೇ ಆಸ್ಟ್ರೇಲಿಯಾಕ್ಕೆ ಮರಳಿದ್ದರು.

ಮಾರ್ಚ್ 17ರಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಅವರು ಮತ್ತೆ ಭಾರತಕ್ಕೆ ಬಂದಿದ್ದಾರೆ. ಮೊದಲನೇ ಏಕದಿನ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಆಸ್ಟ್ರೇಲಿಯಾ ಆಟಗಾರರು ಈಗಾಗಲೇ ಮುಂಬೈ ತಲುಪಿದ್ದು ಅಭ್ಯಾಸ ಆರಂಭಿಸಿದ್ದಾರೆ.

ಡೇವಿಡ್ ವಾರ್ನರ್ ಅಭ್ಯಾಸ ಆರಂಭಿಸುವುದಕ್ಕೆ ಮುನ್ನ ಮುಂಬೈ ಬೀದಿಗಳಲ್ಲಿ ಸುತ್ತಾಡಿದ್ದಾರೆ. ಈ ವೇಳೆ ಅಭಿಮಾನಿಗಳ ಜೊತೆ ಗಲ್ಲಿ ಕ್ರಿಕೆಟ್ ಆಡುವ ಮೂಲಕ ಖುಷಿ ಪಟ್ಟಿದ್ದಾರೆ. ರಸ್ತೆಯಲ್ಲಿ ಕ್ರಿಕೆಟ್ ಆಡುತ್ತಿರುವ ವಿಡಿಯೋವನ್ನು ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದು, 'ಕ್ರಿಕೆಟ್ ಆಡಲು ಒಂದು ಗಲ್ಲಿ ಸಿಕ್ಕಿದೆ' ಎಂದು ಶೀರ್ಷಿಕೆ ನೀಡಿದ್ದು, ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ.

ವಾರ್ನರ್ ಭಾರತದ ಅಭಿಮಾನಿಗಳ ಜೊತೆ ವಿಶೇಷ ನಂಟು ಹೊಂದಿದ್ದಾರೆ. ವಾರ್ನರ್ ಬಗ್ಗೆ ಭಾರತೀಯರು ಕೂಡ ಅಭಿಮಾನ ಬೆಳೆಸಿಕೊಂಡಿದ್ದಾರೆ. ಭಾರತದ ವಿವಿಧ ಭಾಷೆಯ ಹಾಡುಗಳಿಗೆ ರೀಲ್ಸ್ ಮಾಡುವ ಮೂಲಕ ವಾರ್ನರ್ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ.

ಹಲವು ಪ್ರಮುಖ ಆಟಗಾರರು ವಾಪಸ್

ಏಕದಿನ ಸರಣಿಗಾಗಿ ಆಸ್ಟ್ರೇಲಿಯಾದ ಪ್ರಮುಖ ಆಟಗಾರರು ತಂಡಕ್ಕೆ ಮರಳಿದ್ದಾರೆ. ಮೊಣಕಾಲಿಗೆ ಗಾಯಮಾಡಿಕೊಂಡು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ ಸುದೀರ್ಘ ಅವಧಿಯ ನಂತರ ಕ್ರಿಕೆಟ್‌ಗೆ ಮರಳಿದ್ದಾರೆ. ಭಾರತದ ವಿರುದ್ಧ ಏಕದಿನ ಸರಣಿಗೆ ಅವರು ಆಯ್ಕೆಯಾಗಿದ್ದು, ಆಡುವ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ.

ಟೆಸ್ಟ್ ಸರಣಿಯಲ್ಲಿ ರನ್ ಗಳಿಸುವಲ್ಲಿ ವಿಫಲವಾದರೂ ಡೇವಿಡ್ ವಾರ್ನರ್ ಸೀಮಿತ ಓವರ್ ಗಳ ಪಂದ್ಯದಲ್ಲಿ ಪ್ರಮುಖ ಆಟಗಾರರಾಗಿದ್ದಾರೆ. ಭಾರತದ ಪಿಚ್‌ಗಳಲ್ಲಿ ಆಡಿ ಅನುಭವ ಹೊಂದಿರುವ ಅವರು ಮೊದಲ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಆಷ್ಟನ್ ಅಗರ್, ಮಿಚೆಲ್ ಮಾರ್ಷ್ ಕೂಡ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

IND Vs AUS 1st ODI: David Warner Play Cricket In Mumbai Streets : Video Went Viral

ಪ್ಯಾಟ್‌ ಕಮಿನ್ಸ್ ಗೈರು ಸ್ಟೀವ್ ಸ್ಮಿತ್ ನಾಯಕ

ಪ್ಯಾಟ್ ಕಮಿನ್ಸ್ ತಾಯಿ ಸಾವನ್ನಪ್ಪಿರುವ ಕಾರಣ ಅವರು ಏಕದಿನ ಸರಣಿಗೂ ಭಾರತಕ್ಕೆ ಬಾರದಿರಲು ನಿರ್ಧರಿಸಿದ್ದಾರೆ. ಎರಡು ಟೆಸ್ಟ್ ಪಂದ್ಯಗಳಲ್ಲಿ ಆಸ್ಟ್ರೇಲಿಯಾವನ್ನು ಮುನ್ನಡೆಸಿದ್ದ ಸ್ಟೀವ್ ಸ್ಮಿತ್ ಏಕದಿನ ಸರಣಿಯ ಮೂರು ಪಂದ್ಯಗಳಲ್ಲಿ ನಾಯಕತ್ವ ವಹಿಸಿಕೊಳ್ಳಲಿದ್ದಾರೆ.

ಟೆಸ್ಟ್ ಸರಣಿಯನ್ನು ಸೋತಿರುವ ಆಸ್ಟ್ರೇಲಿಯಾ ಏಕದಿನ ಸರಣಿಯಲ್ಲಾದರೂ ಗೆಲ್ಲಬೇಕೆನ್ನುವ ಯೋಜನೆಯಲ್ಲಿದೆ. ಆದರೆ, ತವರಿನಲ್ಲಿ ಬಲಿಷ್ಠವಾಗಿರುವ ಭಾರತ ತಂಡದ ವಿರುದ್ಧ ಕಾಂಗರೂ ಪಡೆ ಯಾವ ರೀತಿಯ ಪ್ರದರ್ಶನ ನೀಡಲಿದೆ ಎನ್ನುವುದು ಮಾರ್ಚ್ 17ರಂದು ತಿಳಿಯಲಿದೆ.

ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡ : ಸ್ಟೀವ್ ಸ್ಮಿತ್ (ನಾಯಕ), ಸೀನ್ ಅಬಾಟ್, ಆಶ್ಟನ್ ಅಗರ್, ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲ್ಯಾಬುಸ್‌ಚಾಗ್ನೆ, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ .

Story first published: Wednesday, March 15, 2023, 15:41 [IST]
Other articles published on Mar 15, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+