IND vs AUS 1st ODI: ಭಾರತ vs ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಶುಕ್ರವಾರ, ಮಾರ್ಚ್ 17ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದ್ದು, ಉಭಯ ತಂಡಗಳು ವೈಟ್‌ಬಾಲ ಹಣಾಹಣಿಗೆ ಸಜ್ಜಾಗಿವೆ.
ಇನ್ನು 'ವೈಯಕ್ತಿಕ ಕಾರಣಗಳಿಂದ' ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮೊದಲ ಏಕದಿನ ಪಂದ್ಯದಲ್ಲಿ ಆಡುತ್ತಿಲ್ಲ. ಹೀಗಾಗಿ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಟಿ20 ತಂಡದ ನಾಯಕ ಹಾರ್ದಿಕ್ ಪಾಂಡ್ಯ ಆತಿಥೇಯ ತಂಡವನ್ನು ಮುನ್ನಡೆಸಲಿದ್ದಾರೆ.
ಇದೇ ವೇಳೆ ರೋಹಿತ್ ಶರ್ಮಾ ಆಡುತ್ತಿಲ್ಲವಾದ ಕಾರಣ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಇಶಾನ್ ಕಿಶನ್‌ಗೆ ಶುಭ್ಮನ್ ಗಿಲ್ ಜೊತೆ ಇನ್ನಿಂಗ್ಸ್ ಆರಂಭಿಸಲು ಅವಕಾಶ ನೀಡುವ ಸಾಧ್ಯತೆ ಇದೆ. 2022ರ ಡಿಸೆಂಬರ್‌ನಲ್ಲಿ ಇಶಾನ್ ಕಿಶನ್ ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಬಾರಿಸಿದರು ಮತ್ತು ಕ್ರಿಸ್ ಗೇಲ್ ಅವರ ವೇಗದ ಶತಕದ ದಾಖಲೆಯನ್ನು ಮುರಿದಿದ್ದರು.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತವಾಗಿ ಪುನರಾಗಮನ ಮಾಡಿದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಕೂಡ ಏಕದಿನ ಕ್ರಿಕೆಟ್‌ಗೆ ಮರಳಲು ಸಿದ್ಧರಾಗಿದ್ದಾರೆ. ಹೀಗಾಗಿ ವಾಷಿಂಗ್ಟನ್ ಸುಂದರ್ ಅವಕಾಶ ವಂಚಿತರಾಗುವ ಲಕ್ಷಣವಿದೆ. ಮೊದಲ ಏಕದಿನ ಪಂದ್ಯಕ್ಕೆ ಭಾರತ ತಂಡವು ಕುಲದೀಪ್ ಯಾದವ್ ಮತ್ತು ಯುಜ್ವೇಂದ್ರ ಚಾಹಲ್ ಇಬ್ಬರನ್ನೂ ಆಡಿಸುವ ಸಾಧ್ಯತೆ ಕಡಿಮೆ ಇದೆ.
ಮತ್ತೊಂದೆಡೆ, ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ವೇಳೆ ಮೊಣಕೈ ಗಾಯದಿಂದ ಚೇತರಿಸಿಗೊಂಡಿರುವ ಡೇವಿಡ್ ವಾರ್ನರ್ ವಾಪಸಾಗಿರುವುದು ಪ್ರವಾಸಿ ಆಸ್ಟ್ರೇಲಿಯಾ ತಂಡಕ್ಕೆ ಆನೆಬಲ ಬಂದಿದೆ. ಆದರೆ, ವೇಗದ ಬೌಲರ್‌ಗಳಾದ ಪ್ಯಾಟ್ ಕಮಿನ್ಸ್ ಮತ್ತು ಝೈ ರಿಚರ್ಡ್‌ಸನ್ ಅನುಪಸ್ಥಿಯಲ್ಲಿ ಆಡಲಿದೆ.

ಪ್ಯಾಟ್ ಕಮಿನ್ಸ್ ಬದಲಾಗಿ ಸ್ಟೀವನ್ ಸ್ಮಿತ್ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಲಿದ್ದಾರೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಒಂದೇ ಒಂದು ಅರ್ಧಶತಕವನ್ನು ಗಳಿಸಲು ಸ್ಟೀವನ್ ಸ್ಮಿತ್ ವಿಫಲರಾಗಿದ್ದಾರೆ. ಇನ್ನು ಮಿಚೆಲ್ ಸ್ಟಾರ್ಕ್ ಮತ್ತು ಆಡಮ್ ಝಂಪಾ ಆಸೀಸ್ ತಂಡದಲ್ಲಿರುವ ಇಬ್ಬರು ಅನುಭವಿ ಬೌಲರ್‌ಗಳಾಗಿದ್ದಾರೆ.
ಭಾರತ vs ಆಸ್ಟ್ರೇಲಿಯಾ ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ
ಭಾರತ vs ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದ್ದರೆ, ಡಿಸ್ನಿ+ ಹಾಟ್ ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಿ ವೀಕ್ಷಿಸಬಹುದು.
ಭಾರತ vs ಆಸ್ಟ್ರೇಲಿಯಾ ಏಕದಿನ ಸರಣಿ ವೇಳಾಪಟ್ಟಿ
ಮೊದಲ ಏಕದಿನ ಪಂದ್ಯ - ಶುಕ್ರವಾರ, ಮಾರ್ಚ್ 17 - ಮುಂಬೈ 22 -
ಎರಡನೇ ಏಕದಿನ ಪಂದ್ಯ - ಭಾನುವಾರ, ಮಾರ್ಚ್ 19 - ವಿಶಾಖಪಟ್ಟಣ
ಮೂರನೇ ಏಕದಿನ ಪಂದ್ಯ - ಬುಧವಾರ, ಮಾರ್ಚ್ - ಚೆನ್ನೈ
ಮೊದಲ ಏಕದಿನ ಪಂದ್ಯ: ಭಾರತ vs ಆಸ್ಟ್ರೇಲಿಯಾ ಸಂಭಾವ್ಯ ಆಡುವ 11ರ ಬಳಗ
ಭಾರತ ತಂಡ: ಶುಭ್ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ (ನಾಯಕ), ರವೀಮದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.
ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಸ್ಟೀವನ್ ಸ್ಮಿತ್ (ನಾಯಕ), ಮಾರ್ನಸ್ ಲ್ಯಾಬುಶ್ಚಾಗ್ನೆ, ಮಾರ್ಕಸ್ ಸ್ಟೊಯಿನಿಸ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಸೀನ್ ಅಬೋಟ್, ನಾಥನ್ ಎಲ್ಲಿಸ್, ಮಿಚೆಲ್ ಸ್ಟಾರ್ಕ್, ಆಡಂ ಝಂಪಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications