For Quick Alerts
ALLOW NOTIFICATIONS  
For Daily Alerts
 

IND Vs AUS 1st ODI: ಮಾರ್ಚ್ 14ರಂದು ಮುಂಬೈಗೆ ಆಗಮಿಸಲಿರುವ ಭಾರತ ಏಕದಿನ ತಂಡದ ಆಟಗಾರರು

IND Vs AUS 1st ODI: Indias ODI Team Members To Assemble In Mumbai On March 14

ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ನಂತರ ಭಾರತ ಆಸ್ಟ್ರೇಲಿಯಾ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಮೊದಲ ಏಕದಿನ ಪಂದ್ಯ ಮಾರ್ಚ್ 17ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ.

ಮೊದಲನೇ ಪಂದ್ಯಕ್ಕಾಗಿ ಸಿದ್ಧತೆ ಆರಂಭಿಸಲು ಭಾರತ ಏಕದಿನ ತಂಡದ ಕೆಲವು ಆಟಗಾರರು ಮಾರ್ಚ್ 14ರಂದು ಮುಂಬೈಗೆ ಆಗಮಿಸಲಿದ್ದಾರೆ. ಟೆಸ್ಟ್ ತಂಡದಲ್ಲಿ ಆಡುತ್ತಿರುವ ಆಟಗಾರರು ಪಂದ್ಯ ಮುಗಿದ ಬಳಿಕ ಮಾರ್ಚ್ 15ರಂದು ಮುಂಬೈಗೆ ತೆರಳಲಿದ್ದಾರೆ.

ಮೊದಲನೇ ಏಕದಿನ ಪಂದ್ಯಕ್ಕೆ ರೋಹಿತ್ ಶರ್ಮಾ ಅಲಭ್ಯವಾಗಿರುವ ಕಾರಣ ಹಾರ್ದಿಕ್ ಪಾಂಡ್ಯ ನಾಯಕತ್ವ ವಹಿಸಿಕೊಳ್ಳಲಿದ್ದಾರೆ. ಏಕದಿನ ವಿಶ್ವಕಪ್‌ಗೆ ಸಿದ್ಧತೆ ಮಾಡಿಕೊಳ್ಳಲು ಭಾರತ ತಂಡಕ್ಕೆ ಇದು ಉತ್ತಮ ಅವಕಾಶವಾಗಿದೆ. ಭಾರತ ತಂಡದ ಯುವ ಪಡೆ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಆಡಲು ಉತ್ಸುಕವಾಗಿದೆ.

"ಕೆಲವು ಆಟಗಾರರು ಫಿಟ್ನೆಸ್ ಶಿಬಿರಕ್ಕಾಗಿ ಬೆಂಗಳೂರಿನಲ್ಲಿದ್ದಾರೆ. ಮಾರ್ಚ್ 14 ರಂದು ಆಟಗಾರರು ಮುಂಬೈಗೆ ಆಗಮಿಸಲಿದ್ದಾರೆ. ಟೆಸ್ಟ್ ತಂಡದ ಆಟಗಾರರು ಮಾರ್ಚ್ 15ರಂದು ಮುಂಬೈಗೆ ಆಗಮಿಸಲಿದ್ದಾರೆ. ರಾಹುಲ್ ದ್ರಾವಿಡ್ ಕೂಡ ತಂಡದ ಜೊತೆ ಮುಂಬೈಗೆ ಪ್ರಯಾಣಿಸಲಿದ್ದಾರೆ" ಎಂದು ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಇನ್ಸೈಡ್‌ಸ್ಪೋರ್ಟ್‌ ವರದಿ ಮಾಡಿದೆ.

IND Vs AUS 1st ODI: Indias ODI Team Members To Assemble In Mumbai On March 14

ಎರಡನೇ ಏಕದಿನ ಪಂದ್ಯಕ್ಕೆ ಮರಳಲಿರುವ ರೋಹಿತ್

ಮಾರ್ಚ್ 19ರಂದು ವಿಶಾಖಪಟ್ಟಣಂನಲ್ಲಿ ನಡೆಯಲಿರುವ 2ನೇ ಏಕದಿನ ಪಂದ್ಯಕ್ಕೆ ರೋಹಿತ್ ಶರ್ಮಾ ತಂಡವನ್ನು ಸೇರಿಕೊಳ್ಳಲಿದ್ದು, ನಾಯಕತ್ವ ವಹಿಸಿಕೊಳ್ಳಲಿದ್ದಾರೆ. ಏಕದಿನ ಸರಣಿ ಮುಕ್ತಾಯವಾಗುತ್ತಿದ್ದಂತೆ ಬಹು ನಿರೀಕ್ಷಿತ ಐಪಿಎಲ್ ಪಂದ್ಯಾವಳಿ ಆರಂಭವಾಗಲಿದ್ದು, ಎಲ್ಲಾ ಆಟಗಾರರು ತಮ್ಮ ತಂಡವನ್ನು ಸೇರಿಕೊಳ್ಳಲಿದ್ದಾರೆ. ಎನ್‌ಸಿಎ ಎಲ್ಲಾ ಆಟಗಾರರ ಫಿಟ್ನೆಸ್ ಬಗ್ಗೆ ಮೇಲ್ವಿಚಾರಣೆ ಮಾಡಲಿದೆ.

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ಗೆ ಭಾರತ ಅರ್ಹತೆ ಪಡೆಯುವ ಸಾಧ್ಯತೆ ಹೆಚ್ಚಾಗಿರುವುದರಿಂದ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡುವ ಬಿಸಿಸಿಐ ಯೋಜನೆಗೆ ಐಪಿಎಲ್ ಫ್ರಾಂಚೈಸಿಗಳು ವಿರೋಧ ವ್ಯಕ್ತಪಡಿಸಿದವು. ನಂತರ ಪ್ರಮುಖ ಆಟಗಾರರ ಒತ್ತಡ ನಿರ್ವಹಣೆಯನ್ನು ನೋಡಿಕೊಳ್ಳುವ ಹೊಣೆಯನ್ನು ಎನ್‌ಸಿಎಗೆ ನೀಡಲಾಗಿದೆ.

IND Vs AUS 1st ODI: Indias ODI Team Members To Assemble In Mumbai On March 14

ಮತ್ತೊಂದು ಏಕದಿನ ಸರಣಿ ಗೆಲ್ಲುತ್ತಾ ಭಾರತ

2023ರ ಜನವರಿ ತಿಂಗಳಿನಲ್ಲಿ ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಗೆದ್ದಿರುವ ಭಾರತ ಆತ್ಮವಿಶ್ವಾಸದಲ್ಲಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು ಗೆಲ್ಲುವ ಮೂಲಕ ತವರಿನಲ್ಲಿ ಅಜೇಯ ಓಟವನ್ನು ಮುಂದುವರೆಸುವ ಲೆಕ್ಕಾಚಾರದಲ್ಲಿದೆ.

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ಜಯದೇವ್ ಉನದ್ಕತ್.

Story first published: Saturday, March 11, 2023, 6:40 [IST]
Other articles published on Mar 11, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+