For Quick Alerts
ALLOW NOTIFICATIONS  
For Daily Alerts
 

IND Vs AUS 1st ODI: ಭಾರತದ ವಿರುದ್ಧ ಕಣಕ್ಕಿಳಿಯಲಿದೆ ಬಲಿಷ್ಠ ತಂಡ: ಆಸ್ಟ್ರೇಲಿಯಾ ಪ್ಲೇಯಿಂಗ್ 11 ವಿವರ

IND Vs AUS 1st ODI: Maxwell Set To Return : Know Australia Playing For 1st ODI Against India

ಭಾರತದ ವಿರುದ್ಧ ಟೆಸ್ಟ್ ಸರಣಿಯಲ್ಲಿ ಸೋಲನುಭವಿಸಿರುವ ಆಸ್ಟ್ರೇಲಿಯಾ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಗೆಲ್ಲುವ ಯೋಜನೆಯಲ್ಲಿದೆ. ಮಾರ್ಚ್ 17 ರಂದು ಸರಣಿಯ ಮೊದಲ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ.

ಟೆಸ್ಟ್ ಸರಣಿ ಸಂದರ್ಭದಲ್ಲಿ ಗಾಯಗೊಂಡಿದ್ದ ಡೇವಿಡ್ ವಾರ್ನರ್ ಏಕದಿನ ತಂಡಕ್ಕೆ ವಾಪಸಾಗಿದ್ದಾರೆ, ಆಷ್ಟನ್ ಅಗರ್ ಕೂಡ ಏಕದಿನ ತಂಡವನ್ನು ಸೇರಿಕೊಂಡಿದ್ದಾರೆ. ಇವರನ್ನು ಹೊರತು ಪಡಿಸಿದರೆ, ಸ್ಪೋಟಕ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಹಲವು ತಿಂಗಳ ಬಳಿಕ ಕ್ರಿಕೆಟ್‌ಗೆ ಮರಳಿದ್ದಾರೆ. ಮಿಚೆಲ್ ಮಾರ್ಷ್ ಕೂಡ ವಾಪಾಸಾಗಿರುವುದು ತಂಡದ ಬ್ಯಾಟಿಂಗ್ ಬಲವನ್ನು ಹೆಚ್ಚಿಸಿದೆ.

ನಾಯಕ ಪ್ಯಾಟ್ ಕಮಿನ್ಸ್ ತಾಯಿಯ ಸಾವಿನ ಕಾರಣದಿಂದ ಆಸ್ಟ್ರೇಲಿಯಾದಲ್ಲೇ ಉಳಿಯಲಿದ್ದು, ಸ್ಟೀವ್ ಸ್ಮಿತ್ ಏಕದಿನ ಸರಣಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಬಲಿಷ್ಠ ಭಾರತದ ವಿರುದ್ಧದ ಪಂದ್ಯಕ್ಕೆ ಅತ್ಯುತ್ತಮ ತಂಡವನ್ನು ಕಣಕ್ಕಿಳಿಸಲು ಸಿದ್ಧವಾಗಿದೆ.

ಆಲ್‌ರೌಂಡರ್ ಗಳಾದ ಕ್ಯಾಮರೂನ್ ಗ್ರೀನ್ ಮತ್ತು ಮಾರ್ಕಸ್ ಸ್ಟೊಯಿನಿಸ್ ನಡುವೆ ಯಾರು ಅವಕಾಶ ಪಡೆಯುತ್ತಾರೆ ಎನ್ನುವ ಕುತೂಹಲ ಇದೆ. ನಾಯಕ ಸ್ಮಿತ್ ಇವರಿಬ್ಬರಲ್ಲಿ ಯಾರಿಗೆ ಮಣೆ ಹಾಕುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

IND Vs AUS 1st ODI: Maxwell Set To Return : Know Australia Playing For 1st ODI Against India

ಮೂರು ತಿಂಗಳ ಬಳಿಕ ಏಕದಿನ ಪಂದ್ಯ

ಆಸ್ಟ್ರೇಲಿಯಾ ಮೂರು ತಿಂಗಳ ಬಳಿಕ ಏಕದಿನ ಪಂದ್ಯವನ್ನು ಆಡಲು ಸಜ್ಜಾಗಿದೆ. ನವೆಂಬರ್ 2022ರಲ್ಲಿ ಅವರು ಕೊನೆಯ ಏಕದಿನ ಪಂದ್ಯವನ್ನಾಡಿದ್ದರು. ತವರಿನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯನ್ನು ವೈಟ್‌ವಾಶ್ ಮಾಡಿದ್ದರು.

ಕ್ಯಾಮೆರಾನ್ ಗ್ರೀನ್ ಅಹಮದಾಬಾದ್‌ ಟೆಸ್ಟ್‌ನಲ್ಲಿ ಶತಕ ಸಿಡಿಸಿ ಮಿಂಚಿದ್ದರು. 2022ರಲ್ಲಿ ಭಾರತದ ವಿರುದ್ಧದ ಟಿ20 ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಭಾರತದಲ್ಲಿ ಅವರ ಪ್ರದರ್ಶನವನ್ನು ಪರಿಗಣಿಸಿ, ಸ್ಟೊಯಿನಿಸ್ ಬದಲಾಗಿ ಅವಕಾಶ ಪಡೆಯುವ ಸಾಧ್ಯತೆ ಇದೆ.

ತಂಡದ ಪ್ರಮುಖ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಗಾಯದಿಂದ ಚೇತರಿಸಿಕೊಂಡಿದ್ದು ಮಿಂಚಲು ಸಿದ್ಧವಾಗಿದ್ದಾರೆ. ಬ್ಯಾಟಿಂಗ್‌ನಲ್ಲಿ ಮಾತ್ರವಲ್ಲದೆ ಬೌಲಿಂಗ್‌ನಿಂದಲೂ ಕೂಡ ತಂಡಕ್ಕೆ ಉತ್ತಮ ಕೊಡುಗೆ ನೀಡುವ ಸಾಮರ್ಥ್ಯ ಹೊಂದಿದ್ದಾರೆ. ಟ್ರಾವಿಸ್ ಹೆಡ್ ಅನುಭವಿ ಡೇವಿಡ್ ವಾರ್ನರ್ ಅವರೊಂದಿಗೆ ಆಸ್ಟ್ರೇಲಿಯಾದ ಇನ್ನಿಂಗ್ಸ್ ತೆರೆಯುವ ಸಾಧ್ಯತೆಯಿದೆ.

IND Vs AUS 1st ODI: Maxwell Set To Return : Know Australia Playing For 1st ODI Against India

ಬ್ಯಾಟಿಂಗ್ ಸ್ನೇಹಿ ಪಿಚ್

ವಾಂಖೆಡೆ ಪಿಚ್‌ ಬ್ಯಾಟಿಂಗ್ ಸ್ನೇಹಿಯಾಗಿರುವುದರಿಂದ ಹೆಚ್ಚಿನ ಬ್ಯಾಟರ್ ಮತ್ತು ಆಲ್‌ರೌಂಡರ್ ಕಣಕ್ಕಿಳಿಯಲಿದ್ದಾರೆ. 8 ಬ್ಯಾಟರ್ ಗಳು ಮೊದಲನೇ ಪಂದ್ಯದಲ್ಲಿ ಕಣಕ್ಕಿಳಿಯುತ್ತಾರೆ ಎಂದು ಆಸ್ಟ್ರೇಲಿಯಾ ಕೋಚ್ ಈಗಾಗಲೇ ಸೂಚನೆ ನೀಡಿದ್ದಾರೆ. ಮಿಚೆಲ್ ಸ್ಟಾರ್ಕ್ ನಾಥನ್ ಎಲ್ಲಿಸ್ ಅವರೊಂದಿಗೆ ವೇಗದ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ.

ಆಸ್ಟ್ರೇಲಿಯಾದ ಸಂಭಾವ್ಯ ಆಡುವ ಬಳಗ : ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಸ್ಟೀವ್ ಸ್ಮಿತ್ (ನಾಯಕ), ಮಾರ್ನಸ್ ಲ್ಯಾಬುಸ್ಚಾಗ್ನೆ, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚ್ ಮಾರ್ಷ್, ಕ್ಯಾಮರೂನ್ ಗ್ರೀನ್/ಮಾರ್ಕಸ್ ಸ್ಟೊಯಿನಿಸ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ನಾಥನ್ ಎಲ್ಲಿಸ್, ಮಿಚ್ ಸ್ಟಾರ್ಕ್, ಆಡಮ್ ಝಂಪಾ.

Story first published: Thursday, March 16, 2023, 21:40 [IST]
Other articles published on Mar 16, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+