Ind vs Aus 1st ODI : ಅಬ್ಬರಿಸಿದ ಶಮಿ, ಸಿರಾಜ್; ಭಾರತಕ್ಕೆ ಸುಲಭ ಗುರಿ ನೀಡಿದ ಆಸಿಸ್

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟಿಮ್ ಇಂಡಿಯಾ ಬೌಲಿಂಗ್ ವಿಭಾಗ ಅಬ್ಬರಿಸಿದೆ. ಅದರಲ್ಲೂ ವಾಂಖೆಡೆಯ ಹಸಿರು ಪಿಚ್‌ನ ಲಾಭವನ್ನು ಅದ್ಭುತವಾಗಿ ಬಳಸಿಕೊಂಡ ಟೀಮ್ ಇಂಡಿಯಾದ ವೇಗಿಗಳಾದ ಮೊಹಮ್ಮದ್ ಸಿರಾಜ್ ಹಾಗೂ ಮೊಹಮ್ಮದ್ ಶಮಿ ಆಸ್ಟ್ರೇಲಿಯಾ ತಂಡಕ್ಕೆ ದೊಡ್ಡ ಆಘಾತ ನೀಡಿದ್ದಾರೆ. ಹೀಗಾಗಿ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಕೇವಲ 188 ರನ್ ಮಾತ್ರವೇ ಗಳಿಸಿದ್ದು ಟೀಮ್ ಇಂಡಿಯಾಗೆ ಸುಲಭ ಸವಾಲು ಮುಂದಿಟ್ಟಿದೆ.
ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ಆರಂಭದಿಂದಲೇ ಯಶಸ್ಸು ಸಾಧಿಸಲು ಯಶಸ್ವಿಯಾಯಿತು. ಡೇವಿಡ್ ವಾರ್ನರ್ ಅಲಭ್ಯತೆಯಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಮಿಚೆಲ್ ಮಾರ್ಶ್ ಮಾತ್ರವೇ ಈ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದು ಆಸ್ಟ್ರೇಲಿಯಾ ತಂಡ 200ರ ಸನಿಹಕ್ಕೆ ಬಂದು ತಲುಪಲು ಕಾರಣವಾದರು.
ಮಿಚೆಲ್ ಮಾರ್ಶ್ ಈ ಪಂದ್ಯದಲ್ಲಿ 81 ರನ್‌ಗಳಿಸಿ ವಿಕೆಟ್ ಕಳೆದುಕೊಂಡರೆ ಉಳಿದಂತೆ ಜೋಸ್ ಇಂಗ್ಲಿಸ್ ಗಳಿಸಿದ 26 ರನ್ ಆಸಿಸ್ ಪರ ದಾಖಲಾದ ದೊಡ್ಡ ಮೊತ್ತ ಎನಿಸಿಕೊಂಡಿತು. ಆಸಿಸ್ ನಾಯಕ ಸ್ಟೀವ್ ಸ್ಮಿತ್ 22 ರನ್‌ಗಳಿಸಿ ಔಟಾದರು. ಅಂತಿಮವಾಗಿ ಆಸ್ಟ್ರೇಲಿಯಾ ತಂಡ 35.4 ಓವರ್‌ಗಲ್ಲಿ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡಿದ್ದು 188 ರನ್‌ಗಳಿಗೆ ಆಲೌಟ್ ಆಯಿತು.
ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ನೀಡಿದ್ದು ಟೀಮ್ ಇಂಡಿಯಾದ ಇಬ್ಬರು ಪ್ರಮುಖ ವೇಗಿಗಳಾದ ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್. ಶಮಿ 6 ಓವರ್‌ಗಳಲ್ಲಿ ಕೇವಲ 17 ರನ್ ನೀಡಿ ಮೂರು ವಿಕೆಟ್ ಕಬಳಿಸಿದರೆ ಸಿರಾಜ್ 5.4 ಓವರ್‌ಗಳಲ್ಲಿ 29 ರನ್ ನೀಡಿ 3 ವಿಕೆಟ್ ಪಡೆದರು. ಉಳಿದಂತೆ ರವೀಂದ್ರ ಜಡೇಜಾ 2 ವಿಕೆಟ್ ಪಡೆದು ಮಿಂಚಿದ್ದು ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಕುಲ್‌ದೀಪ್ ಯಾದವ್ ತಲಾ ಒಂದು ವಿಕೆಟ್ ಪಡೆದರು.
ಭಾರತ ಆಡುವ ಬಳಗ: ಶುಬ್ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ (ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ
ಆಸ್ಟ್ರೇಲಿಯಾ ಆಡುವ ಬಳಗ: ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್ (ನಾಯಕ), ಮಾರ್ನಸ್ ಲ್ಯಾಬುಶೈನ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಶಾನ್ ಅಬಾಟ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications