India vs Australia: 5 ವಿಕೆಟ್‌ಗಳ ಗೊಂಚಲು ಪಡೆದ ಶಮಿ: ಭಾರತಕ್ಕೆ ಗೆಲ್ಲಲು 277 ರನ್‌ಗಳ ಗುರಿ
ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲಿಂಗ್ ವಿಭಾಗ ಉತ್ತಮ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದೆ. ಅದರಲ್ಲೂ ಅನುಭವಿ ವೇಗಿ ಮೊಹಮ್ಮದ್ ಶಮಿ ಈ ಪಂದ್ಯದಲ್ಲಿ ಐದು ವಿಕೆಟ್‌ಗಳ ಗೊಂಚಲು ಪಡೆದುಕೊಂಡಿದ್ದು ಅಬ್ಬರಿಸಿದ್ದಾರೆ. ಹೀಗಾಗಿ ಮೊಹಾಲಿಯ ಬ್ಯಾಟಿಂಗ್ ಸ್ನೇಹಿ ಪಿಚ್‌ನಲ್ಲಿಯೂ ಆಸ್ಟ್ರೇಲಿಯಾ ತಂಡವನ್ನು ಭಾರತ 276 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದೆ.
ಮೊದಲ ಓವರ್‌ನಲ್ಲಿಯೇ ಆರಂಭಿಕ ಆಟಗಾರ ಮಿಚೆಲ್ ಮಾರ್ಶ್ ಅವರನ್ನು ಔಟ್ ಮಾಡುವ ಮೂಲಕ ಶಮಿ ಭಾರತಕ್ಕೆ ಆರಂಭದಲ್ಲಿ ಮುನ್ನಡೆ ಒದಗಿಸಿದರು. ಆದರೆ ಅದಾದ ಬಳಿಕ ಎರಡನೇ ವಿಕೆಟ್‌ಗೆ ಡೇವಿಡ್ ವಾರ್ನರ್ ಹಾಗೂ ಸ್ಟೀವ್ ಸ್ಮಿತ್ ಜೋಡಿ 94 ರನ್‌ಗಳ ಬೃಹತ್ ಜೊತೆಯಾಟ ನೀಡಿದರು. ಡೇವಿಡ್ ವಾರ್ನರ್ 52 ರನ್‌ಗಳಿಸಿ ಜಟೇಜಾಗೆ ವಿಕೆಟ್ ನೀಡುವ ಮೂಲಕ ಈ ಜೋಡಿ ಬೇರ್ಪಟ್ಟಿತ್ತು. ಅದಾದ ಬಳಿಕ ಸ್ಮಿತ್ ಕೂಡ 41 ರನ್‌ಗಳಿಗೆ ಔಟಾದರು.

ನಂತರ ಮಾರ್ನಸ್ ಲ್ಯಾಬುಶೇನ್ ಹಾಗೂ ಕ್ಯಾಮರೂನ್ ಗ್ರೀನ್ ಜೋಡಿ ಕೂಡ ಉತ್ತಮ ಪ್ರದರ್ಶನ ನೀಡಿದರು. ಲ್ಯಾಬುಶೇನ್ 39 ರನ್‌ಗಳಿಸಿ ವಿಕೆಟ್ ಕಳೆದುಕೊಂಡಿದ್ದು ಗ್ರೀನ್ 31 ರನ್‌ಗಳಿಸಿ ರನೌಟ್ ಆದರು. ನಂತರ ಜೋಶ್ ಇಂಗ್ಲಿಸ್ ಹಾಗೂ ಮಾರ್ಕಸ್ ಸ್ಟೋಯ್ನಿಸ್ ಕೂಡ ಅರ್ಧ ಶತಕದ ಜೊತೆಯಾಟ ನೀಡಿ ಬೇರ್ಪಟ್ಟರು. ಇಂಗ್ಲಿಸ್ 45 ರನ್‌ಗಳಿಸಿದರೆ ಸ್ಟೋಯ್ನಿಸ್ 29 ರನ್‌ಗಳ ಕೊಡುಗೆ ನೀಡಿದರು. ಇನ್ನು ನಂತರ ನಾಯಕ ಪ್ಯಾಟ್ ಕಮ್ಮಿನ್ಸ್ 9 ಎಸೆತಗಳಲ್ಲಿ 21 ರನ್‌ಗಳಿಸುವ ಮೂಲಕ ತಂಡ 276 ರನ್‌ಗಳಿಸಲು ಕಾರಣವಾದರು.
ಇನ್ನು ಅನುಭವಿ ಮೊಹಮ್ಮದ್ ಶಮಿ ಈ ಪಂದ್ಯದಲ್ಲಿ ತಮ್ಮ 10 ಓವರ್‌ಗಳ ಕೋಟಾದಲ್ಲಿ ಒಂದು ಮೇಡನ್ ಸಹಿತ 51 ರನ್‌ಗಳನ್ನು ನೀಡಿ 5 ವಿಕೆಟ್ ಕಬಳಿಸಿದರು. ಉಳಿದಂತೆ ಜಸ್ಪ್ರೀತ್ ಬೂಮ್ರಾ, ಆರ್ ಅಶ್ವಿನ್ ಹಾಗೂ ಜಡೇಜಾ ತಲಾ ಒಂದು ವಿಕೆಟ್ ಪಡೆದುಕೊಂಡಿದ್ದಾರೆ. ಇಬ್ಬರು ಆಸಿಸ್ ಆಟಗಾರರು ರನೌಟ್ ಆದರು.
ಟೀಮ್ ಇಂಡಿಯಾ ಆಡುವ ಬಳಗ: ಶುಬ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ & ವಿಕೆಟ್ ಕೀಪರ್), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ
ಬೆಂಚ್: ತಿಲಕ್ ವರ್ಮಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ವಾಷಿಂಗ್ಟನ್ ಸುಂದರ್
ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಶೇನ್, ಕ್ಯಾಮೆರಾನ್ ಗ್ರೀನ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮಾರ್ಕಸ್ ಸ್ಟೋನಿಸ್, ಮ್ಯಾಥ್ಯೂ ಶಾರ್ಟ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಸೀನ್ ಅಬಾಟ್, ಆಡಮ್ ಝಂಪಾ
ಬೆಂಚ್: ಅಲೆಕ್ಸ್ ಕ್ಯಾರಿ, ಜೋಶ್ ಹ್ಯಾಜಲ್ವುಡ್, ನಾಥನ್ ಎಲ್ಲಿಸ್, ಸ್ಪೆನ್ಸರ್ ಜಾನ್ಸನ್, ತನ್ವೀರ್ ಸಂಘ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications