For Quick Alerts
ALLOW NOTIFICATIONS  
For Daily Alerts
 

IND Vs AUS ODI: ಭಾರತ ತಂಡದ ಅಭ್ಯಾಸ: ವಿಶ್ರಾಂತಿ ಪಡೆದ ಹಿರಿಯ ಆಟಗಾರರು

Ind Vs Aus 1st ODI: Unadkat And Shardul Practice At Wankhede While Test Players Take Rest

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು 2-1 ಅಂತರದಲ್ಲಿ ಗೆಲುವು ಸಾಧಿಸಿದ ಬಳಿಕ, ಮೂರು ಪಂದ್ಯಗಳ ಏಕದಿನ ಸರಣಿಗೆ ಸಜ್ಜಾಗುತ್ತಿದೆ. ಟೆಸ್ಟ್ ತಂಡದಲ್ಲಿ ಆಡಿದ್ದ ವಿರಾಟ್ ಕೊಹ್ಲಿ, ಶುಭಮನ್ ಗಿಲ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಮತ್ತು ಟೀಮ್ ಇಂಡಿಯಾದ ಆಟಗಾರರು ಮಾರ್ಚ್ 14ರಂದು ಮುಂಬೈಗೆ ಆಗಮಿಸಿದರು.

ಮಾರ್ಚ್ 17 ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಸರಣಿಯ ಮೊದಲ ಪಂದ್ಯ ನಡೆಯಲಿದೆ. ಇಂದು ಭಾರತ ತಂಡದ ಆಟಗಾರರಿಗೆ ಐಚ್ಛಿಕ ಅಭ್ಯಾಸ ಅವಧಿಯನ್ನು ನೀಡಲಾಗಿತ್ತು. ಟೆಸ್ಟ್ ಸರಣಿಯಲ್ಲಿ ಆಡಿದ ಆಟಗಾರರು ವಿಶ್ರಾಂತಿ ಪಡೆದರೆ, ಕೆಲವು ಆಟಗಾರರು ಅಭ್ಯಾಸದಲ್ಲಿ ಭಾಗವಹಿಸಿದರು.

ಮೊದಲ ಏಕದಿನ ಪಂದ್ಯಕ್ಕೆ ರೋಹಿತ್ ಶರ್ಮಾ ಅಲಭ್ಯರಾಗಿದ್ದು ಹಾರ್ದಿಕ್ ಪಾಂಡ್ಯ ನಾಯಕತ್ವ ವಹಿಸಿಕೊಂಡಿದ್ದಾರೆ. 10 ವರ್ಷಗಳ ಬಳಿಕ ಎಡಗೈ ವೇಗಿ ಜಯದೇವ್ ಉನದ್ಕತ್ ಭಾರತ ಏಕದಿನ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಶಾರ್ದೂಲ್ ಠಾಕೂರ್, ಜಯದೇವ್ ಉನದ್ಕತ್ ಬುಧವಾರ ವಾಂಖೆಡೆ ಅಂಗಳದಲ್ಲಿ ಅಭ್ಯಾಸದಲ್ಲಿ ಪಾಲ್ಗೊಂಡರು. ಗುರುವಾರ ಪಂದ್ಯದ ಮುನ್ನಾದಿನ ಭಾರತ ತಂಡದ ಎಲ್ಲಾ ಆಟಗಾರರು ಅಭ್ಯಾಸದಲ್ಲಿ ಭಾಗವಹಿಸಲಿದ್ದಾರೆ.

Ind Vs Aus 1st ODI: Unadkat And Shardul Practice At Wankhede While Test Players Take Rest

ಏಕದಿನ ಸರಣಿ ಗೆಲ್ಲುವ ವಿಶ್ವಾಸದಲ್ಲಿ ಭಾರತ

2023ರ ಆರಂಭದಲ್ಲಿ ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಯನ್ನು ಗೆದ್ದಿರುವ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧವೂ ಕೂಡ ಸರಣಿ ಗೆಲ್ಲುವ ವಿಶ್ವಾಸದಲ್ಲಿದೆ. ಶುಭಮನ್ ಗಿಲ್, ವಿರಾಟ್ ಕೊಹ್ಲಿ ಉತ್ತಮ ಫಾರ್ಮ್‌ನಲ್ಲಿರುವುದು ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.

75 ಅಂತಾರಾಷ್ಟ್ರೀಯ ಶತಕ ಬಾರಿಸಿರುವ ವಿರಾಟ್ ಕೊಹ್ಲಿ 76ನೇ ಶತಕ ಬಾರಿಸುವ ವಿಶ್ವಾಸದಲ್ಲಿದ್ದಾರೆ. ವಾಂಖೆಡೆಯಲ್ಲಿ ಬ್ಯಾಟಿಂಗ್ ಸ್ನೇಹಿ ಪಿಚ್ ಇರುವುದರಿಂದ ಹೈ ಸ್ಕೋರಿಂಗ್ ಪಂದ್ಯವನ್ನು ನಿರೀಕ್ಷೆ ಮಾಡಬಹುದಾಗಿದೆ. ಆಸ್ಟ್ರೇಲಿಯಾ ತಂಡದಲ್ಲಿ ಕೂಡ ಪ್ರಮುಖ ಆಟಗಾರರು ವಾಪಸಾಗಿದ್ದಾರೆ. ಡೇವಿಡ್ ವಾರ್ನರ್, ಗ್ಲೆನ್ ಮ್ಯಾಕ್ಸ್‌ವೆಲ್, ಆಶ್ಟನ್ ಅಗರ್ ಪ್ಲೇಯಿಂಗ್‌ ಇಲೆವೆನ್‌ನಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ.

Ind Vs Aus 1st ODI: Unadkat And Shardul Practice At Wankhede While Test Players Take Rest

ಏಕದಿನ ಸರಣಿಗೆ ಉಭಯ ತಂಡಗಳು

ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ಜಯದೇವ್ ಉನದ್ಕತ್.

ಆಸ್ಟ್ರೇಲಿಯಾ : ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್ (ನಾಯಕ), ಸೀನ್ ಅಬಾಟ್, ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲ್ಯಾಬುಸ್‌ಚಾಗ್ನೆ, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಜೈ ರಿಚರ್ಡ್‌ಸನ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಆಡಮ್ ಝಂಪಾ.

Story first published: Wednesday, March 15, 2023, 20:30 [IST]
Other articles published on Mar 15, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+