ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND-W vs AUS-W 1st T20: ಆಸ್ಟ್ರೇಲಿಯಾ ಮಹಿಳಾ ತಂಡಕ್ಕೆ ಬೃಹತ್ ಗುರಿ ನೀಡಿದ ಭಾರತ ವನಿತೆಯರು

IND vs AUS 1st T20: Australia Women Need 172 Runs To Win Against India Women

ಭಾರತ ಮಹಿಳಾ ಕ್ರಿಕೆಟ್ ತಂಡವು ಶುಕ್ರವಾರ (ಡಿಸೆಂಬರ್ 9) ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಐದು ಟಿ20 ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡವನ್ನು ಎದುರಿಸುತ್ತಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಮಹಿಳಾ ತಂಡ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 171 ರನ್ ಕಲೆಹಾಕಿತು. ಹೀಗಾಗಿ ಆಸ್ಟ್ರೇಲಿಯಾ ಮಹಿಳಾ ತಂಡಕ್ಕೆ 172 ರನ್‌ಗಳ ಗುರಿ ನೀಡಲಾಗಿದೆ.

Women's IPL: ಮಹಿಳಾ ಐಪಿಎಲ್ 2023-27ರ ಮಾಧ್ಯಮ ಹಕ್ಕುಗಳಿಗಾಗಿ ಬಿಡ್ ಆಹ್ವಾನಿಸಿದ ಬಿಸಿಸಿಐWomen's IPL: ಮಹಿಳಾ ಐಪಿಎಲ್ 2023-27ರ ಮಾಧ್ಯಮ ಹಕ್ಕುಗಳಿಗಾಗಿ ಬಿಡ್ ಆಹ್ವಾನಿಸಿದ ಬಿಸಿಸಿಐ

ಭಾರತದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಶಫಾಲಿ ವರ್ಮಾ ಮತ್ತು ಸ್ಮೃತಿ ಮಂಧಾನ ಉತ್ತಮ ಅಡಿಪಾಯ ಹಾಕಿದರು. ಮೊದಲ ವಿಕೆಟ್‌ಗೆ 2.5 ಓವರ್‌ಗಳಲ್ಲಿ 28 ರನ್ ಗಳಿಸಿದರು. ಈ ವೇಳೆ 21 ರನ್ ಬಾರಿಸಿ ಉತ್ತಮವಾಗಿ ಆಡುತ್ತಿದ್ದ ಶಫಾಲಿ ವರ್ಮಾ ಎಲಿಸ್ಸೆ ಪೆರ್ರಿ ಬೌಲಿಂಗ್‌ನಲ್ಲಿ ಔಟಾದರು.

IND vs AUS 1st T20: Australia Women Need 172 Runs To Win Against India Women

ನಂತರ ಬಂದ ಜೆಮಿಮಾ ರೋಡ್ರಿಗಸ್ ಖಾತೆ ತೆರೆಯದೆ ನಿರ್ಗಮಿಸಿದರು. ಈ ವೇಳೆ ಸ್ಮೃತಿ ಮಂಧಾನ ಜೊತೆಗೂಡಿದ ನಾಯಕಿ ಹರ್ಮನ್‌ಪ್ರೀತ್ ಕೌರ್ ತಂಡದ ಮೊತ್ತ ಹೆಚ್ಚಿಸಲು ಪ್ರಯತ್ನಿಸಿದರು. ತಂಡದ ಮೊತ್ತ 8 ಓವರ್‌ಗಳಲ್ಲಿ 59 ರನ್‌ಗಳಾಗಿದ್ದಾಗ 28 ರನ್ ಗಳಿಸಿದ್ದ ಸ್ಮೃತಿ ಮಂಧಾನ ವಿಕೆಟ್ ಒಪ್ಪಿಸಿದರು.

ಅಅನಂತರ ಕ್ರೀಸ್‌ಗೆ ಬಂದ ದೇವಿಕಾ ವೈದ್ಯ ಅಜೇಯ 25 ರನ್ ಗಳಿಸಿದರೆ, ಹರ್ಮನ್‌ಪ್ರೀತ್ ಕೌರ್ 21ರನ್, ರಿಚಾ ಘೋಷ್ 36 ರನ್ ಮತ್ತು ದೀಪ್ತಿ ಶರ್ಮಾ 36 ರನ್ ಗಳಿಸಿ ಭಾರತ ತಂಡದ ಮೊತ್ತವನ್ನು 170ರ ಗಡಿ ದಾಟಿಸಿದರು.

ಆಸ್ಟ್ರೇಲಿಯಾ ಪರ ಬೌಲಿಂಗ್‌ನಲ್ಲಿ ಎಲಿಸ್ಸೆ ಪೆರ್ರಿ 2 ಓವರ್‌ಗಳಲ್ಲಿ 10 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಕಿಮ್ ಗಾರ್ತ್, ಆಶ್ಲೀಗ್ ಗಾರ್ಡ್ನರ್, ಅನ್ನಾಬೆಲ್ ಸದರ್ಲ್ಯಾಂಡ್ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.

ಭಾರತ vs ಆಸ್ಟ್ರೇಲಿಯಾ ಮಹಿಳಾ ತಂಡಗಳ ಸಂಭಾವ್ಯ 11ರ ಬಳಗ
ಭಾರತ: ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ದೇವಿಕಾ ವೈದ್ಯ, ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ರಾಧಾ ಯಾದವ್, ಅಂಜಲಿ ಸರ್ವಾನಿ, ಮೇಘನಾ ಸಿಂಗ್, ರೇಣುಕಾ ಸಿಂಗ್,

ಆಸ್ಟ್ರೇಲಿಯಾ: ಅಲಿಸ್ಸಾ ಹೀಲಿ (ನಾಯಕಿ), ಬೆತ್ ಮೂನಿ, ಎಲಿಸ್ಸೆ ಪೆರ್ರಿ, ಆಶ್ಲೀಗ್ ಗಾರ್ಡ್ನರ್, ತಾಲಿಯಾ ಮೆಕ್‌ಗ್ರಾತ್, ಗ್ರೇಸ್ ಹ್ಯಾರಿಸ್, ಅನ್ನಾಬೆಲ್ ಸದರ್ಲ್ಯಾಂಡ್, ಜೆಸ್ ಜೊನಾಸೆನ್, ಅಲಾನಾ ಕಿಂಗ್, ಕಿಮ್ ಗಾರ್ತ್, ಮೇಗನ್ ಶುಟ್

Story first published: Friday, December 9, 2022, 20:36 [IST]
Other articles published on Dec 9, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X