IND vs AUS: ಮೊದಲ ಟಿ20 ಪಂದ್ಯದ ಟಾಸ್ ವರದಿ & ಆಡುವ 11ರ ಬಳಗ

ಇಂದಿನಿಂದ (ಸೆಪ್ಟೆಂಬರ್ 20) ಪ್ರಾರಂಭವಾಗುವ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿವೆ. ಮೊದಲ ಪಂದ್ಯವು ಮೊಹಾಲಿಯಲ್ಲಿ ನಡೆಯಲಿದ್ದು, ಉಳಿದ ಎರಡು ಪಂದ್ಯಗಳು ನಾಗ್ಪುರ (ಸೆಪ್ಟೆಂಬರ್ 23) ಮತ್ತು ಹೈದರಾಬಾದ್‌ನಲ್ಲಿ (ಸೆಪ್ಟೆಂಬರ್ 25) ನಡೆಯಲಿವೆ.
ಮೊಹಾಲಿಯ ಎಂಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಆರೋನ್ ಫಿಂಚ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಹೀಗಾಗಿ ರೋಹಿತ್ ಶರ್ಮಾ ನಾಯಕತ್ವದ ಭಾರತ ಮೊದಲು ಬ್ಯಾಟಿಂಗ್ ಮಾಡಲಿದೆ.
ಮೊದಲ ಪಂದ್ಯಕ್ಕೆ ದಿನೇಶ್ ಕಾರ್ತಿಕ್ ಆಯ್ಕೆಯಾಗಿರುವುದರಿಂದ ರಿಷಭ್ ಪಂತ್ ಬೆಂಚ್ ಕಾಯಿಸಲಿದ್ದಾರೆ. ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಉಮೇಶ್ ಯಾದವ್‌ಗೆ ಅವಕಾಶ ನೀಡಲಾಗಿದೆ.
ಆಸ್ಟ್ರೇಲಿಯ ತಂಡದ ಪರ ಟಿಮ್ ಡೇವಿಡ್ ಇಂದು ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಲಿದ್ದಾರೆ. ಈ ಪಂದ್ಯವು ಟಿ20 ವಿಶ್ವಕಪ್‌ಗೂ ಮುನ್ನ ಭಾರತದ ಅಂತಿಮ ಹಂತದ ತಯಾರಿಗೆ ನಾಂದಿ ಹಾಡಲಿದೆ.
ಯುಎಇನಲ್ಲಿ ನಿರಾಶಾದಾಯಕ ಟಿ20 ಏಷ್ಯಾ ಕಪ್ ಅಭಿಯಾನದ ನಂತರ, ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾವನ್ನು ಎದುರಿಸುತ್ತಿದೆ.
ಎರಡೂ ತಂಡಗಳು ಪರಸ್ಪರ ಪಂದ್ಯಗಳನ್ನು ಗೆಲ್ಲುವುದರ ಜೊತೆಗೆ, ಈ ವರ್ಷ ಅಕ್ಟೋಬರ್-ನವೆಂಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಮುಂಚಿತವಾಗಿ ಆಡುವ 11ರ ಬಳಗವನ್ನು ಹುಡುಕಲು ಎರಡೂ ತಂಡಗಳು ಸರಣಿಯನ್ನು ಬಳಸಿಕೊಳ್ಳುತ್ತವೆ.
ಭಾರತ ತಂಡದ ಆಡುವ 11ರ ಬಳಗ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಉಮೇಶ್ ಯಾದವ್, ಯುಜ್ವೇಂದ್ರ ಚಾಹಲ್
ಆಸ್ಟ್ರೇಲಿಯಾ ತಂಡದ ಆಡುವ 11ರ ಬಳಗ:
ಆರೋನ್ ಫಿಂಚ್ (ನಾಯಕ), ಕ್ಯಾಮೆರಾನ್ ಗ್ರೀನ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್, ನಾಥನ್ ಎಲ್ಲಿಸ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications