For Quick Alerts
ALLOW NOTIFICATIONS  
For Daily Alerts
 

IND vs AUS: ಟಿ20 ಕ್ರಿಕೆಟ್ ಇತಿಹಾಸದಲ್ಲಿ ಮಾರ್ಟಿನ್ ಗಪ್ಟಿಲ್ ದಾಖಲೆ ಸರಿಗಟ್ಟಿದ ರೋಹಿತ್ ಶರ್ಮಾ

IND vs AUS 1st T20: Rohit Sharma Equals Martin Guptill For Most Sixes In T20 Cricket

ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರು ಮೊಹಾಲಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದ ಸಮಯದಲ್ಲಿ ತಮ್ಮ ಮೊದಲ ಸಿಕ್ಸರ್ ಬಾರಿಸಿದಾಗ ಮತ್ತೊಮ್ಮೆ ದಾಖಲೆ ಪುಸ್ತಕವನ್ನು ಪ್ರವೇಶಿಸಿದರು.

ಸರಣಿಯ ಆರಂಭಿಕ ಪಂದ್ಯದಲ್ಲಿ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ನ್ಯೂಜಿಲೆಂಡ್ ಬ್ಯಾಟ್ಸ್‌ಮನ್ ಮಾರ್ಟಿನ್ ಗಪ್ಟಿಲ್ ಅವರನ್ನು ರೋಹಿತ್ ಶರ್ಮಾ ಸರಿಗಟ್ಟಿದರು.

ಮಾರ್ಟಿನ್ ಗಪ್ಟಿಲ್ ಮತ್ತು ರೋಹಿತ್ ಶರ್ಮಾ ಇಬ್ಬರೂ ಟಿ20 ಕ್ರಿಕೆಟ್‌ನಲ್ಲಿ 172 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಗಪ್ಟಿಲ್ ಅವರ ದಾಖಲೆಯನ್ನು ಮುರಿಯಲು ರೋಹಿತ್ ಶರ್ಮಾಗೆ 2 ಸಿಕ್ಸರ್‌ಗಳು ಬೇಕಾಗಿದ್ದವು. ಆದರೆ ಆಸ್ಟ್ರೇಲಿಯಾ ವಿರುದ್ಧ ಮೊಹಾಲಿ ಟಿ20 ಪಂದ್ಯದಲ್ಲಿ ಒಂದು ಸಿಕ್ಸರ್ ಬಾರಿಸಿದ ನಂತರ ಭಾರತದ ನಾಯಕನನ್ನು ಆಸೀಸ್ ವೇಗಿ ಜೋಶ್ ಹ್ಯಾಜಲ್‌ವುಡ್ ಔಟ್ ಮಾಡಿದರು.

ಇನ್ನು ಎರಡು ಬಾರಿಯ ವಿಶ್ವ ಚಾಂಪಿಯನ್‌ಗಾಗಿ ಕೇವಲ 79 ಪಂದ್ಯಗಳಲ್ಲಿ 124 ಸಿಕ್ಸರ್‌ಗಳನ್ನು ಸಿಡಿಸಿರುವ ವೆಸ್ಟ್ ಇಂಡೀಸ್ ಶ್ರೇಷ್ಠ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಅವರು ಗಪ್ಟಿಲ್-ರೋಹಿತ್ ನಂತರದ ಸ್ಥಾನದಲ್ಲಿದ್ದಾರೆ.

ಗಪ್ಟಿಲ್-ರೋಹಿತ್ ನಂತರದ ಸ್ಥಾನದಲ್ಲಿ ಕ್ರಿಸ್ ಗೇಲ್

ಗಪ್ಟಿಲ್-ರೋಹಿತ್ ನಂತರದ ಸ್ಥಾನದಲ್ಲಿ ಕ್ರಿಸ್ ಗೇಲ್

ಇಂಗ್ಲೆಂಡ್‌ನ ಮಾಜಿ ನಾಯಕ ಇಯಾನ್ ಮಾರ್ಗನ್ 120 ಸಿಕ್ಸರ್‌ಗಳನ್ನು ಬಾರಿಸಿದ್ದರೆ, ಆಸ್ಟ್ರೇಲಿಯಾದ ನಾಯಕ ಆರೋನ್ ಫಿಂಚ್ ತಮ್ಮ ಟಿ20 ಕ್ರಿಕೆಟ್ ವೃತ್ತಿಜೀವನದಲ್ಲಿ 117 ಗರಿಷ್ಠ ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ಮುಂಬರುವ ಐಸಿಸಿ ಟಿ20 ವಿಶ್ವಕಪ್ 2022ರಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯ ತಂಡವನ್ನು ಫಿಂಚ್ ಮುನ್ನಡೆಸಲಿದ್ದಾರೆ.

ಭಾರತದ ನಾಯಕ ರೋಹಿತ್ ಶರ್ಮಾ 17 ಪಂದ್ಯಗಳಲ್ಲಿ 26.43 ಸರಾಸರಿಯಲ್ಲಿ 423 ರನ್ ಗಳಿಸಿದ್ದರಿಂದ, ಬ್ಯಾಟ್‌ನೊಂದಿಗೆ 2022ರಲ್ಲಿ ಸಾಧಾರಣ ರನ್ ಗಳಿಕೆಯನ್ನು ಹೊಂದಿದ್ದಾರೆ. ರೋಹಿತ್ ರನ್ ಟ್ಯಾಲಿಯು ಎರಡು ಅರ್ಧ ಶತಕಗಳನ್ನು ಒಳಗೊಂಡಿದೆ, ಅತ್ಯಧಿಕ ಸ್ಕೋರ್ 72 ಮತ್ತು ಅವರ ಸ್ಟ್ರೈಕ್ ರೇಟ್ ಶೇ.143.38 ಆಗಿದೆ.

ಅತಿ ಹೆಚ್ಚು ಟಿ20 ಪಂದ್ಯಗಳನ್ನು ಆಡಿರುವ ರೋಹಿತ್ ಶರ್ಮಾ

ಅತಿ ಹೆಚ್ಚು ಟಿ20 ಪಂದ್ಯಗಳನ್ನು ಆಡಿರುವ ರೋಹಿತ್ ಶರ್ಮಾ

ಟಿ20 ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಹಲವಾರು ದಾಖಲೆಗಳನ್ನು ಹೊಂದಿದ್ದಾರೆ. ಅತಿ ಹೆಚ್ಚು ಟಿ20 ಪಂದ್ಯಗಳನ್ನು ಆಡುವುದರ ಮೂಲಕ ಪುರುಷ ಕ್ರಿಕೆಟಿಗರಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಲ್ಲದೆ, ರೋಹಿತ್ ಶರ್ಮಾ ತನ್ನ ಹೆಸರಿಗೆ ಅತಿ ಹೆಚ್ಚು ಶತಕಗಳನ್ನು (4) ಗಳಿಸಿದ ಬ್ಯಾಟರ್‌ಗಳಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ಯಾವುದೇ ಬ್ಯಾಟರ್‌ನಿಂದ ಅತ್ಯಧಿಕ ಸಂಖ್ಯೆಯ ಐವತ್ತು-ಪ್ಲಸ್ (31) ಸ್ಕೋರ್‌ಗಳ ವಿಷಯದಲ್ಲಿ ಅವರು ಮತ್ತೊಬ್ಬ ಭಾರತೀಯ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿಯೊಂದಿಗೆ ಮೊದಲ ಸ್ಥಾನ ಹಂಚಿಕೊಂಡಿದ್ದಾರೆ.

ಮೊದಲ ಟಿ20 ಪಂದ್ಯದ ಎರಡು ತಂಡಗಳ ಆಡುವ 11ರ ಬಳಗ

ಮೊದಲ ಟಿ20 ಪಂದ್ಯದ ಎರಡು ತಂಡಗಳ ಆಡುವ 11ರ ಬಳಗ

ಭಾರತ ತಂಡದ ಆಡುವ 11ರ ಬಳಗ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಉಮೇಶ್ ಯಾದವ್, ಯುಜ್ವೇಂದ್ರ ಚಾಹಲ್

ಆಸ್ಟ್ರೇಲಿಯಾ ತಂಡದ ಆಡುವ 11ರ ಬಳಗ: ಆರೋನ್ ಫಿಂಚ್ (ನಾಯಕ), ಕ್ಯಾಮೆರಾನ್ ಗ್ರೀನ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್, ನಾಥನ್ ಎಲ್ಲಿಸ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್.

Story first published: Tuesday, September 20, 2022, 20:37 [IST]
Other articles published on Sep 20, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+