Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಆಸ್ಟ್ರೇಲಿಯಾ ಟಿ20 ಸರಣಿ: ಮೊದಲ ಪಂದ್ಯಕ್ಕೆ ಆಸಿಸ್ ಪಡೆಯಿಂದ ಅಭ್ಯಾಸ ಆರಂಭ

Ind vs Aus 1st t20I: Australian players started practice in Mohali ahead of 1st T20

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಟಿ20 ಸರಣಿ ಮಂಗಳವಾರದಿಂದ ಆರಂಭವಾಗಲಿದೆ. ಮೂರು ಪಂದ್ಯಗಳ ಟಿ20 ಸರಣಿ ಇದಾಗಿದ್ದು ಎರಡು ತಂಡಗಳು ಕೂಡ ವಿಶ್ವಕಪ್‌ನ ಸಿದ್ಧತೆಯ ದೃಷ್ಟಿಯಿಂದ ಈ ಸರಣಿಯನ್ನು ಗಂಭೀರವಾಗಿ ಪರಿಗಣಿಸಿದೆ. ವಿಶ್ವಕಪ್‌ಗೆ ಕೆಲವೇ ದಿನಗಳು ಮಾತ್ರವೇ ಬಾಕಿಯಿರುವಾಗ ನಡೆಯುತ್ತಿರುವ ಈ ಸರಣಿ ಸಾಕಷ್ಟು ಕುತೂಹಲ ಮೂಡಿಸಿದೆ.

ಇನ್ನು ಈ ಸರಣಿಯಲ್ಲಿ ಭಾಗವಹಿಸಲು ಆಸ್ಟ್ರೇಲಿಯಾ ತಂಡ ಈಗಾಗಲೇ ಭಾರತಕ್ಕೆ ಆಗಮಿಸಿದೆ. ಮೊಹಾಲಿ ಮೊದಲ ಪಂದ್ಯಕ್ಕೆ ಆತಿಥ್ಯ ವಹಿಸುತ್ತಿದ್ದು ಆಸಿಸ್ ಪಡೆ ಮೊಹಾಲಿಯನ್ನು ಈಗಾಗಲೇ ತಲುಪಿ ಅಭ್ಯಾಸವನ್ನು ಆರಂಭಿಸಿದೆ. ಪಂಜಾಬ್ ಕ್ರಿಕೆಟ್ ಅಸೊಸಿಯೇಶನ್ ವಿಡಿಯೋವೊಂದನ್ನು ಹಂಚಿಕೊಂಡಿದ್ದು ಆಸಿಸ್ ಆಟಗಾರರು ಮೊದಲ ಪಂದ್ಯಕ್ಕೆ ತಯಾರಿಯನ್ನು ನಡೆಸುತ್ತಿದ್ದಾರೆ.

ಒಬ್ಬೊಬ್ಬರಾಗಿ ಆಗಮಿಸುತ್ತಿದ್ದಾರೆ ಭಾರತೀಯ ಆಟಗಾರರು

ಒಬ್ಬೊಬ್ಬರಾಗಿ ಆಗಮಿಸುತ್ತಿದ್ದಾರೆ ಭಾರತೀಯ ಆಟಗಾರರು

ಇನ್ನು ಈ ಸರಣಿಯಲ್ಲಿ ಭಾಗವಹಿಸಲು ರೋಹಿತ್ ಶರ್ಮಾ ಕೂಡ ಸಿದ್ಧವಾಗಿದ್ದು ಮೊಹಾಲಿಗೆ ಒಬ್ಬೊಬ್ಬರಾಗಿ ಆಗಮಿಸುತ್ತಿದ್ದಾರೆ. ವೇಗದ ಬೌಲರ್ ಹರ್ಷಲ್ ಪಟೇಲ್ ಮೊಹಾಲಿಗೆ ಆಗಮಿಸಿದ ಭಾರತ ತಂಡದ ಮೊದಲ ಆಟಗಾರನಾಗಿದ್ದಾರೆ. ಇತರ ಆಟಗಾರರು ಕೂಡ ಈಗ ತಂಡವನ್ನು ಸೇರಿಕೊಳ್ಳುತ್ತಿದ್ದಾರೆ.

ಗೆಲುವಿನ ಲಯಕ್ಕೆ ಮರಳಲಿದೆಯಾ ಭಾರತ

ಗೆಲುವಿನ ಲಯಕ್ಕೆ ಮರಳಲಿದೆಯಾ ಭಾರತ

ಏಷ್ಯಾ ಕಪ್‌ನಲ್ಲಿ ಭಾರತ ತಂಡ ನೀರಸ ಪ್ರದರ್ಶನ ನೀಡುವ ಮೂಲಕ ಸೂಪರ್ 4 ಹಂತದಿಂದ ಹೊರಬಿದ್ದಿತ್ತು. ಪಾಕಿಸ್ತಾನ ಹಾಗೂ ಶ್ರಿಲಂಕಾ ವಿರುದ್ಧ ಭಾರತ ಸೋಲು ಅನುಭವಿಸುವ ಮೂಲಕ ಮುಖಭಂಗಕ್ಕೆ ಒಳಗಾಯಿತು. ಬಳಿಕ ಅಫ್ಘಾನಿಸ್ತಾನದ ವಿರುದ್ಧ ಭರ್ಜರಿ ಗೆಲುವು ಪಡೆಯಿತಾದರೂ ಫೈನಲ್ ಹಂತಕ್ಕೇರಲು ಸಾಧ್ಯವಾಗಿರಲಿಲ್ಲ. ಇದೀಗ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಭಾರತ ಮತ್ತೆ ಗೆಲುವಿನ ಲಯವನ್ನು ಕಂಡುಕೊಳ್ಳಬೇಕಿದೆ. ಏಷ್ಯಾ ಕಪ್‌ನಲ್ಲಿ ಮಾಡಿದ ತಪ್ಪುಗಳನ್ನು ತಿದ್ದಿಕೊಂಡು ಮುಂದಿನ ವಿಶ್ವಕಪ್‌ಗೆ ಸಜ್ಜಾಗುವ ಅನಿವಾರ್ಯತೆಯಿದೆ.

ಸ್ಕ್ವಾಡ್‌ಗಳು ಹೀಗಿದೆ

ಸ್ಕ್ವಾಡ್‌ಗಳು ಹೀಗಿದೆ

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಬ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್, ಜಸ್ಪ್ರೀತ್ ಬೂಮ್ರಾ

ಆಸ್ಟ್ರೇಲಿಯಾ ತಂಡ: ಶಾನ್ ಅಬಾಟ್, ಆಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಆರೋನ್ ಫಿಂಚ್ (ನಾಯಕ), ಕ್ಯಾಮೆರೂನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಕೇನ್ ರಿಚರ್ಡ್ಸನ್, ಡೇನಿಯಲ್ ಸ್ಯಾಮ್ಸ್, ಸ್ಟೀವ್ ಸ್ಮಿತ್, ಮ್ಯಾಥ್ಯೂ ವೇಡ್, ಆಡಮ್ ಝಂಪಾ.

Story first published: Saturday, September 17, 2022, 14:07 [IST]
Other articles published on Sep 17, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+