ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಟಿ20 ಸರಣಿಯ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ರಾತ್ರಿ ಈ ಎರಡು ತಂಡಗಳು ಚುಟುಕು ಮಾದರಿಯಲ್ಲಿ ಮುಖಾಮುಖಿಯಾಗಲಿದೆ. ಯುವ ಆಟಗಾರರನ್ನೇ ಒಳಗೊಂಡಿರುವ ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸುತ್ತಿದ್ದರೆ ಆಸ್ಟ್ರೇಲಿಯಾ ತಂಡ ಕೂಡ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿದ್ದು ಮ್ಯಾಥ್ಯೂ ವೇಡ್ ನಾಯಕತ್ವದಲ್ಲಿ ಕಣಕ್ಕಿಳಿಯಲಿದೆ.
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಈ ಸರಣಿ ಐದು ಪಂದ್ಯಗಳ ಸುದೀರ್ಘ ಸರಣಿಯಾಗಿರಲಿದೆ. ಮುಂದಿನ ಟಿ20 ವಿಶ್ವಕಪ್ ದೃಷ್ಟಿಯಿಂದ ಎರಡು ತಂಡಗಳಿಗೂ ತಮ್ಮ ಆಟಗಾರರನ್ನು ಆಯ್ಕೆ ಮಾಡುವ ದೃಷ್ಟಿಯಿಂದ ಈ ಸರಣಿ ಅತ್ಯಂತ ನಿರ್ಣಾಯಕವಾಗಿರಲಿದೆ. ವಿಶಾಖಪಟ್ಟಣಂನ ವೈಎಸ್ ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ಈ ಸರಣಿಯ ಮೊದಲ ಪಂದ್ಯ ಇಂದು ಆಯೋಜನೆಯಾಗಲಿದೆ.

ಆದರೆ ಈ ಸರಣಿಯ ಮೊದಲ ಪಂದ್ಯಕ್ಕೆ ಮಳೆರಾಯನ ಆತಂಕವೂ ಇದೆ. ಹಾಗಾಗಿ ಪಂದ್ಯ ನಡೆಯುವ ತಾಣ ವಿಶಾಖಪಟ್ಟಣಂನಲ್ಲಿನ ಇಂದಿನ ಹವಾಮಾನ ವರದಿ ಹೇಗಿದೆ ನೋಡೋಣ..
ಹವಾಮಾನ ವರದಿ
ಅಕ್ಯುವೆದರ್ ಹವಾಮಾನ ವರದಿಯ ಪ್ರಕಾರನ ಪಂದ್ಯ ನಡೆಯುವ ದಿನವಾದ ಇಂದು ವಿಶಾಖಪಟ್ಟಣಂನಲ್ಲಿ ಮಳೆಯಾಗುವ ಸಾಧ್ಯತೆ ಶೇಕಡಾ 60ರಷ್ಟಿದೆ. ಹೀಗಾಗಿ ಪಂದ್ಯಕ್ಕೆ ಕೆಲ ಕಾಲ ಮಳೆ ಅಡ್ಡುಯುಂಟು ಮಾಡುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಈ ಸ್ಥಿತಿಯನ್ನು ಎದುರಿಸಲು ಮೈದಾನದ ಸಿಬ್ಬಂದಿಗಳು ಸಜ್ಜಾಗಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಮೈದಾನಕ್ಕೆ ಹೊದಿಕೆಗಳನ್ನು ಹಾಕಿಡಲಾಗಿದೆ.
ಆಸ್ಟ್ರೇಲಿಯಾ ತಂಡ: ಟ್ರಾವಿಸ್ ಹೆಡ್, ಮ್ಯಾಥ್ಯೂ ಶಾರ್ಟ್, ಸ್ಟೀವನ್ ಸ್ಮಿತ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್(ನಾಯಕ/ವಿಕೆಟ್ ಕೀಒರ್), ಶಾನ್ ಅಬಾಟ್, ಆಡಮ್ ಝಂಪಾ, ನಾಥನ್ ಎಲ್ಲಿಸ್, ಜೇಸನ್ ಬೆಹ್ರೆಂಡಾರ್ಫ್, ತನ್ವೀರ್ ಸಂಘ, ಕೇನ್ ರಿಚರ್ಡ್ಸನ್, ಆರನ್ ಹಾರ್ಡಿ
ಭಾರತ ತಂಡ: ಇಶಾನ್ ಕಿಶನ್(ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ಸೂರ್ಯಕುಮಾರ್ ಯಾದವ್(ನಾಯಕ), ತಿಲಕ್ ವರ್ಮಾ, ಶಿವಂ ದುಬೆ, ರಿಂಕು ಸಿಂಗ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಮುಖೇಶ್ ಕುಮಾರ್, ವಾಷಿಂಗ್ಟನ್ ಸುಂದರ್, ಅವೇಶ್ ಖಾನ್, ರುತುರಾಜ್ ಗಾಯಕ್ವಾಡ್, ಜಿತೇಶ್ ಶರ್ಮಾ