Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Perth Test: ಬುಮ್ರಾಸ್ತ್ರಕ್ಕೆ ಮಕಾಡೆ ಮಲಗಿದ ಆಸ್ಟ್ರೇಲಿಯಾ; ಭಾರತಕ್ಕೆ 46 ರನ್‌ಗಳ ಮುನ್ನಡೆ

ಪರ್ತ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಮೇಲುಗೈ ಸಾಧಿಸಿದೆ. ಭಾರತದ ಎದುರು ಆಸ್ಟ್ರೇಲಿಯಾ 104 ರನ್‌ಗಳಿಗೆ ಸರ್ವಪತನವಾಗಿದೆ. ಟೀಮ್ ಇಂಡಿಯಾ ನಾಯಕ ಜಸ್ಪ್ರೀತ್ ಬುಮ್ರಾ ಉರಿ ಬೌಲಿಂಗ್ ದಾಳಿಗೆ ತತ್ತರಿಸಿದ ಆಸೀಸ್ ಬ್ಯಾಟರ್‌ಗಳು ತವರಿನಲ್ಲಿ ಮಕಾಡೆ ಮಲಗಿದ್ದಾರೆ. ಇದರೊಂದಿಗೆ ಪರ್ತ್ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 46 ರನ್‌ಗ ಮುನ್ನಡೆ ಸಾಧಿಸಿದೆ.

ಪರ್ತ್‌ ಟೆಸ್ಟ್‌ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 49.4 ಓವರ್‌ಗಳಲ್ಲಿ 150 ರನ್‌ಗಳಿಗೆ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಮೊದಲ ದಿನದಾಟದ ಅಂತ್ಯಕ್ಕೆ 7 ವಿಕೆಟ್‌ ಕಳೆದುಕೊಂಡು 67 ರನ್‌ ಕಲೆ ಹಾಕಿತ್ತು. ಎರಡನೇ ದಿನದಾಟ ಆರಂಭಿಸಿದ ಆಸ್ಟ್ರೇಲಿಯಾ 104 ರನ್‌ಗಳಿಗೆ ಮೊದಲ ಇನ್ನಿಂಗ್ಸ್‌ ಅಂತ್ಯಗೊಳಿಸಿತು. ಆಸ್ಟ್ರೇಲಿಯಾ ಪರ ಅಲೆಕ್ಸ್ ಕ್ಯಾರಿ 21 ರನ್ ಗಳಿಸುವ ಮೂಲಕ ಗರಿಷ್ಠ ಸ್ಕೋರರ್ ಆದರು. ಅಲೆಕ್ಸ್ ಕ್ಯಾರಿ ಹೊರೆತುಪಡಿಸಿದರೆ, ಆಸೀಸ್‌ನ ಯಾವುದೇ ಬ್ಯಾಟರ್ ತವರಿನಲ್ಲಿ ಮಿಂಚಲು ಸಾಧ್ಯವಾಗಲಿಲ್ಲ. ಭಾರತದ ಪರ ನಾಯಕ ಜಸ್ಪ್ರೀತ್ ಬುಮ್ರಾ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದರು. ಜಸ್ಪ್ರೀತ್ ಬುಮ್ರಾ 5 ವಿಕೆಟ್‌ ಪಡೆದು ಮಿಂಚಿದರೆ, ಪಾದರ್ಪಣೆ ಪಂದ್ಯವಾಡುತ್ತಿರುವ ಯುವ ವೇಗಿ ಹರ್ಷಿತ್ ರಾಣಾ 3 ಉರುಳಿಸಿದರು. ಮೊಹಮ್ಮದ್ ಸಿರಾಜ್ 2 ವಿಕೆಟ್ ಕಬಳಿಸಿದರು.

IND vs AUS 1st Test Australia all out for 104 runs in first innings

ಕಾಂಗೂರು ಪಡೆಗೆ ಬುಮ್ರಾಸ್ತ್ರ

ಜಸ್ಪ್ರೀತ್ ಬುಮ್ರಾ ಪರ್ತ್ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೊದಲ ಇನ್ನಿಂಗ್ಸ್‌ನಲ್ಲಿ 5 ವಿಕೆಟ್‌ಗಳನ್ನು ಕಬಳಿಸುವ ಮೂಲಕ ದಾಖಲೆ ಮಾಡಿದರು. ಟೆಸ್ಟ್ ಕ್ರಿಕೆಟ್‌ನಲ್ಲಿ 11ನೇ ಬಾರಿ ಐದು ವಿಕೆಟ್‌ ಪಡೆದು ಸಂಭ್ರಮಿಸಿದರು. ಜಸ್ಪ್ರೀತ್ ಬುಮ್ರಾ 5 ವಿಕೆಟ್ ಪಡೆದರು. ಆಸ್ಟ್ರೇಲಿಯಾದ ಮೊದಲ ಇನ್ನಿಂಗ್ಸ್‌ನಲ್ಲಿ ಜಸ್ಪ್ರೀತ್ ಬುಮ್ರಾ ಅವರು ನಾಥನ್ ಮೆಕ್‌ಸ್ವೀನಿ, ಉಸ್ಮಾನ್ ಖವಾಜಾ, ಸ್ಟೀವ್ ಸ್ಮಿತ್, ಪ್ಯಾಟ್ ಕಮಿನ್ಸ್ ಮತ್ತು ಅಲೆಕ್ಸ್ ಕ್ಯಾರಿ ಅವರಿಗೆ ಪೆವಿಲಿಯನ್ ಹಾದಿ ತೋರಿಸಿದರು. ಈ ಮೂಲಕ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 416 ವಿಕೆಟ್ ಪಡೆದ ಸಾಧನೆಯನ್ನು ಮಾಡಿದರು.

ಮುಗ್ಗರಿಸಿದ ಕಾಂಗೂರುಗಳು

ಪರ್ತ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ತಂಡವನ್ನು 150 ರನ್‌ಗಳಿಗೆ ಆಲೌಟ್ ಮಾಡಿದ ಆಸ್ಟ್ರೇಲಿಯಾ ತವರಿನಲ್ಲಿ ಪ್ರಾಬಲ್ಯ ಸಾಧಿಸಿತ್ತು. ಆದರೆ, ಭಾರತ ತಂಡ ಆಸ್ಟ್ರೇಲಿಯಾಕ್ಕೆ ಪ್ರಾಬಲ್ಯವನ್ನು ಮುಂದುವರೆಸಲು ಬಿಡಲಿಲ್ಲ. ಕರಾರುವಕ್ಕಾದ ಬೌಲಿಂಗ್ ದಾಳಿಗೆ ನಡೆಸಿದ ಟೀಮ್ ಇಂಡಿಯಾ ವೇಗಿಗಳ ಆಸ್ಟ್ರೇಲಿಯಾ ಲೆಕ್ಕಚಾರವನ್ನು ಉಲ್ಟಾ ಮಾಡಿದರು.

ಮೊದಲ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ 50 ರನ್ ಗಳಿಸುವಷ್ಟರಲ್ಲೇ ಪ್ರಮುಖ ಐದು ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಉಸ್ಮಾನ್ ಖವಾಜಾ (8), ನಾಥನ್ ಮೆಕ್‌ಸ್ವೀನಿ (10), ಮಾರ್ನಸ್ ಲ್ಯಾಬುಸ್ಚಾಗ್ನೆ (2), ಸ್ಟೀವನ್ ಸ್ಮಿತ್ (0) ಮತ್ತು ಟ್ರಾವಿಸ್ ಹೆಡ್ (11) ತಂಡಕ್ಕೆ ಆಸರೆಯಾಗಲಿಲ್ಲ. ಬಳಿಕ ಬಂದ ಬ್ಯಾಟರ್‌ಗಳ ಮೇಲೆ ನಿರೀಕ್ಷೆ ಇದ್ದರೂ, ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿ ಹೋದರು. ಮಿಚೆಲ್ ಮಾರ್ಷ್ (6), ಅಲೆಕ್ಸ್ ಕ್ಯಾರಿ (21), ಪ್ಯಾಟ್ ಕಮಿನ್ಸ್ (3), ಮಿಚೆಲ್ ಸ್ಟಾರ್ಕ್ (26), ನಾಥನ್ ಲಿಯಾನ್ (5) ಹಾಗು ಜೋಶ್ ಹ್ಯಾಜಲ್‌ವುಡ್ (7) ತಂಡಕ್ಕೆ ಹೆಚ್ಚಿನ ಕೊಡುಗೆ ನೀಡಲು ಸಾಧ್ಯವಾಗಲಿಲ್ಲ.

Story first published: Saturday, November 23, 2024, 9:54 [IST]
Other articles published on Nov 23, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+