IND vs AUS 1st Test: ಆಸೀಸ್ ವಿರುದ್ಧ ಭಾರತದ ಆಡುವ 11ರ ಬಳಗ ಆಯ್ಕೆ ಮಾಡಿದ ಡಿಕೆ; ಶತಕವೀರರಿಗೆ ಸ್ಥಾನವಿಲ್ಲ!

ಗುರುವಾರ, ಫೆಬ್ರವರಿ 9ರಿಂದ ಆರಂಭವಾಗುವ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ 2023ರ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ.
ವಾಸಿಂ ಜಾಫರ್, ಸುನಿಲ್ ಜೋಶಿ ನಂತರ ಇದೀಗ, ಭಾರತ ಕ್ರಿಕೆಟ್ ತಂಡದ ಅನುಭವಿ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಅವರು ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಭಾರತದ ಆಡುವ 11ರ ಬಳಗವನ್ನು ಆಯ್ಕೆ ಮಾಡಿದ್ದಾರೆ.
ಬೆನ್ನು ನೋವಿನಿಂದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿರುವ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಬದಲಿಗೆ ಸ್ಫೋಟಕ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಅವರನ್ನು 5ನೇ ಕ್ರಮಾಂಕದಲ್ಲಿ ಆಡಿಸಲು ಅನುಭವಿ ಕ್ರಿಕೆಟಿಗ ದಿನೇಶ್ ಸಲಹೆ ನೀಡಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಮೂವರು ಸ್ಪಿನ್ನರ್‌ಗಳು ಮತ್ತು ಇಬ್ಬರು ವೇಗಿಗಳನ್ನು ಆಯ್ಕೆ ಮಾಡಿದ್ದಾರೆ.

ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಬ್ಯಾಟಿಂಗ್ ಇನ್ನಿಂಗ್ಸ್ ತೆರೆಯುವವರು
ಇನ್ನು ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಬ್ಯಾಟಿಂಗ್ ಇನ್ನಿಂಗ್ಸ್ ತೆರೆಯಲು ನಾಯಕ ರೋಹಿತ್ ಶರ್ಮಾ ಮತ್ತು ಉಪನಾಯಕ ಕೆಎಲ್ ರಾಹುಲ್ ಅವರನ್ನು ದಿನೇಶ್ ಕಾರ್ತಿಕ್ ಆಯ್ಕೆ ಮಾಡಿದ್ದಾರೆ.
ಕಳೆದ ಡಿಸೆಂಬರ್ 2022ರಲ್ಲಿ ಬಾಂಗ್ಲಾದೇಶ ಪ್ರವಾಸದಲ್ಲಿ ಚೊಚ್ಚಲ ಟೆಸ್ಟ್ ಶತಕ ಬಾರಿಸಿದ್ದ ಶುಭ್ಮನ್ ಗಿಲ್ ಅವರಿಗೆ ದಿನೇಶ್ ತಮ್ಮ ಆಡುವ 11ರ ಬಳಗದಲ್ಲಿ ಸ್ಥಾನ ನೀಡಿಲ್ಲ. ಆದರೆ, ಶುಭ್ಮನ್ ಗಿಲ್ ಎಲ್ಲಾ ಸ್ವರೂಪದಲ್ಲಿ ಪ್ರಚಂಡ ಫಾರ್ಮ್‌ನಲ್ಲಿದ್ದಾರೆ. ಇದೇ ವೇಳೆ ಟೆಸ್ಟ್ ತಂಡದಲ್ಲಿರುವ ಇಶಾನ್ ಕಿಶನ್ ಬದಲಾಗಿ ಕೆಎಸ್ ಭರತ್‌ಗೆ ವಿಕೆಟ್ ಕೀಪಿಂಗ್ ಜವಾಬ್ದಾರಿ ನೀಡಿದ್ದಾರೆ.

3, 4ನೇ ಕ್ರಮಾಂಕದಲ್ಲಿ ಚೇತೇಶ್ವರ- ವಿರಾಟ್ ಕೊಹ್ಲಿ
ಇನ್ನು ಭಾರತ ತಂಡದ ಮಧ್ಯಮ ಕ್ರಮಾಂಕದ ವಿಚಾರದಲ್ಲಿ ದಿನೇಶ್ ಕಾರ್ತಿಕ್ ಅವರು ಚೇತೇಶ್ವರ ಪೂಜಾರ ಮತ್ತು ವಿರಾಟ್ ಕೊಹ್ಲಿ ಅವರನ್ನು ಕ್ರಮವಾಗಿ ಮೂರು, ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿಸಲಿದ್ದಾರೆ.
ಈ ಮೊದಲ ತಿಳಿಸಿದಂತೆ, ತಮ್ಮ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್‌ಗೆ 5ನೇ ಸ್ಥಾನ ನೀಡಿದ್ದರೆ, ಚೊಚ್ಚಲ ಪಂದ್ಯವಾಡುತ್ತಿರುವ ವಿಕೆಟ್ ಕೀಪರ್ ಕೆಎಸ್ ಭರತ್ ಅವರನ್ನು 6ನೇ ಸ್ಥಾನದಲ್ಲಿ ನಿಯೋಜಿಸಿದ್ದಾರೆ.

ರವಿಚಂದ್ರನ್ ಅಶ್ವಿನ್, ಆಲ್‌ರೌಂಡರ್ ರವೀಂದ್ರ ಜಡೇಜಾ
ಭಾರತ ಟೆಸ್ಟ್ ತಂಡದ ಖಾಯಂ ವಿಕೆಟ್ ಕೀಪರ್- ಬ್ಯಾಟ್ಸ್‌ಮನ್ ರಿಷಭ್ ಪಂತ್ ಕಾರು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಪಂತ್ ಅನುಪಸ್ಥಿತಿಯಲ್ಲಿ ಕೆಎಸ್ ಭರತ್‌ಗೆ ವಿಕೆಟ್ ಕೀಪಿಂಗ್ ಜವಾಬ್ದಾರಿ ನೀಡಿದ್ದಾರೆ.
ಇನ್ನು 7ನೇ ಸ್ಥಾನದಲ್ಲಿ ರವಿಚಂದ್ರನ್ ಅಶ್ವಿನ್, ಆಲ್‌ರೌಂಡರ್ ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಅವರಿಗೆ 8 ಹಾಗೂ 9 ಸ್ಥಾನ ನೀಡಲಾಗಿದೆ. ಇಬ್ಬರು ವೇಗಿಗಳಾದ ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ಅವರು ದಿನೇಶ್ ಕಾರ್ತಿಕ್ ಅವರ ಆಡುವ 11ರ ಬಳಗದಲ್ಲಿದ್ದಾರೆ.
ದಿನೇಶ್ ಕಾರ್ತಿಕ್ ಆಯ್ಕೆಯ ಭಾರತದ ಆಡುವ 11ರ ಬಳಗ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications