Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs AUS 1st Test: ಮೊದಲ ಇನ್ನಿಂಗ್ಸ್‌ನಲ್ಲಿ 400 ರನ್‌ಗಳಿಗೆ ಭಾರತ ಆಲೌಟ್; ಭಾರೀ ಮುನ್ನಡೆ

IND vs AUS 1st Test: India All Out For 400 Runs In 1st innings; Huge Lead vs Australia

ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಭಾರೀ ಮುನ್ನಡೆ ಸಾಧಿಸಿದೆ.

ಪ್ರವಾಸಿ ಆಸ್ಟ್ರೇಲಿಯಾ ತಂಡ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 177 ರನ್‌ಗಳಿಗೆ ಸರ್ವಪತನ ಕಂಡ ನಂತರ, ಪ್ರತ್ಯುತ್ತರವಾಗಿ ಭಾರತ ತಂಡ ಎರಡನೇ ದಿನದಾಟದಂತ್ಯಕ್ಕೆ ರೋಹಿತ್ ಶರ್ಮಾ ಅವರ ಅಮೋಘ ಶತಕದ ನೆರವಿನಿಂದ 7 ವಿಕೆಟ್‌ಗೆ 321 ರನ್ ಕಲೆ ಹಾಕಿತ್ತು.

ಶನಿವಾರ ಮೂರನೇ ದಿನದಾಟ ಮುಂದುವರೆಸಿದ ಭಾರತ ಒಟ್ಟಾರೆ 400 ರನ್‌ ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ 223 ರನ್‌ಗಳ ಬೃಹತ್ ಮುನ್ನಡೆ ಗಳಿಸಿದೆ.

ಪಂದ್ಯ ಅರಂಭವಾಗುತ್ತಿದ್ದಂತೆ ರವೀಂದ್ರ ಜಡೇಜಾ 70 ರನ್‌ ಗಳಿಸಿ ಔಟಾದರು. 8ನೇ ವಿಕೆಟ್‌ಗೆ ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಜೋಡಿ 88 ರನ್‌ಗಳ ಜೊತೆಯಾಟ ನೀಡಿತು. ನಂತರ ಬಂದ ಮೊಹಮ್ಮದ್ ಶಮಿ 47 ಎಸೆತಗಳಲ್ಲಿ ತ್ವರಿತವಾಗಿ 37 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

IND vs AUS 1st Test: India All Out For 400 Runs In 1st innings; Huge Lead vs Australia

ಇನ್ನು ಆಲ್‌ರೌಂಡರ್ ಅಕ್ಷರ್ ಪಟೇಲ್ ವೃತ್ತಿಜೀವನದ ಅತ್ಯುತ್ತಮ ಇನ್ನಿಂಗ್ಸ್ ಆಡಿದರು. 174 ಎಸೆತಗಳನ್ನು ಎದುರಿಸಿದ ಅಕ್ಷರ್ ಪಟೇಲ್ 10 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 84 ರನ್ ಬಾರಿಸಿ ಔಟಾದರು.

ಆಸ್ಟ್ರೇಲಿಯಾ ಪರ ಬೌಲಿಂಗ್‌ನಲ್ಲಿ ಚೊಚ್ಚಲ ಪಂದ್ಯವಾಡುತ್ತಿರುವ ಟಾಡ್ ಮರ್ಫಿ 47 ಓವರ್‌ಗಳಲ್ಲಿ 124 ರನ್ ನೀಡಿ 7 ವಿಕೆಟ್ ಕಬಳಿಸಿದರು. ನಾಯಕ ಪ್ಯಾಟ್ ಕಮ್ಮಿನ್ಸ್ 2 ವಿಕೆಟ್ ಪಡೆದರೆ, ನಾಥನ್ ಲಿಯಾನ್ ಒಂದು ವಿಕೆಟ್ ಪಡೆದರು.

Story first published: Saturday, February 11, 2023, 12:32 [IST]
Other articles published on Feb 11, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+