Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

KL Rahul: ಸಂಕಷ್ಟದಲ್ಲಿದೆಯಾ ಟೆಸ್ಟ್ ತಂಡದಲ್ಲಿ ಕೆಎಲ್ ರಾಹುಲ್ ಸ್ಥಾನ?: ಸ್ಪಷ್ಟನೆ ನೀಡಿದ ಬ್ಯಾಟಿಂಗ್ ಕೋಚ್

Ind vs Aus 1st Test: Indian Batting coach Vikram Rathour reaction on KL Rahul spot in playing XI

ಟೀಮ್ ಇಂಡಿಯಾದ ಪ್ರಮುಖ ಆಟಗಾರ ಕೆಎಲ್ ರಾಹುಲ್ ಕಳೆದ ಒಂದು ವರ್ಷಗಳಿಂದ ಎಲ್ಲಾ ಮಾದರಿಯಲ್ಲೂ ರನ್‌ಗಳಿಸಲು ವಿಫಲವಾಗುತ್ತಿದ್ದಾರೆ. ಕೆಲ ಪಂದ್ಯಗಳಲ್ಲಿ ರಾಹುಲ್ ಉತ್ತಮ ಪ್ರದರ್ಶನ ನೀಡಿದರೂ ಸ್ಥಿರ ಪ್ರದರ್ಶನ ನೀಡಲು ಕೆಎಲ್ ರಾಹುಲ್‌ಗೆ ಸಾಧ್ಯವಾಗುತ್ತಿಲ್ಲ. ಅಲ್ಲದೆ ಮಹತ್ವದ ಪಂದ್ಯಗಳಲ್ಲಿ ರಾಹುಲ್ ವೈಫಲ್ಯ ಅನುಭವಿಸುವುದು ಸಾಮಾನ್ಯ ಎಂಬಂತಾಗಿದೆ. ಹೀಗಾಗಿ ಕೆಎಲ್ ರಾಹುಲ್ ಆಡುವ ಬಳಗದಲ್ಲಿ ಸ್ಥಾನ ಪಡೆಯಲು ಕೂಡ ಕೆಲ ಕ್ರಿಕೆಟ್ ಅಭಿಮಾನಿಗಳು ಹಾಗೂ ವಿಶ್ಲೇಷಕರು ವಿರೋಧಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಆಸ್ಟ್ರೇಲಿಯಾ ವಿರುದ್ಧದ ನಾಗ್ಪುರ ಟೆಸ್ಟ್‌ನ ಮೊದಲ ಪಂದ್ಯದಲ್ಲಿ ಕೆಎಲ್ ರಾಹುಲ್ ವೈಫಲ್ಯ ಮುಂದುವರಿದ ಕಾರಣ ಮತ್ತೆ ಕೆಎಲ್ ರಾಹುಲ್‌ರತ್ತ ಟೀಕೆಗಳು ವ್ಯಕ್ತವಾಗಲು ಆರಂಭಿಸಿದೆ.

ನ್ಯೂಜಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದ ಕೆಎಲ್ ರಾಹುಲ್ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ತಂಡಕ್ಕೆ ವಾಪಾಸಾಗಿದ್ದರು. ರೋಹಿತ್ ಶರ್ಮಾ ಜೊತೆಗೆ ಇನ್ನಿಂಗ್ಸ್ ಆರಂಭಿಸಿದ ರಾಹುಲ್ 71 ಎಸೆತಗಳಲ್ಲಿ 20 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಈ ವೈಫಲ್ಯದ ಬಳಿಕ ರಾಹುಲ್ ವಿರುದ್ಧ ಮತ್ತೆ ಟೀಕೆಗಳು ವ್ಯಕ್ತವಾಗಲು ಆರಂಬಿಸಿದೆ. ಈ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಪ್ರತಿಕ್ರಿಯಿಸಿದ್ದಾರೆ.

"ಕಳೆದ ಹತ್ತು ಇನ್ನಿಂಗ್ಸ್‌ಗಳಲ್ಲಿ ಕೆಎಲ್ ರಾಹುಲ್ ಒಂದೆರಡು ಶತಕ ಸಿಡಿಸಿದ್ದಾರೆ ಒಂದೆರಡು ಅರ್ಧ ಶತಕಗಳನ್ನು ಸಿಡಿಸಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ, ಇಂಗ್ಲೆಂಡ್‌ನಲ್ಲಿಯೂ ಅವರು ಶತಕಗಳಿಸಿದ್ದಾರೆ. ಆತನ ಸ್ಥಾನ ಆಡುವ ಬಳಗದಿಂದ ಹೊರಬೀಳುವ ಹಂತದಲ್ಲಿದೆ ಎಂದು ನನಗೆ ಅನಿಸುತ್ತಿಲ್ಲ" ಎಂದಿದ್ದಾರೆ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್. ಈ ಮೂಲಕ ಟೀಮ್ ಇಂಡಿಯಾದ ಯುವ ಆಟಗಾರನ ಬೆನ್ನಿಗೆ ನಿಂತಿದ್ದಾರೆ.

ಇನ್ನು ಇದಕ್ಕೂ ಮುನ್ನ ಟೀಮ್ ಇಂಡಿಯಾದ ಮಾಜಿ ಆಟಗಾರ ಹರ್ಭಜನ್ ಸಿಂಗ್ ಕೆಎಲ್ ರಾಹುಲ್ ಬ್ಯಾಟಿಂಗ್ ಶೈಲಿಯ ಬಗ್ಗೆ ಮಾತನಾಡಿದ್ದರು. ರಾಹುಲ್ ಆಕ್ರಮಣಕಾರಿಯಾಗಿ ಆಡಿದ್ದರೆ ಹೆಚ್ಚಿನ ರನ್‌ಗಳನ್ನು ಗಳಿಸಬಹುದಾಗಿತ್ತು ಎಂದಿದ್ದರು ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್.

"ಕೆಎಲ್ ರಾಹುಲ್ ರನ್‌ಗಳಿಸಲು ಹೆಚ್ಚಿನ ಸಮಯವನ್ನು ತೆಗೆದುಕೊಳ್ಳುವ ಮೂಲಕ ನಿರಾಸೆ ಮೂಡಿಸಿದರು. ಆತ ಆಕ್ರಮಣಕಾರಿಯಾಗಿ ಆಡಿದ್ದರೆ ಹೆಚ್ಚಿನ ರನ್‌ಗಳನ್ನು ಗಳಿಸಬಹುದಾಗಿತ್ತು ಎಂಬುದು ನನ್ನ ಅನಿಸಿಕೆ. ಎರಡನೇ ಇನ್ನಿಂಗ್ಸ್‌ನಲ್ಲಿ ಅವಕಾಶ ದೊರೆತರೆ ಆತ ತನ್ನ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವ ದೃಷ್ಟಿಯಿಂದ ಉತ್ತಮ ರನ್‌ಗಳನ್ನು ಗಳಿಸಬೇಕಿದೆ" ಎಂದಿದ್ದಾರೆ ಕೆಎಲ್ ರಾಹುಲ್. ಹರ್ಭಜನ್ ಸಿಂಗ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡುತ್ತಾ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ನಾಗ್ಪುರದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದ ಎರಡನೇ ದಿನದಾಟ ಮುಕ್ತಾಯವಾಗಿದ್ದು ಟೀಮ್ ಇಂಡಿಯಾ ಅದ್ಭುತವಾಗಿ ಪ್ರದರ್ಶನ ನೀಡಿದೆ. ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 9ನೇ ಟೆಸ್ಟ್ ಶತಕ ಸಿಡಿಸಿದರೆ ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ಅರ್ಧ ಶತಕ ಸಿಡಿಸಿ ಮೂರನೇ ದಿನಕ್ಕೆ ಕ್ರೀಸ್‌ ಕಾಯ್ದುಕೊಂಡಿದ್ದಾರೆ.

Story first published: Friday, February 10, 2023, 20:25 [IST]
Other articles published on Feb 10, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+