IND vs AUS 1st Test: ಕಳಪೆ ಪ್ರದರ್ಶನಕ್ಕೆ ಆಸ್ಟ್ರೇಲಿಯಾ ತಂಡದ ವಿರುದ್ಧ ಕಿಡಿಕಾರಿದ ಮ್ಯಾಥ್ಯೂ ಹೇಡನ್

ಗುರುವಾರ, ಫೆಬ್ರವರಿ 9ರಿಂದ ನಾಗ್ಪುರದಲ್ಲಿ ಆರಂಭಗೊಂಡಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯ ಮೊದಲ ಇನ್ನಿಂಗ್ಸ್‌ನಲ್ಲಿ ಪ್ರವಾಸಿ ತಂಡದ ವಿರುದ್ಧ ಆತಿಥೇಯ ತಂಡ ಮೇಲುಗೈ ಸಾಧಿಸಿದೆ.
ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ ಪ್ಯಾಟ್ ಕಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ತಂಡದ ವಿರುದ್ಧ ಮಾಜಿ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ಕಿಡಿಕಾರಿದ್ದಾರೆ.
IND vs AUS: ಭಾರೀ ಚರ್ಚೆಗೆ ಗ್ರಾಸವಾದ ರವೀಂದ್ರ ಜಡೇಜಾ ವಿಡಿಯೋ; ಬೆರಳಿಗೆ ಹಚ್ಚಿಕೊಂಡಿದ್ದೇನು ಎಂದು ಪ್ರಶ್ನಿಸಿದ ಮೈಕಲ್ ವಾನ್
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಪ್ರವಾಸಿ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 177 ರನ್‌ಗಳಿಗೆ ಸರ್ವಪತನ ಕಂಡಿತು. 177 ರನ್‌ಗಳಿಗೆ ಪ್ರತ್ಯುತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ ಮೊದಲ ದಿನದಾಟದಂತ್ಯಕ್ಕೆ ನಾಯಕ ರೋಹಿತ್ ಶರ್ಮಾ ಅಜೇಯ 56 ರನ್‌ಗಳ ನೆರವಿನಿಂದ 1 ವಿಕೆಟ್‌ಗೆ 77 ರನ್ ಕಲೆ ಹಾಕಿದೆ. ಮೊದಲ ಇನ್ನಿಂಗ್ಸ್ ಮುನ್ನಡೆ ಸಾಧಿಸಲು ಇನ್ನೂ 100 ರನ್ ಗಳಿಸಬೇಕಿದೆ.

2022ರ ಏಷ್ಯಾಕಪ್ ವೇಳೆ ಆದ ಮೊಣಕಾಲು ಗಾಯದ ನಂತರ ಶಸ್ತ್ರಚಿಕಿತ್ಸೆಗೆ ಒಳಗಾಗಿ ಪುನರಾಗಮನ ಮಾಡಿದ ಆಲ್‌ರೌಂಡರ್ ರವೀಂದ್ರ ಜಡೇಜಾ 22 ಓವರ್‌ಗಳಲ್ಲಿ 47 ರನ್ ನೀಡಿ 5 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಆಸ್ಟ್ರೇಲಿಯಾ ತಂಡದ ಬೆನ್ನೆಲುಬು ಮುರಿದರು.
ಇದೇ ವೇಳೆ ರವಿಚಂದ್ರನ್ ಅಶ್ವಿನ್ 15.5 ಓವರ್‌ಗಳಲ್ಲಿ 42 ರನ್ ನೀಡಿ 3 ವಿಕೆಟ್ ಪಡೆದರು ಮತ್ತು ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ವೇಗದ 450 ವಿಕೆಟ್‌ಗಳನ್ನು ಪೂರೈಸಿದರು.
ಭಾರತದ ವೇಗದ ಬೌಲರ್‌ಗಳಾದ ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ತಲಾ ಒಂದು ವಿಕೆಟ್ ಪಡೆದರು. 123 ಎಸೆತಗಳಲ್ಲಿ 49 ರನ್ ಗಳಿಸಿದ ಮಾರ್ನಸ್ ಲ್ಯಾಬುಶ್ಚಾಗ್ನೆ ಪ್ರವಾಸಿ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು.

ಪಾಟ್ ಕಮ್ಮಿನ್ಸ್ ಇಂದು ಅತ್ಯಂತ ಕಳಪೆ ಬೌಲಿಂಗ್ ಮಾಡಿದರು: ಮ್ಯಾಥ್ಯೂ ಹೇಡನ್
"ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಪಿಚ್‌ನ ಲಾಭವನ್ನು ಪಡೆಯಲಿಲ್ಲ. ಹೊಸ ಚೆಂಡಿನ ವಿರುದ್ಧ ಬ್ಯಾಟಿಂಗ್ ಮಾಡುವುದು ಕಠಿಣವಾಗಿತ್ತು ಮತ್ತು ಉಸ್ಮಾನ್ ಖವಾಜಾ ಸೇರಿದಂತೆ ಆರಂಭಿಕ ಎರಡು ವಿಕೆಟ್‌ಗಳು ಬಿದ್ದದ್ದು ಆಸ್ಟ್ರೇಲಿಯಾ ತಂಡಕ್ಕೆ ಹಿನ್ನಡೆಯಾಯಿತು. ಆ ಮೂರು ಆಟಗಾರರು ಸೊನ್ನೆ ಸುತ್ತಿದರು ಮತ್ತು ಮೂರು ಆಟಗಾರರು ಕೇವಲ ಒಂದು ರನ್ ಗಳಿಸಿದರು. ನೀವು ಭಾರತದಲ್ಲಿ ಆಡುವಾಗ ಇಂತಹ ಪರಿಸ್ಥಿತಿಯನ್ನು ತಪ್ಪಿಸಬೇಕು," ಎಂದು ಸ್ಟಾರ್ ಸ್ಪೋರ್ಟ್ಸ್ ಜೊತೆಗಿನ ಸಂವಾದದಲ್ಲಿ ಮ್ಯಾಥ್ಯೂ ಹೇಡನ್ ಹೇಳಿದರು.
"ಆಸೀಸ್ ನಾಯಕ ಪಾಟ್ ಕಮ್ಮಿನ್ಸ್ ಇಂದು ಅತ್ಯಂತ ಕಳಪೆ ಬೌಲಿಂಗ್ ಮಾಡಿದರು. ತಮ್ಮ ಲೈನ್ ಮತ್ತು ಲೆಂಗ್ತ್ ಬೌಲಿಂಗ್ ಅನ್ನು ಮರೆತಿದ್ದರು ಮತ್ತು ಎಲ್ಲಿ ಹಾಕುತ್ತಿದ್ದೇನೆ ಎಂದು ಅವರಿಗೆ ತಿಳಿದಿರಲಿಲ್ಲ," ಎಂದು ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ತಿಳಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications