
ಟೀಮ್ ಇಂಡಿಯಾದ ಅನುಭವಿ ಸ್ಪಿನ್ನರ್ ಆರ್ ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಅಶ್ವಿನ್ ಆಸಿಸ್ ಆಟಗಾರ ಅಲೆಕ್ಸ್ ಕ್ಯಾರಿ ಅವರನ್ನು ಬೌಲ್ಡ್ ಆಡುವ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ 450ನೇ ವಿಕೆಟ್‌ಗಳ ಮೈಲಿಗಲ್ಲು ತಲುಪಿದ್ದಾರೆ ಆರ್ ಅಶ್ವಿನ್. ಇದರ ಜೊತೆಗೆ ಟೀಮ್ ಇಂಡಿಯಾದ ದಿಗ್ಗಜ ಆಟಗಾರ ಅನಿಲ್ ಕುಂಬ್ಳೆ ಹೆಸರಿನಲ್ಲಿದ್ದ ಪ್ರಮುಖ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ಟೆಸ್ಟ್‌ನಲ್ಲಿ ಅತ್ಯಂತ ವೇಗವಾಗಿ 450 ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ ಆರ್ ಅಶ್ವಿನ್. ಇಲ್ಲಿಯವರೆಗೆ ಈ ದಾಖಲೆ ಭಾರತದ ದಿಗ್ಗಜ ಕ್ರಿಕೆಟಿಗ ಮಾಜಿ ನಾಯಕ ಅನಿಲ್ ಕುಂಬ್ಳೆ ಹೆಸರಿನಲ್ಲಿತ್ತು. 89ನೇ ಟೆಸ್ಟ್ ಪಂದ್ಯದಲ್ಲಿ 450ನೇ ವಿಕೆಟ್ ಪಡೆಯುವ ಮೂಲಕ ರವಿಚಂದ್ರನ್ ಅಶ್ವಿನ್ ಕುಂಬ್ಳೆ ದಾಖಲೆ ಮುರಿದಿದ್ದಾರೆ.
ಇನ್ನು ವಿಶ್ವ ಕ್ರಿಕೆಟ್‌ನಲ್ಲಿಯೂ ಆರ್ ಅಶ್ವಿನ್ ಅತ್ಯಂತ ವೇಗವಾಗಿ ಈ ಮೈಲಿಗಲ್ಲಿ ದಾಟಿದ ಆಟಗಾರರ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ. ಶ್ರೀಲಂಕಾದ ದಿಗ್ಗಜ ಆಟಗಾರ ಮುತ್ತಯ್ಯ ಮುರಳೀಧರನ್ ಮಾತ್ರವೇ ಅಶ್ವಿನ್ ಅವರಿಗಿಂತ ಮುಂದಿದ್ದಾರೆ. ಮುರಳೀಧರನ್ 80ನೇ ಪಂದ್ಯದಲ್ಲಿ ಈ ಮೈಲಿಗಲ್ಲು ದಾಟಿದ್ದರು.
ಪಂದ್ಯದಲ್ಲಿ ಭಾರತದ ಹಿಡಿತ: ಇನ್ನು ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಆರಂಭದಿಂದಲೇ ಹಿಡಿತವನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಮೊದಲಿಗೆ ಟೀಮ್ ಇಂಡಿಯಾದ ವೇಗಿಗಳಾದ ಮೊಹಮ್ಮದ್ ಸಿರಾಜ್ ಹಾಗೂ ಮೊಹಮ್ಮದ್ ಶಮಿ ಆಸಿಸ್ ಪಡೆಯ ಆರಂಭಿಕರನ್ನು ಔಟ್ ಮಾಡಿದರು. ಬಳಿಕ ಆಸ್ಟ್ರೇಲಿಯಾದ ಸ್ಟಾರ್ ಆಟಗಾರರಾದ ಸ್ಟೀವ್ ಸ್ಮಿತ್ ಹಾಗೂ ಮಾರ್ನಸ್ ಲ್ಯಾಬುಶೈನ್ ಆಸ್ಟ್ರೇಲಿಯಾ ತಂಡಕ್ಕೆ ಚೇತರಿಕೆ ನೀಡುವ ಪ್ರಯತ್ನ ನಡೆಸಿದರು.
ಬಳಿಕ ಸ್ಪಿನ್ನರ್ ರವೀಂದ್ರ ಜಡೇಜಾ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ನೀಡಿದರು. ಮಾರ್ನಸ್ ಲ್ಯಾಬುಶೈನ್ ಅವರನ್ನು ಸ್ಟಂಪ್ ಔಟ್ ಮಾಡುವ ಮೂಲಕ ಈ ಜೋಡಿಯನ್ನು ಬೇರ್ಪಡಿಸಿದ ಜಡ್ಡು ಮುಂದಿನ ಎಸೆತದಲ್ಲಿ ಮತ್ತೊಂದು ವಿಕೆಟ್ ಪಡೆದರು. ಬಳಿಕ ಸ್ಟೀವ್ ಸ್ಮಿತ್ ಕೂಡ ಜಡೇಜಾಗೆ ವಿಕೆಟ್ ಒಪ್ಪಿಸಿದ್ದಾರೆ. ಅದಾದ ಬಳಿಕ ಆರ್ ಅಶ್ವಿನ್ ಎರಡು ವಿಕೆಟ್ ಪಡೆದರೆ ಮತ್ತೊಂದು ವಿಕೆಟ್ ಜಡೇಜಾ ಪಾಲಾಗಿದೆ. ಟೀ ವಿರಾಮದ ವೇಳೆಗೆ ಆಸ್ಟ್ರೇಲಿಯಾ ತಂಡ 60 ಓವರ್‌ಗಳಲ್ಲಿ 174 ರನ್‌ಗಳಿಸಿ 8 ವಿಕೆಟ್ ಕಳೆದುಕೊಂಡಿದೆ.
ಇತ್ತಂಡಗಳ ಆಡುವ ಬಳಗ
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಬೆಂಚ್: ಶುಬ್ಮನ್ ಗಿಲ್, ಇಶಾನ್ ಕಿಶನ್, ಕುಲದೀಪ್ ಯಾದವ್, ಜಯದೇವ್ ಉನದ್ಕತ್, ಉಮೇಶ್ ಯಾದವ್
ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್, ಮ್ಯಾಟ್ ರೆನ್ಶಾ, ಪೀಟರ್ ಹ್ಯಾಂಡ್ಸ್ಕಾಂಬ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ನಾಥನ್ ಲಿಯಾನ್, ಟಾಡ್ ಮರ್ಫಿ, ಸ್ಕಾಟ್ ಬೋಲ್ಯಾಂಡ್
ಬೆಂಚ್: ಟ್ರಾವಿಸ್ ಹೆಡ್, ಮಿಚೆಲ್ ಸ್ವೆಪ್ಸನ್, ಆಷ್ಟನ್ ಅಗರ್, ಮಿಚೆಲ್ ಸ್ಟಾರ್ಕ್, ಕ್ಯಾಮರೂನ್ ಗ್ರೀನ್, ಲ್ಯಾನ್ಸ್ ಮೋರಿಸ್