Ind vs Aus 1st Test: ವಿಕೆಟ್ ಹಿಂದೆ ಕೆಎಸ್ ಭರತ್ ಮಿಂಚು: ಆಸ್ಟ್ರೇಲಿಯಾಗೆ ಆಘಾತ ನೀಡಿದ ಜಡೇಜಾ

ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯ ರೋಚಕವಾಗಿ ಆರಂಭವಾಗಿದೆ. ಪಂದ್ಯದ ಆರಂಭದಲ್ಲಿಯೇ ಟೀಮ್ ಇಂಡಿಯಾದ ವೇಗಿಗಳು ಭಾರತಕ್ಕೆ ಎರಡು ಮೇಲುಗೈ ತಂದುಕೊಟ್ಟ ಬಳಿಕ ಆಸ್ಟ್ರೇಲಿಯಾ ಅದ್ಭುತವಾಗಿ ಚೇತರಿಕೆ ಕಂಡಿತು. ಆದರೆ ಭೋಜನ ವಿರಾಮದ ಬಳಿಕ ಟೀಮ್ ಇಂಡಿಯಾ ಪರವಾಗಿ ಮತ್ತೆ ಅದ್ಭುತವಾಗಿ ಕಮ್‌ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದೆ. ಈ ಸಂದರ್ಭದಲ್ಲಿ ಟೀಮ್ ಇಂಡಿಯಾದ ಆಲ್‌ರೌಂಡರ್ ರವೀಂದ್ರ ಜಡೇಜಾ ಹಾಗೂ ವಿಕೆಟ್ ಕೀಪರ್ ಶ್ರೀಕರ್ ಭರತ್ ಭಾರತದ ಈ ಕಮ್‌ಬ್ಯಾಕ್‌ನಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ.
2 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಆಸ್ಟ್ರೇಲಿಯಾ ತಂಡಕ್ಕೆ ಸ್ಟೀವ್ ಸ್ಮಿತ್ ಹಾಗೂ ಮಾರ್ನಸ್ ಲ್ಯಾಬುಶೈನ್ ಅದ್ಭುತವಾಗಿ ಚೇತರಿಕೆ ನೀಡಿದರು. ಈ ಜೋಡಿ 82 ರನ್‌ಗಳ ಜೊತೆಯಾಟ ನೀಡುವ ಮೂಲಕ ಭಾರತದ ಬೌಲಿಂಗ್ ಪಡೆಗೆ ಕಗ್ಗಂಟಾಗುವ ಸೂಚನೆ ನೀಡಿದ್ದರು. ಆದರೆ ಈ ಸಂದರ್ಭದಲ್ಲಿ ರವೀಂದ್ರ ಜಡೇಜಾ ಎಸೆತದಲ್ಲಿ ಶ್ರೀಕರ್ ಭರತ್ ಅವರ ಮಿಂಚಿನ ಸ್ಟಂಪಿಂಗ್‌ಗೆ ಮಾರ್ನಸ್ ಲ್ಯಾಬುಶೈನ್ ವಿಕೆಟ್ ಕಳೆದುಕೊಂಡಿದ್ದಾರೆ. ಈ ಮೂಲಕ ಭಾರತ ಈ ಪಂದ್ಯದಲ್ಲಿ ಮತ್ತೆ ಕಮ್‌ಬ್ಯಾಕ್ ಮಾಡಲು ಸಾಧ್ಯವಾಗಿದೆ.

ಮುಂದಿನ ಎಸೆತದಲ್ಲಿಯೇ ಮತ್ತೊಂದು ವಿಕೆಟ್
ಇನ್ನು ಮಾರ್ನಸ್ ಲ್ಯಾಬುಶೈನ್ ವಿಕೆಟ್ ಪಡೆದ ಮುಂದಿನ ಎಸೆತದಲ್ಲಿಯೇ ರವೀಂದ್ರ ಜಡೇಜಾ ಟೀಮ್ ಇಂಡಿಯಾಗೆ ಮತ್ತೊಂದು ವಿಕೆಟ್ ತಂದುಕೊಡುವಲ್ಲಿ ಯಶಸ್ವಿಯಾದರು. ಮ್ಯಾಟ್ ರೆನ್ಶಾ ಅವರನ್ನು ಎಲ್‌ಬಿಡ್ಲ್ಯು ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾದ ಜಡೇಜಾ ತಂಡಕ್ಕೆ ಮೇಲುಗೈ ತಂದುಕೊಟ್ಟಿದ್ದಾರೆ. ಈ ಮೂಲಕ 84 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡು ಚೇತರಿಕೆಯ ಹಾದಿಯಲ್ಲಿದ್ದ ಆಸ್ಟ್ರೇಲಿಯಾ ಅದೇ ಮೊತ್ತಕ್ಕೆ 4 ವಿಕೆಟ್ ಕಳೆದುಕೊಳ್ಳುವ ಮೂಲಕ ಸಂಕಷ್ಟಕ್ಕೆ ಸಿಲುಕಿತು.

ವಿಕೆಟ್ ಹಿಂದೆ ಮಿಂಚಿದ ಶ್ರೀಕರ್ ಭರತ್
ಇನ್ನು ಮೊದಲ ಪಂದ್ಯದಲ್ಲಿ ಆಡುತ್ತಿರುವ ಶ್ರೀಕರ್ ಭರತ್ ವಿಕೆಟ್ ಕೀಪರ್ ಆಗಿ ಗಮನಸೆಳೆದಿದ್ದಾರೆ. ಮೊದಲಿಗೆ ಪಂದ್ಯದ ಆರಂಭದಲ್ಲಿ ಉಸ್ಮಾನ್ ಖವಾಜ ಅವರನ್ನು ಎಲ್‌ಬಿಡ್ಲ್ಯು ಬಲೆಗೆ ಬೀಳಿಸಿದಾಗ ಅಂಪಾಯರ್ ಮನವಿಯನ್ನು ತಿರಸ್ಕರಿಸಿದ ಬಳಿಕ ಡಿಆರ್‌ಎಸ್ ಮೊರೆ ಹೋಗಲು ಶ್ರೀಕರ್ ಭರತ್ ನೀಡಿದ ಅಭಿಪ್ರಾಯ ಮುಖ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಡಿಆರ್ಎಸ್ ಮೊರೆ ಹೋದ ಭಾರತ ಅದರಲ್ಲಿ ಯಶಸ್ಸು ಸಾಧಿಸಿ ಮೊದಲ ವಿಕೆಟ್ ಪಡೆಯಲು ಸಾಧ್ಯವಾಗಿತ್ತು. ಅದಾದ ಬಳಿಕ ಲ್ಯಾಬುಶೈನ್ ಅವರನ್ನು ಸ್ಟಂಪ್ ಮಾಡುವ ಮೂಲಕ ವಿಕೆಟ್ ಹಿಂದೆ ತಾನು ಎಷ್ಟು ಸಮರ್ಥ ಎಂಬುದನ್ನು ಭರತ್ ಸಾಬೀತುಪಡಿಸಿದ್ದಾರೆ.
IND vs AUS: ಭಾರತ vs ಆಸ್ಟ್ರೇಲಿಯಾ ಮೊದಲ ಟೆಸ್ಟ್ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ & ಲೈವ್ ಸ್ಕೋರ್

ಇತ್ತಂಡಗಳ ಆಡುವ ಬಳಗ
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೀಕರ್ ಭರತ್ (WK), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಬೆಂಚ್: ಶುಬ್ಮನ್ ಗಿಲ್, ಇಶಾನ್ ಕಿಶನ್, ಕುಲದೀಪ್ ಯಾದವ್, ಜಯದೇವ್ ಉನದ್ಕತ್, ಉಮೇಶ್ ಯಾದವ್
ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಮ್ಯಾಟ್ ರೆನ್ಶಾ, ಪೀಟರ್ ಹ್ಯಾಂಡ್ಸ್ಕಾಂಬ್, ಅಲೆಕ್ಸ್ ಕ್ಯಾರಿ (WK), ಪ್ಯಾಟ್ ಕಮಿನ್ಸ್ (c), ನಾಥನ್ ಲಿಯಾನ್, ಟಾಡ್ ಮರ್ಫಿ, ಸ್ಕಾಟ್ ಬೋಲ್ಯಾಂಡ್
ಬೆಂಚ್: ಟ್ರಾವಿಸ್ ಹೆಡ್, ಮಿಚೆಲ್ ಸ್ವೆಪ್ಸನ್, ಆಷ್ಟನ್ ಅಗರ್, ಮಿಚೆಲ್ ಸ್ಟಾರ್ಕ್, ಕ್ಯಾಮರೂನ್ ಗ್ರೀನ್, ಲ್ಯಾನ್ಸ್ ಮೋರಿಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications