For Quick Alerts
ALLOW NOTIFICATIONS  
For Daily Alerts
 

Perth Test ಆಸ್ಟ್ರೇಲಿಯಾ ವಿರುದ್ಧ ಯಶಸ್ವಿ ಜೈಸ್ವಾಲ್ ಸಿಡಿಲಬ್ಬರದ ಶತಕ

ಪರ್ತ್‌ನ ಆಪ್ಟಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಯುವ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ ಸಿಡಿಸಿದ್ದಾರೆ. ಪರ್ತ್‌ ಟೆಸ್ಟ್‌ ಪಂದ್ಯದ ಮೂರನೇ ದಿನ ಯಶಸ್ವಿ ಜೈಸ್ವಾಲ್ ಅವರ ಬ್ಯಾಟ್‌ನಿಂದ ಮೊದಲ ಶತಕ ಬಂದಿದೆ. ಬೌನ್ಸಿ ಟ್ರ್ಯಾಕ್‌ನಲ್ಲಿ ಲೀಲಾಜಾಲವಾಗಿ ಬ್ಯಾಟ್ ಬೀಸಿದ ಯಶಸ್ವಿ ಜೈಸ್ವಾಲ್ ಅವರು ಆಸೀಸ್‌ ಬೌಲರ್‌ಗಳನ್ನು ದಂಡಿಸಿದರು. ಅನುಭವಿ ಸ್ಟಾರ್ ಬ್ಯಾಟರ್ ಕೆಎಲ್ ರಾಹುಲ್ ಜೊತೆಗೂಡಿದ ಜೈಸ್ವಾಲ್ ಟೆಸ್ಟ್ ವೃತ್ತಿಜೀವನದ ನಾಲ್ಕನೇ ಶತಕ ಪೂರೈಸುವಲ್ಲಿ ಯಶಸ್ವಿಯಾದರು.

ಯಶಸ್ವಿ ಜೈಸ್ವಾಲ್ ಪ್ರಸ್ತುತ 219 ಎಸೆತಗಳಲ್ಲಿ 9 ಬೌಂಡರಿ ಮತ್ತು 3 ಸಿಕ್ಸರ್‌ಗಳ ನೆರವಿನಿಂದ 110 ರನ್ ಗಳಿಸಿ ಆಡುತ್ತಿದ್ದಾರೆ. ಪರ್ತ್‌ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಜೈಸ್ವಾಲ್ ಖಾತೆ ತೆರೆಯಲು ಸಾಧ್ಯವಾಗಿರಲಿಲ್ಲ. ಇದೀಗ ಎರಡನೇ ಇನ್ನಿಂಗ್ಸ್‌ ಕಾಂಗೂರು ಪಡೆಗೆ ತೋಡೆ ತಟ್ಟಿ ಆಡುತ್ತಿದ್ದಾರೆ. ಪ್ಯಾಟ್‌ ಕಮ್ಮಿನ್ಸ್‌, ಮಿಚೆಲ್ ಸ್ಟಾರ್ಕ್‌ ಮತ್ತು ಜೋಶ್ ಹ್ಯಾಜುಲ್‌ವುಡ್ ಅವರಂತಹ ವೇಗದ ಬೌಲರ್‌ಗಳನ್ನು ಎದುರಿಸುವಲ್ಲಿ ಜೈಸ್ವಾಲ್ ಯಶಸ್ವಿಯಾಗಿದ್ದಾರೆ.

IND vs AUS 1st Test Yashasvi Jaiswal hits blistering century against Australia

ಪರ್ತ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ತಂಡ 150 ರನ್‌ಗಳಿಗೆ ಆಲೌಟ್ ಆಗಿತ್ತು. ಇದಾದ ಬಳಿಕ ಭಾರತ ತಂಡದ ನಾಯಕ ಜಸ್ಪ್ರೀತ್ ಬುಮ್ರಾ 5 ವಿಕೆಟ್ ಪಡೆದು ಆಸ್ಟ್ರೇಲಿಯಾವನ್ನು ಮೊದಲ ಇನ್ನಿಂಗ್ಸ್‌ನಲ್ಲಿ 104 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದರು. ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತಕ್ಕೆ ಪಂದ್ಯದಲ್ಲಿ ಉಳಿಯಲು ಬಿಗ್ ಇನ್ನಿಂಗ್ಸ್‌ ಆವಶ್ಯಕತೆಯಿತ್ತು. ಇಂತಹ ಪರಿಸ್ಥಿತಿಯಲ್ಲಿ ಯಶಸ್ವಿ ಜೈಸ್ವಾಲ್ ಮತ್ತು ಕೆಎಲ್ ರಾಹುಲ್ ಅವರ ದಾಖಲೆಯ ಜೊತೆಯಾಟ ಟೀಮ್ ಇಂಡಿಯಾಗೆ ಮುನ್ನಡೆ ತಂದು ಕೊಟ್ಟಿತ್ತು.

ತಾಳ್ಮೆಯುತ ಆಟದೊಂದಿಗೆ ಬಿರುಸಿನ ಬ್ಯಾಟಿಂಗ್ ಮಾಡಿದ ಜೈಸ್ವಾಲ್ ಶತಕ ಸಿಡಿಸಿದರು. ಈಗ ಪರ್ತ್ ಟೆಸ್ಟ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತನ್ನ ಹಿಡಿತವನ್ನು ಬಿಗಿಗೊಳಿಸಿದೆ. ಯಶಸ್ವಿ ಜೈಸ್ವಾಲ್ ಅವರು ಕೆಎಲ್ ರಾಹುಲ್ ಅವರೊಂದಿಗೆ 201 ರನ್‌ಗಳ ಆರಂಭಿಕ ಜೊತೆಯಾಟವನ್ನು ಆಡಿದರು. ಕೆಎಲ್ ರಾಹುಲ್ 77 ರನ್ ಗಳಿಸಿ ಔಟಾದರು. ಮಿಚೆಲ್ ಸ್ಟಾರ್ಕ್ ಕೆಎಲ್ ರಾಹುಲ್ ವಿಕೆಟ್ ಪಡೆದರು.

ವೃತ್ತಿಜೀವನ

ಯಶಸ್ವಿ ಜೈಸ್ವಾಲ್ ಭಾರತದ ಪರ ಆಡಿದ 15 ಟೆಸ್ಟ್ ಪಂದ್ಯಗಳಲ್ಲಿ 58.35 ಸರಾಸರಿಯಲ್ಲಿ 1517 ರನ್ ಗಳಿಸಿದ್ದಾರೆ. ಇದರಲ್ಲಿ ಅವರು 2 ದ್ವಿಶತಕ ಸೇರಿದಂತೆ 4 ಶತಕ ಮತ್ತು 8 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಯಶಸ್ವಿ ಜೈಸ್ವಾಲ್ ಅವರ ಅತ್ಯುತ್ತಮ ಸ್ಕೋರ್ 214 ರನ್. ಯಶಸ್ವಿ ಜೈಸ್ವಾಲ್ ಅವರು ತಮ್ಮ ಮೊದಲ ಆಸ್ಟ್ರೇಲಿಯಾ ಪ್ರವಾಸದಲ್ಲಿ ಶತಕ ಬಾರಿಸುವ ಮೂಲಕ ಟೀಮ್ ಇಂಡಿಯಾದ ಭವಿಷ್ಯದ ಸೂಪರ್ ಸ್ಟಾರ್ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

Story first published: Sunday, November 24, 2024, 8:47 [IST]
Other articles published on Nov 24, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+