Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ind vs Aus T20: ಭಾರತ ತಂಡದಲ್ಲಿ ನಾಲ್ಕು ಬದಲಾವಣೆ: ಆಸ್ಟ್ರೇಲಿಯಾದ ತಂಡದಲ್ಲಿ ಐದು ಬದಲಾವಣೆ

ರಾಯ್ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಆಸ್ಟ್ರೇಲಿಯಾ ನಡುವಿನ 4ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ಎರಡೂ ತಂಡಗಳಲ್ಲಿ ಭಾರಿ ಬದಲಾವಣೆ ಮಾಡಲಾಗಿದೆ.

5 ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿರುವ ಭಾರತ ಇನ್ನೊಂದು ಪಂದ್ಯ ಗೆದ್ದು ಸರಣಿ ವಶಪಡಿಸಿಕೊಳ್ಳುವ ಉತ್ಸಾಹದಲ್ಲಿದ್ದರೆ, ಆಸ್ಟ್ರೇಲಿಯಾ ಸರಣಿ ಸಮಬಲಗೊಳಿಸಲು ರಣತಂತ್ರದೊಂದಿಗೆ ಕಣಕ್ಕಿಳಿದಿದೆ.

 Ind vs Aus 20: India Batting First in Raipur, Makes Four Changes; Australia Makes Five Changes

ಮೊದಲ ಮೂರು ಪಂದ್ಯಗಳಲ್ಲಿ ವಿಶ್ರಾಂತಿ ಪಡೆದುಕೊಂಡಿದ್ದ ಶ್ರೇಯಸ್ ಅಯ್ಯರ್ ನಾಲ್ಕನೇ ಪಂದ್ಯದಲ್ಲಿ ತಂಡಕ್ಕೆ ಸೇರಿಕೊಂಡಿದ್ದು, ಉಪನಾಯಕನ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ತಿಲಕ್ ವರ್ಮಾ ಮತ್ತು ಇಶಾನ್ ಕಿಶನ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಶ್ರೇಯಸ್ ಅಯ್ಯರ್, ಮುಖೇಶ್ ಕುಮಾರ್, ಜಿತೇಶ್ ವರ್ಮಾ ಮತ್ತು ದೀಪಕ್ ಚಹಾರ್ ತಂಡದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ.

ಆಸ್ಟ್ರೇಲಿಯಾ ತಂಡದಲ್ಲಿ ಕೂಡ ಬದಲಾವಣೆ

ಇನ್ನು ಆಸ್ಟ್ರೇಲಿಯಾ ತಂಡದಲ್ಲಿ ಐದು ಬದಲಾವಣೆ ಮಾಡಲಾಗಿದೆ. ಮಾರ್ಕಸ್ ಸ್ಟೊಯಿನಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್, ರಿಚರ್ಡ್‌ಸನ್ ಮತ್ತು ನಥನ್ ಎಲ್ಲಿಸ್ ಅವರು ವಿಶ್ರಾಂತಿ ಪಡೆದುಕೊಂಡಿದ್ದಾರೆ. ಏಕದಿನ ವಿಶ್ವಕಪ್ ಆಡಿದ ಆಟಗಾರರನ್ನು ತವರಿಗೆ ಕಳುಹಿಸಲಾಗಿದ್ದು ಹೊಸ ಆಟಗಾರರಿಗೆ ಅವಕಾಶ ನೀಡಲಾಗಿದೆ.

ಅವರ ಬದಲಾಗಿ ಜೋಶ್ ಫಿಲಿಪ್, ಬೆನ್ ಮೆಕ್‌ಡರ್ಮಾಟ್, ಕ್ರಿಸ್ ಗ್ರೀನ್, ಮ್ಯಾಥ್ಯೂ ಶಾರ್ಟ್ ಮತ್ತು
ಬೆನ್ ದ್ವಾರ್ಶುಯಿಸ್, ಸ್ಥಾನ ಪಡೆದುಕೊಂಡಿದ್ದಾರೆ.

ಉಭಯ ತಂಡಗಳ ಆಡುವ ಬಳಗ

ಭಾರತ : ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್(ನಾಯಕ), ಜಿತೇಶ್ ಶರ್ಮಾ(ವಿಕೆಟ್ ಕೀಪರ್), ರಿಂಕು ಸಿಂಗ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ದೀಪಕ್ ಚಾಹರ್, ಅವೇಶ್ ಖಾನ್, ಮುಖೇಶ್ ಕುಮಾರ್.

ಆಸ್ಟ್ರೇಲಿಯಾ : ಜೋಶ್ ಫಿಲಿಪ್, ಟ್ರಾವಿಸ್ ಹೆಡ್, ಬೆನ್ ಮೆಕ್‌ಡರ್ಮಾಟ್, ಆರನ್ ಹಾರ್ಡಿ, ಟಿಮ್ ಡೇವಿಡ್, ಮ್ಯಾಥ್ಯೂ ಶಾರ್ಟ್, ಮ್ಯಾಥ್ಯೂ ವೇಡ್(ನಾಯಕ) , ಬೆನ್ ದ್ವಾರ್ಶುಯಿಸ್, ಕ್ರಿಸ್ ಗ್ರೀನ್, ಜೇಸನ್ ಬೆಹ್ರೆನ್‌ಡಾರ್ಫ್, ತನ್ವೀರ್ ಸಂಘ.

Story first published: Friday, December 1, 2023, 19:13 [IST]
Other articles published on Dec 1, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+