Ind vs Aus T20: ರಿಂಕು, ಜಿತೇಶ್ ಸ್ಫೋಟಕ ಬ್ಯಾಟಿಂಗ್: ಆಸ್ಟ್ರೇಲಿಯಾಗೆ ಸವಾಲಿನ ಗುರಿ
ರಾಯ್ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ 4ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 174 ರನ್ ಕಲೆ ಹಾಕಿದೆ.
ಭಾರತ ಆಸ್ಟ್ರೇಲಿಯಾ ನಡುವಿನ 4ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ನಾಲ್ಕನೇ ಪಂದ್ಯದಲ್ಲಿ ಎರಡೂ ತಂಡಗಳಲ್ಲಿ ಹಲವು ಬದಲಾವಣೆ ಮಾಡಲಾಗಿತ್ತು.

ಭಾರತ ತಂಡಕ್ಕೆ ಯಶಸ್ವಿ ಜೈಸ್ವಾಲ್ ಮತ್ತು ರುತುರಾಜ್ ಗಾಯಕ್ವಾಡ್ ಉತ್ತಮ ಆರಂಭ ನೀಡಿದರು. ಮೊದಲನೇ ವಿಕೆಟ್‌ಗೆ ಈ ಜೋಡಿ 50 ರನ್ ಕಲೆ ಹಾಕಿತು. ಜೈಸ್ವಾಲ್ 28 ಎಸೆತಗಳಲ್ಲಿ 37 ರನ್ ಗಳಿಸಿದರೆ, ಗಾಯಕ್ವಾಡ್ 28 ಎಸೆತಗಳಲ್ಲಿ 32 ರನ್ ಗಳಿಸಿದರು.
ಉಪನಾಯಕ ಶ್ರೇಯಸ್ ಅಯ್ಯರ್ 7 ಎಸೆತಗಳಲ್ಲಿ 8 ರನ್ ಗಳಿಸಿ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. ನಾಯಕ ಸೂರ್ಯಕುಮಾರ ಯಾದವ್ ಕೇವಲ 1 ರನ್ ಗಳಿಸಿದರು. ರಿಂಕುಸಿಂಗ್ 29 ಎಸೆತಗಳಲ್ಲಿ 4 ಬೌಂಡರಿ ಎರಡು ಸಿಕ್ಸರ್ ಸಹಿತ 46 ರನ್ ಗಳಿಸಿದರೆ, ಜಿತೇಶ್ ಶರ್ಮಾ 19 ಎಸೆತಗಳಲ್ಲಿ 1 ಬೌಂಡರಿ 3 ಸಿಕ್ಸರ್ ಸಹಿತ 35 ರನ್ ಗಳಿಸಿ ಮಿಂಚಿದರು. ಅಕ್ಷರ್ ಪಟೇಲ್ ಮತ್ತು ದೀಪಕ್ ಚಹಾರ್ ಸೊನ್ನೆಗೆ ಔಟಾದರು.
ಉಭಯ ತಂಡಗಳ ಆಡುವ ಬಳಗ
ಭಾರತ : ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್(ನಾಯಕ), ಶ್ರೇಯಸ್ ಅಯ್ಯರ್, ರಿಂಕು ಸಿಂಗ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಅಕ್ಸರ್ ಪಟೇಲ್, ದೀಪಕ್ ಚಾಹರ್, ಅವೇಶ್ ಖಾನ್, ಮುಖೇಶ್ ಕುಮಾರ್, ರವಿ ಬಿಷ್ಣೋಯ್,
ಆಸ್ಟ್ರೇಲಿಯಾ : ಜೋಶ್ ಫಿಲಿಪ್, ಟ್ರಾವಿಸ್ ಹೆಡ್, ಬೆನ್ ಮೆಕ್‌ಡರ್ಮಾಟ್, ಆರನ್ ಹಾರ್ಡಿ, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್(ನಾಯಕ) , ಮ್ಯಾಥ್ಯೂ ಶಾರ್ಟ್, ಕ್ರಿಸ್ ಗ್ರೀನ್, ಜೇಸನ್ ಬೆಹ್ರೆನ್‌ಡಾರ್ಫ್, ಬೆನ್ ದ್ವಾರ್ಶುಯಿಸ್, ತನ್ವೀರ್ ಸಂಘ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications