IND Vs AUS 2nd ODI: ಸರಣಿ ವಶಪಡಿಸಿಕೊಳ್ಳುವ ಉತ್ಸಾಹದಲ್ಲಿ ಭಾರತ: ವೈಜಾಗ್ ಪಿಚ್ ವರದಿ, ಏಕದಿನ ದಾಖಲೆಗಳು

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೊದಲನೇ ಪಂದ್ಯದಲ್ಲಿ ಜಯ ಗಳಿಸಿದ ಭಾರತ ವಿಶಾಖಪಟ್ಟಣ (ವೈಜಾಗ್)ನಲ್ಲಿ ನಡೆಯಲಿರುವ ಎರಡನೇ ಪಂದ್ಯವನ್ನಾಡಲು ಸಜ್ಜಾಗಿದೆ. ಮಾರ್ಚ್ 19ರಂದು ವಿಶಾಖಪಟ್ಟಣದ ಡಾ. ವೈಎಸ್ ರಾಜಶೇಖರರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ಎರಡನೇ ಏಕದಿನ ಪಂದ್ಯ ನಡೆಯಲಿದೆ.
ಮೊದಲ ಪಂದ್ಯದಲ್ಲಿ ಗೆದ್ದು ಸರಣಿಯನ್ನು 1-0 ಅಂತರದಲ್ಲಿ ಮುನ್ನಡೆ ಸಾಧಿಸಿರುವ ಭಾರತ ಎರಡನೇ ಪಂದ್ಯ ಗೆಲ್ಲುವ ಮೂಲಕ ಸರಣಿಯನ್ನು ವಶಪಡಿಸಿಕೊಳ್ಳುವ ಉತ್ಸಾಹದಲ್ಲಿದೆ. ಮೊದಲನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವ ವಹಿಸಿಕೊಂಡಿದ್ದರು. ಎರಡನೇ ಪಂದ್ಯದಲ್ಲಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ. ಟೆಸ್ಟ್ ಸರಣಿಯನ್ನು ಗೆದ್ದಿರುವ ಭಾರತ ಏಕದಿನ ಸರಣಿಯನ್ನು ಗೆದ್ದು ಗೆಲುವಿನ ಓಟವನ್ನು ಮುನ್ನಡೆಸಿವ ಉತ್ಸಾಹದಲ್ಲಿದೆ.
2023ರಲ್ಲಿ ಭಾರತ ಸತತವಾಗಿ 7 ಏಕದಿನ ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, ಜಯದ ಓಟವನ್ನು ಮುಂದುವರೆಸುವ ಉತ್ಸಾಹದಲ್ಲಿದೆ. ಮೊದಲನೇ ಪಂದ್ಯದಲ್ಲಿ ಸೋತಿರುವ ಆಸ್ಟ್ರೇಲಿಯಾ ಎರಡನೇ ಪಂದ್ಯದಲ್ಲಿ ವಾಪಸಾತಿ ಮಾಡುವ ಉತ್ಸಾಹದಲ್ಲಿದೆ. ವೈಜಾಗ್ ಕ್ರೀಡಾಂಗಣದಲ್ಲಿ ಪಿಚ್ ಹೇಗಿರಲಿದೆ, ಏಕದಿನ ಪಂದ್ಯಗಳ ಇತಿಹಾಸದ ಬಗ್ಗೆ ಮಾಹಿತಿ ಇಲ್ಲಿದೆ.

ವೈಜಾಗ್‌ನಲ್ಲಿ ಭಾರತದ ಪ್ರಾಬಲ್ಯ
2019ರ ನಂತರ ಇದೇ ಮೊದಲ ಬಾರಿಗೆ ವೈಜಾಗ್‌ನಲ್ಲಿ ಏಕದಿನ ಪಂದ್ಯ ನಡೆಯಲಿದೆ. 2019 ಡಿಸೆಂಬರ್ 18ರಂದು ಕೊನೆಯ ಏಕದಿನ ಪಂದ್ಯ ನಡೆದಿತ್ತು. ಭಾರತ ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 107 ರನ್‌ಗಳ ಜಯ ಸಾಧಿಸಿ ಮಿಂಚಿತ್ತು.
ಈ ಮೈದಾನದದಲ್ಲಿ ಭಾರತ ಆಡಿರುವ 10 ಪಂದ್ಯಗಳಲ್ಲಿ 7 ಪಂದ್ಯಗಳಲ್ಲಿ ಗೆದ್ದಿದ್ದು, 1 ಪಂದ್ಯದಲ್ಲಿ ಮಾತ್ರ ಸೋಲನುಭವಿಸಿತ್ತು. ಒಂದು ಪಂದ್ಯ ಕೂಡ ಮಳೆಯಿಂದಾಗಿ ರದ್ದಾದೆ, ಇನ್ನೊಂದು ಪಂದ್ಯ ಟೈ ಆಗಿತ್ತು. 2014ರಲ್ಲಿ ಭಾರತ ಇಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಕೊನೆಯದಾಗಿ 2 ವಿಕೆಟ್‌ಗಳಿಂದ ಸೋತಿದ್ದರು. ಮೊದಲು ಬ್ಯಾಟಿಂಗ್ ಮಾಡಿರುವ ತಂಡ 3 ಬಾರಿ ಗೆದ್ದಿದ್ದರೆ, ಚೇಸಿಂಗ್ ಮಾಡಿದ ತಂದ 5 ಬಾರಿ ಗೆಲುವು ಸಾಧಿಸಿದೆ.

ರೋಹಿತ್ ಶರ್ಮಾ, ಕೆಎಲ್ ರಾಹುಲ್ ಶತಕ
2019ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಅಮೋಘ ಶತಕ ಸಿಡಿಸಿದ್ದರು. ರೋಹಿತ್ ಶರ್ಮಾ ಅಮೋಘ 159 ರನ್ ಗಳಿಸಿದ್ದರೆ, ಕೆಎಲ್ ರಾಹುಲ್ 104 ಎಸೆತಗಳಲ್ಲಿ 102 ರನ್ ಸಿಡಿಸಿದ್ದರು. ಭಾರತ 5 ವಿಕೆಟ್ ಕಳೆದುಕೊಂಡು 387 ರನ್‌ಗಳನ್ನು ಕಲೆಹಾಕಿತ್ತು.
ಡಾ ವೈಎಸ್ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದ ಪಿಚ್ ಸ್ಪಿನ್ನರ್ ಗಳಿಗೆ ನೆರವು ನೀಡುತ್ತದೆ. 2016ರಲ್ಲಿ ಲೆಗ್-ಸ್ಪಿನ್ನರ್ ಅಮಿತ್ ಮಿಶ್ರಾ ನ್ಯೂಜಿಲೆಂಡ್ ವಿರುದ್ಧ 18 ರನ್ ನೀಡಿ 5 ವಿಕೆಟ್ ಪಡೆದುಕೊಂಡಿದ್ದರು. ಈ ಪಂದ್ಯದಲ್ಲಿ ನ್ಯೂಜಿಲೆಂಡ್ 79 ರನ್‌ಗಳಿಗೆ ಆಲೌಟ್ ಆಗಿತ್ತು.

ಭಾರತ, ಆಸ್ಟ್ರೇಲಿಯಾ ಪ್ಲೇಯಿಂಗ್ 11
ಭಾರತ: ಶುಭಮನ್ ಗಿಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ.
ಆಸ್ಟ್ರೇಲಿಯಾ: ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್ (ನಾಯಕ), ಮಾರ್ನಸ್ ಲ್ಯಾಬುಸ್ಚಾಗ್ನೆ, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ಮಾರ್ಕಸ್ ಸ್ಟೊಯಿನಿಸ್, ಸೀನ್ ಅಬಾಟ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications