IND vs AUS: ಆಸೀಸ್ ಬೌಲರ್‌ಗಳ ಬೆವರಿಳಿಸಿದ ಶ್ರೇಯಸ್ ಅಯ್ಯರ್, ಶುಭ್ಮನ್ ಗಿಲ್ ಭರ್ಜರಿ ಶತಕ!
ಭಾನುವಾರ, ಸೆಪ್ಟೆಂಬರ್ 24ರಂದು ಇಂದೋರ್‌ನ ಹೋಳ್ಕರ್ ಸ್ಟೇಡಿಯಂನಲ್ಲಿ ಮೂರು ಪಂದ್ಯಗಳ ಸರಣಿಯ 2ನೇ ಏಕದಿನ ಪಂದ್ಯದಲ್ಲಿ ಆತಿಥೇಯ ಭಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ತಂಡಗಳು ಸೆಣಸಾಡುತ್ತಿವೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಶ್ರೇಯಸ್ ಅಯ್ಯರ್ ಮತ್ತು ಶುಭ್ಮನ್ ಗಿಲ್ ಅವರ ಭರ್ಜರಿ ಶತಕದ ನೆರವಿನಿಂದ ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿದೆ.

ಆರಂಭಿಕರಾಗಿ ಬಂದ ಶುಭ್ಮನ್ ಗಿಲ್ ಮತ್ತು ರುತುರಾಜ್ ಗಾಯಕ್ವಾಡ್ ಜೋಡಿ ಮೊದಲ ವಿಕೆಟ್‌ಗೆ 16 ರನ್ ಗಳಿಸಿದರು. 3.4 ಓವರ್‌ಗಳಲ್ಲಿ 16 ರನ್‌ಗಳಾಗಿದ್ದಾಗ ಕಳೆದ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದ ರುತುರಾಜ್ ಗಾಯಕ್ವಾಡ್ ಅವರು 8 ರನ್ ಗಳಿಸಿ ಜೋಶ್ ಹೇಝಲ್‌ವುಡ್ ಬೌಲಿಂಗ್‌ನಲ್ಲಿ ವಿಕೆಟ್ ಕೀಪರ್ ಅಲೆಕ್ಸ್ ಕ್ಯಾರಿಗೆ ಕ್ಯಾಚ್ ನೀಡಿ ಔಟಾದರು.
ಅನಂತರ ಜೊತೆಯಾದ ಶುಭ್ಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಜೋಡಿ ಎರಡನೇ ವಿಕೆಟ್‌ಗೆ ಬರೋಬ್ಬರಿ 200 ರನ್‌ಗಳ ಜೊತೆಯಾಟ ನಿರ್ಮಿಸಿದರು. ಈ ನಡುವೆ ಆಸ್ಟ್ರೇಲಿಯಾದ ಬೌಲರ್‌ಗಳನ್ನು ಬೆವರಿಳಿಸಿದರು ಮತ್ತು ಮೈದಾನದ ಮೂಲೆಮೂಲೆಗೂ ಚೆಂಡು ಕಳುಹಿಸಿದರು.
ಶ್ರೇಯಸ್ ಅಯ್ಯರ್ 3ನೇ ಅಂತಾರಾಷ್ಟ್ರೀಯ ಏಕದಿನ ಶತಕ ಸಿಡಿಸಿ, ಗಾಯದಿಂದ ಚೇತರಿಸಿಕೊಂಡು ಅತ್ಯುತ್ತಮವಾಗಿ ಪುನರಾಗಮನ ಮಾಡಿದರು. ಸೀನ್ ಅಬಾಟ್ ಬೌಲಿಂಗ್‌ನಲ್ಲಿ ಔಟಾಗುವ ಮುನ್ನ 90 ಎಸೆತಗಳಲ್ಲಿ 11 ಬೌಂಡರಿ ಮತ್ತು 3 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ 105 ರನ್ ಬಾರಿಸಿದರು.

ಇನ್ನು ಆರಂಭಿಕ ಶುಭ್ಮನ್ ಗಿಲ್ ಅವರು 97 ಎಸೆತಗಳಲ್ಲಿ 6 ಬೌಂಡರಿ ಮತ್ತು 4 ಸಿಕ್ಸರ್ ಸಹಾಯದಿಂದ 104 ರನ್ ಬಾರಿಸಿ ಕ್ಯಾಮೆರಾನ್ ಗ್ರೀನ್ ಬೌಲಿಂಗ್‌ನಲ್ಲಿ ವಿಕೆಟ್ ಕೀಪರ್ ಹಿಡಿದ ಕ್ಯಾಚ್‌ಗೆ ಔಟಾದರು.
ಶುಭ್ಮನ್ ಗಿಲ್ ಅವರು 6ನೇ ಏಕದಿನ ಅಂತಾರಾಷ್ಟ್ರೀಯ ಶತಕ ಗಳಿಸಿದರು. ಅಲ್ಲದೆ, 2023ರಲ್ಲೇ 5 ಶತಕಗಳು ಬಂದಿವೆ ಎಂಬುದು ಗಮನಾರ್ಹ ಸಂಗತಿ.
ಈವರೆಗೆ ಭಾರತ ತಂಡದ ಮೊತ್ತ 35 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 243 ರನ್ ಕಲೆಹಾಕಿದ್ದು, ದೊಡ್ಡ ಮೊತ್ತದತ್ತ ಗುರಿ ನೆಟ್ಟಿದೆ. ನಾಯಕ ಕೆಎಲ್ ರಾಹುಲ್ ಮತ್ತು ಇಶಾನ್ ಕಿಶನ್ ಬ್ಯಾಟಿಂಗ್ ಮುಂದುವರೆಸಿದ್ದಾರೆ.
ಇನ್ನು ಕೆಎಲ್ ರಾಹುಲ್ ನಾಯಕತ್ವದ ಭಾರತ ತಂಡ ಎರಡು ದಿನಗಳ ಹಿಂದೆ ಮೊಹಾಲಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್‌ಗಳಿಂದ ಗೆಲ್ಲುವ ಮೂಲಕ 1-0 ಮುನ್ನಡೆ ಪಡೆದಿದ್ದು, ಸರಣಿ ವಶಪಡಿಸಿಕೊಳ್ಳಲು ಎದುರು ನೋಡುತ್ತಿದೆ.
ಇನ್ನು ಖಾಯಂ ನಾಯಕ ಪ್ಯಾಟ್ ಕಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ತಂಡವು ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸಲು ಪ್ರಬಲ ಪುನರಾಗಮನ ಗುರಿಯನ್ನು ಹೊಂದಿದೆ.
ಭಾರತ vs ಆಸ್ಟ್ರೇಲಿಯಾ 2ನೇ ಏಕದಿನ ಪಂದ್ಯದ ಆಡುವ 11ರ ಬಳಗ
ಭಾರತ: ಇಶಾನ್ ಕಿಶನ್, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ನಾಯಕ/ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಶಾರ್ದೂಲ್ ಠಾಕೂರ್, ಪ್ರಸಿದ್ಧ್ ಕೃಷ್ಣ
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಮ್ಯಾಥ್ಯೂ ಶಾರ್ಟ್, ಸ್ಟೀವನ್ ಸ್ಮಿತ್ (ನಾಯಕ), ಮಾರ್ನಸ್ ಲ್ಯಾಬುಸ್ಚಾಗ್ನೆ, ಜೋಸ್ ಇಂಗ್ಲಿಸ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮರೂನ್ ಗ್ರೀನ್, ಸೀನ್ ಅಬಾಟ್, ಸ್ಪೆನ್ಸರ್ ಜಾನ್ಸನ್, ಆಡಮ್ ಝಂಪಾ, ಜೋಶ್ ಹೇಝಲ್‌ವುಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications