IND-W vs AUS-W: ಭಾರತ ವನಿತೆಯರಿಗೆ ಬೃಹತ್ ಗುರಿ ನೀಡಿದ ಆಸ್ಟ್ರೇಲಿಯಾ ಮಹಿಳೆಯರು

ಭಾರತ ಮಹಿಳಾ ಕ್ರಿಕೆಟ್ ತಂಡವು ಇಂದು (ಭಾನುವಾರ, ಡಿಸೆಂಬರ್ 11) ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಐದು ಟಿ20 ಪಂದ್ಯಗಳ ಸರಣಿಯ ಎರಡನೇ ಪಂದ್ಯ ನಡೆಯುತ್ತಿದೆ.
ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದ ವಿರುದ್ಧ ಗೆದ್ದು ಮೊದಲ ಪಂದ್ಯದ ಸೋಲಿಗೆ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಮಹಿಳಾ ತಂಡ ಎದುರು ನೋಡುತ್ತಿದೆ.
ಎರಡನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿ ಆಸ್ಟ್ರೇಲಿಯಾ ಮಹಿಳಾ ತಂಡ ನಿಗದಿತ 20 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿದ್ದು, ಭಾರತ ತಂಡ ಗೆಲ್ಲಲು 188 ರನ್ ಗುರಿ ನೀಡಿದೆ.
ಆರಂಭಿಕರಾದ ಅಲಿಸ್ಸಾ ಹೀಲಿ ಮತ್ತು ಬೆತ್ ಮೂನಿ ಆಸ್ಟ್ರೇಲಿಯಾ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದರು. 3.3 ಓವರ್‌ಗಳಲ್ಲಿ 29 ರನ್ ಗಳಿಸಿದ್ದಾಗ, 15 ಎಸೆತಗಳಲ್ಲಿ 25 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ ನಾಯಕಿ ಅಲಿಸ್ಸಾ ಹೀಲಿ ದೀಪ್ತಿ ಶರ್ಮಾ ಬೌಲಿಂಗ್‌ನಲ್ಲಿ ಔಟಾದರು.

ನಂತರ ಬ್ಯಾಟಿಂಗ್‌ಗೆ ಬಂದ ತಹ್ಲಿಯಾ ಮೆಕ್‌ಗ್ರಾತ್ ಅವರು ಬೆತ್ ಮೂನಿ ಜೊತೆಗೂಡಿ ಮುರಿಯದ ಎರಡನೇ ವಿಕೆಟ್‌ಗೆ 158 ರನ್‌ಗಳ ಜೊತೆಯಾಟ ನೀಡಿದರು. ಬೆತ್ ಮೂನಿ 54 ಎಸೆತಗಳಲ್ಲಿ 82 ರನ್ ಗಳಿಸಿದರೆ, ತಹ್ಲಿಯಾ ಮೆಕ್‌ಗ್ರಾತ್ 51 ಎಸೆತಗಳಲ್ಲಿ 70 ರನ್ ಬಾರಿಸಿದರು.
ಭಾರತ ಪರ ಬೌಲಿಂಗ್‌ನಲ್ಲಿ ದೀಪ್ತಿ ಶರ್ಮಾ 4 ಓವರ್‌ಗಳಲ್ಲಿ 31 ರನ್ ನೀಡಿ ಒಂದು ವಿಕೆಟ್ ಪಡೆದರು. ಉಳಿದಂತೆ ಎಲ್ಲ ಬೌಲರ್‌ಗಳ ಹೆಚ್ಚಿನ ರನ್ ಬಿಟ್ಟುಕೊಟ್ಟರಲ್ಲದೆ, ಯಾವುದೇ ವಿಕೆಟ್ ಪಡೆಯಲು ವಿಫಲರಾದರು.
ಈ ಪಂದ್ಯದಲ್ಲಿ ಭಾರತ ತಂಡ ಯಾವುದೇ ಬದಲಾವಣೆ ಮಾಡಿಲ್ಲ, ಆದರೆ ಆಸ್ಟ್ರೇಲಿಯಾ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದೆ.
ಭಾರತ vs ಆಸ್ಟ್ರೇಲಿಯಾ ಮಹಿಳಾ ತಂಡಗಳ ಸಂಭಾವ್ಯ 11ರ ಬಳಗ
ಭಾರತ: ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ದೇವಿಕಾ ವೈದ್ಯ, ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ರಾಧಾ ಯಾದವ್, ಅಂಜಲಿ ಸರ್ವಾನಿ, ಮೇಘನಾ ಸಿಂಗ್, ರೇಣುಕಾ ಸಿಂಗ್,
ಆಸ್ಟ್ರೇಲಿಯಾ: ಅಲಿಸ್ಸಾ ಹೀಲಿ (ನಾಯಕಿ), ಬೆತ್ ಮೂನಿ, ಎಲಿಸ್ಸೆ ಪೆರ್ರಿ, ಆಶ್ಲೀಗ್ ಗಾರ್ಡ್ನರ್, ತಹ್ಲಿಯಾ ಮೆಕ್‌ಗ್ರಾತ್, ಫೋಬೆ ಲಿಚ್‌ಫೀಲ್ಡ್, ಅನ್ನಾಬೆಲ್ ಸದರ್ಲ್ಯಾಂಡ್, ಹೀಥರ್ ಗ್ರಹಾಂ, ಅಲಾನಾ ಕಿಂಗ್, ಕಿಮ್ ಗಾರ್ತ್, ಮೇಗನ್ ಶುಟ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications