ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಆಸ್ಟ್ರೇಲಿಯಾ: ನಾಯಕನ ಆಟವಾಡಿದ ರೋಹಿತ್: ರಣರೋಚಕ ಕದನದಲ್ಲಿ ಗೆದ್ದ ಭಾರತ

Ind vs Aus 2nd t20I: India won the match by 6 wickets series level by 1-1

ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯ ಮುಕ್ತಾಯವಾಗಿದ್ದು ಭಾರತ ರೋಮಾಂಚಕಾರಿ ಗೆಲುವು ಸಾಧಿಸಿದೆ. 8 ಓವರ್‌ಗಳ ಪಂದ್ಯದಲ್ಲಿ ಭಾರತ ತಂಡ ಅಮೋಘ ಪ್ರದರ್ಶನ ನೀಡಿದ್ದು ಪಂದ್ಯವನ್ನು ಭರ್ಜರಿ 6 ವಿಕೆಟ್‌ಗಳ ಅಂತರದಿಂದ ಗೆದ್ದು ಬೀಗಿದೆ. ಈ ಮೂಲಕ ಗೆಲ್ಲಲೇ ಬೇಕಿದ್ದ ಪಂದ್ಯದಲ್ಲಿ ಜಯ ಸಾಧಿಸಿದ್ದು ಸರಣಿಯನ್ನು ಜೀವಂತವಾಗಿರಿಸಿದೆ. ಹೈದಾರಾಬಾದ್‌ನಲ್ಲಿ ನಡೆಯಲಿರುವ ಅಂತಿಮ ಪಂದ್ಯ ಸರಣಿಯ ನಿರ್ಣಾಯಕ ಪಂದ್ಯವಾಗಿರಲಿದೆ.

ಮೊದಲಿಗೆ ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ಭಾರತದ ಗೆಲುವಿಗೆ ನಿಗದಿತ 8 ಓವರ್‌ಗಳಲ್ಲಿ ಭರ್ಜರಿ 91 ರನ್‌ಗಳ ಗುರಿಯನ್ನು ನಿಗದಿಪಡಿಸಿತ್ತು. ಈ ಮೊತ್ತವನ್ನು ಬೆನ್ನಟ್ಟಿದ ಭಾರತ ತಂಡ ಆರಂಬದಿಂದಲೇ ಅಬ್ಬರಿಸಲು ಆರಂಬಿಸಿತು. ನಾಯಕ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗಹ್ ಪ್ರದರ್ಶಿಸಿದ್ದು ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ಯಶಸ್ವಿಯಾದರು. ಈ ಮೂಲಕ ಭಾರತ ತಂಡ ಈ ಪ್ರಮುಖ ಪಂದ್ಯವನ್ನು ಗೆದ್ದುಕೊಂಡಿದೆ.

T20 ಕ್ರಿಕೆಟ್‌ನ ಟಾಪ್ 5 ಅಜೇಯ ಓಪನಿಂಗ್ ಜೊತೆಯಾಟ: 1 ವಿಕೆಟ್ ಕಳೆದುಕೊಳ್ಳದೆ ಗುರಿ ಮುಟ್ಟಿದವರು!T20 ಕ್ರಿಕೆಟ್‌ನ ಟಾಪ್ 5 ಅಜೇಯ ಓಪನಿಂಗ್ ಜೊತೆಯಾಟ: 1 ವಿಕೆಟ್ ಕಳೆದುಕೊಳ್ಳದೆ ಗುರಿ ಮುಟ್ಟಿದವರು!

ರೋಹಿತ್ ಶರ್ಮಾ ಅಬ್ಬರ

ರೋಹಿತ್ ಶರ್ಮಾ ಅಬ್ಬರ

ಈ ಪಂದ್ಯದಲ್ಲಿ ಆರಂಭದಿಂದಲೇ ನಾಯಕ ರೋಹಿತ್ ಶರ್ಮಾ ಅಬ್ಬರದ ಪ್ರದರ್ಶನ ನೀಡುತ್ತಾ ತಂಡವನ್ನು ಮುನ್ನಡೆಸಿದರು. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿದ ರೋಹಿತ್ 20 ಎಸೆತಗಳಲ್ಲಿ 46 ರನ್‌ಗಳನ್ನು ಸಿಡಿಸಿದರು. ಈ ಭರ್ಜರಿ ಇನ್ನಿಂಗ್ಸ್‌ನಲ್ಲಿ ನಾಲ್ಕು ಬೌಂಡರಿ ಹಾಗೂ ನಾಲ್ಕು ಭರ್ಜರಿ ಸಿಕ್ಸರ್ ಒಳಗೊಂಡಿತ್ತು. 230ರ ಸ್ಟ್ಐಕ್‌ರೇಟ್‌ನಲ್ಲಿ ಟೀಮ್ ಇಂಡಿಯಾ ನಾಯಕ ಬ್ಯಾಟ್ ಬೀಸಿದರು. ಇನ್ನು ಪಂದ್ಯ ಅಂತಿಮ ಓವರ್‌ಗೆ ತಲುಪಿತ್ತಿದ್ದಂತೆಯೇ ಕ್ರೀಸ್‌ಗೆ ಇಳಿದ ದಿನೇಶ್ ಕಾರ್ತಿಕ್ ಕೊನೆಯ ಓವರ್‌ನಲ್ಲಿ ಒಂದು ಸಿಕ್ಸರ್ ಹಾಗೂ ಒಂದು ಬೌಂಡರಿ ಸಿಡಿಸಿ ತಂಡಕ್ಕೆ ಗೆಲುವು ಸಾರಿದರು.

ಬೌಲಿಂಗ್‌ನಲ್ಲಿ ಮಿಂಚಿದ ಅಕ್ಷರ್ ಪಟೇಲ್

ಬೌಲಿಂಗ್‌ನಲ್ಲಿ ಮಿಂಚಿದ ಅಕ್ಷರ್ ಪಟೇಲ್

8 ಓವರ್‌ಗಳ ಈ ಪಂದ್ಯದಲ್ಲಿ ಭಾರತದ ಸ್ಪಿನ್ನರ್ ಅಕ್ಷರ್ ಪಟೇಲ್ ನೀಡಿದ ಪ್ರದರ್ಶನ ಅಮೋಘವಾಗಿತ್ತು. ಕೇವಲ 13 ರನ್‌ಗಳನ್ನು ನೀಡಿದ ಅಕ್ಷರ್ ಪಟೇಲ್ ಎರಡು ವಿಕೆಟ್ ಪಡೆದು ಮಿಂಚಿದ್ದಾರೆ. ಈ ಮೂಲಕ ಆಸಿಸ್ ಪಡೆಗೆ ಭಾರೀ ಕಡಿವಾಣ ಹಾಕುವಲ್ಲಿ ಯಶಸ್ವಿಯಾದರು. ಇನ್ನು ಈ ಪಂದ್ಯದ ಮೂಲಕ ಕಮ್‌ಬ್ಯಾಕ್ ಮಾಡಿರುವ ಜಸ್ಪ್ರೀತ್ ಬೂಮ್ರಾ ಕೂಡ ಅದ್ಭುತ ಯಾರ್ಕರ್ ಮೂಲಕ ಆರೋನ್ ಫಿಂಚ್ ವಿಕೆಟ್ ಪಡೆದುಕೊಂಡರು. ಈ ಪ್ರದರ್ಶನದಿಂದಾಗಿ ಭಾರತ ತಂಡ ಆಸ್ಟ್ರೇಲಿಯಾವನ್ನು 90 ರನ್‌ಗಳಿಗೆ ಕಟ್ಟಿಹಾಕಲು ಸಾಧ್ಯವಾಯಿತು.

ಭಾನುವಾರ ನಡೆಯಲಿದೆ ನಿರ್ಣಾಯಕ ಪಂದ್ಯ

ಭಾನುವಾರ ನಡೆಯಲಿದೆ ನಿರ್ಣಾಯಕ ಪಂದ್ಯ

ಇನ್ನು ಈ ಸರಣಿಯ ಅಂತಿಮ ಹಾಗೂ ನಿರ್ಣಾಯಕ ಪಂದ್ಯ ಭಾನುವಾರ ನಡೆಯಲಿದೆ. ಹೈದರಾಬಾದ್‌ನಲ್ಲಿ ಈ ಪಂದ್ಯ ನಡೆಯಲಿದ್ದು ಎರಡು ತಂಡಗಳು ಕೂಡ ಗೆಲುವಿಗಾಗಿ ಮತ್ತೊಮ್ಮೆ ತೀವ್ರ ಪೈಪೋಟಿ ನಡೆಸಲಿದೆ. ಭಾರತ ತಂಡ ಮೊದಲ ಪಂದ್ಯದಲ್ಲಿ ಸೋಲು ಅನುಭವಿಸಿದ್ದರೆ ಗೆಲ್ಲಲೇಬೇಕಿದ್ದ ಎರಡನೇ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಸರಣಿಯನ್ನು ಜೀವಂತವಾಗಿರಿಸಿದೆ. ಭಾನುವಾರ ಗೆದ್ದ ತಂಡ ಮೂರು ಪಂದ್ಯಗಳ ಈ ಸರಣಿಯಲ್ಲಿ ಟ್ರೋಫಿಯನ್ನು ತನ್ನದಾಗಿಸಿಕೊಳ್ಳಲಿದ್ದು ಚುಟುಕು ವಿಶ್ವಕಪ್‌ಗೆ ಆತ್ಮವಿಶ್ವಾಸದೊಂದಿಗೆ ಸಜ್ಜಾಗಲಿದೆ.

ಇತ್ತಂಡಗಳ ಸ್ಕ್ವಾಡ್

ಇತ್ತಂಡಗಳ ಸ್ಕ್ವಾಡ್

ಟೀಮ್ ಇಂಡಿಯಾ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಸರ್ ಪಟೇಲ್, ಹರ್ಷಲ್ ಪಟೇಲ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್
ಬೆಂಚ್: ಭುವನೇಶ್ವರ್ ಕುಮಾರ್, ಉಮೇಶ್ ಯಾದವ್, ರವಿಚಂದ್ರನ್ ಅಶ್ವಿನ್, ದೀಪಕ್ ಹೂಡಾ, ದೀಪಕ್ ಚಹಾರ್

ಆರನ್ ಫಿಂಚ್ (ನಾಯಕ), ಕ್ಯಾಮೆರಾನ್ ಗ್ರೀನ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಡೇನಿಯಲ್ ಸ್ಯಾಮ್ಸ್, ಸೀನ್ ಅಬಾಟ್, ಪ್ಯಾಟ್ ಕಮಿನ್ಸ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್
ಬೆಂಚ್: ಜೋಶ್ ಇಂಗ್ಲಿಸ್, ನಾಥನ್ ಎಲ್ಲಿಸ್, ಕೇನ್ ರಿಚರ್ಡ್ಸನ್, ಆಷ್ಟನ್ ಅಗರ್

Story first published: Saturday, September 24, 2022, 10:33 [IST]
Other articles published on Sep 24, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X