Ind Vs Aus 2nd Test: 2 ದಿನಗಳ ವಿಶ್ರಾಂತಿ ಬಳಿಕ ದೆಹಲಿ ತಲುಪಿದ ಟೀಂ ಇಂಡಿಯಾ: ಬುಧವಾರದಿಂದ ಅಭ್ಯಾಸ

ನಾಗ್ಪುರದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಮೂರೇ ದಿನದಲ್ಲಿ ಮುಗಿಸಿದ್ದ ಟೀಂ ಇಂಡಿಯಾ ಎರಡು ದಿನಗಳ ವಿಶ್ರಾಂತಿ ಪಡೆದ ಬಳಿಕ, ಎರಡನೇ ಟೆಸ್ಟ್‌ಗಾಗಿ ದೆಹಲಿಗೆ ಪ್ರಯಾಣಿಸಿದೆ.
ನಾಗ್ಪುರದಲ್ಲಿ ನಡೆದ ಮೊದಲನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಇನ್ನಿಂಗ್ಸ್ ಮತ್ತು 132 ರನ್‌ಗಳ ಜಯ ಸಾಧಿಸಿತ್ತು. ಫೆಬ್ರವರಿ 17ರಂದು ಶುಕ್ರವಾರ ಎರಡನೇ ಟೆಸ್ಟ್ ಪಂದ್ಯಕ್ಕೆ ತಯಾರಿ ನಡೆಸಲು ದೆಹಲಿಗೆ ಪ್ರಯಾಣಿಸಿದೆ.
ಶುಕ್ರವಾರ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ 2ನೇ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ಬುಧವಾರದಿಂದ ಟೀಂ ಇಂಡಿಯಾ ಅಭ್ಯಾಸ ಆರಂಭಿಸಲಿದೆ. ಎರಡನೇ ಟೆಸ್ಟ್ ಪಂದ್ಯಕ್ಕೆ ಕೂಡ ಶ್ರೇಯಸ್ ಅಯ್ಯರ್ ಅಲಭ್ಯರಾಗಿದ್ದು, ಮೊದಲನೇ ಟೆಸ್ಟ್ ಪಂದ್ಯದಲ್ಲಿ ಆಡಿದ್ದ ತಂಡವೇ ಕಣಕ್ಕಿಳಿಯುವ ಸಾಧ್ಯತೆ ಇದೆ.
ಭಾರತ ಈಗಾಗಲೇ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ದೆಹಲಿಯಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಗೆದ್ದರೆ ಭಾರತದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅರ್ಹತೆ ಪಡೆದುಕೊಳ್ಳಲಿದೆ. ಆಸ್ಟ್ರೇಲಿಯಾ ತಂಡದ ಪ್ರಮುಖ ಆಟಗಾರರು ಎರಡನೇ ಟೆಸ್ಟ್‌ಗೆ ವಾಪಸಾಗುವುದರಿಂದ ಭಾರತ ಗೆಲ್ಲುವುದು ಸುಲಭವಲ್ಲ.

ಎರಡು ದಿನಗಳ ಕಠಿಣ ಅಭ್ಯಾಸ
ಮಂಗಳವಾರ ದೆಹಲಿಗೆ ತೆರಳಿರುವ ಟೀಂ ಇಂಡಿಯಾ ಆಟಗಾರರು ವಿಶ್ರಾಂತಿ ಪಡೆಯಲಿದ್ದು, ಬುಧವಾರದಿಂದ ಅಭ್ಯಾಸ ಆರಂಭಿಸಲಿದ್ದಾರೆ. ಮೊದಲನೇ ಪಂದ್ಯದಲ್ಲಿ ಬ್ಯಾಟಿಂಗ್‌ನಲ್ಲಿ ವಿಫಲವಾಗಿದ್ದ ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರ ಎರಡನೇ ಪಂದ್ಯದಲ್ಲಿ ಉತ್ತಮವಾಗಿ ರನ್ ಗಳಿಸಬೇಕಾಗಿದೆ.
ವಿರಾಟ್ ಕೊಹ್ಲಿ ತವರಿನ ಅಂಗಳದಲ್ಲಿ ಪಂದ್ಯ ನಡೆಯುತ್ತಿರುವುದರಿಂದ ಎಲ್ಲರ ಗಮನ ವಿರಾಟ್ ಕೊಹ್ಲಿ ಮೇಲಿದೆ. ಸ್ಪಿನ್‌ಗೆ ಹೆಚ್ಚಿನ ನೆರವು ನೀಡುವುದರಿಂದ ನಾಲ್ವರು ಸ್ಪಿನ್ನರ್ ಗಳು ಕಣಕ್ಕಿಳಿಯುವ ಸಾಧ್ಯತೆ ಇದೆ.

1987ರ ನಂತರ ಪಂದ್ಯ ಸೋತಿಲ್ಲ
ದೆಹಲಿ ಅಂಗಳದಲ್ಲಿ ಭಾರತ ತಂಡ ಕಳೆದ 36 ವರ್ಷಗಳಿಂದ ಟೆಸ್ಟ್ ಪಂದ್ಯವನ್ನು ಸೋತಿಲ್ಲ. 1987 ರಲ್ಲಿ ಭಾರತ ಇಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಪಂದ್ಯವನ್ನು ಸೋತಿತ್ತು. ಆಸ್ಟ್ರೇಲಿಯಾ ತಂಡಕ್ಕೆ ಇದು ಮತ್ತೊಂದು ತಲೆನೋವಾಗಿದೆ.
ಮೊದಲನೇ ಪಂದ್ಯದಲ್ಲಿ ಗೆಲುವು ಸಾಧಿಸಿರುವ ಭಾರತ ತಂಡ ಎರಡನೇ ಪಂದ್ಯದಲ್ಲಿ ಗೆಲ್ಲುವ ಆತ್ಮವಿಶ್ವಾಸದಲ್ಲಿದೆ. ಮೊದಲನೇ ಪಂದ್ಯದಲ್ಲಿ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಉತ್ತಮ ಪ್ರದರ್ಶನ ನೀಡಿದ್ದರು. ಅದೇ ಪ್ರದರ್ಶನವನ್ನು ಮುಂದುವರೆಸುವ ವಿಶ್ವಾಸದಲ್ಲಿದ್ದಾರೆ.
ಆಸ್ಟ್ರೇಲಿಯಾ ಕೂಡ ಎರಡನೇ ಟೆಸ್ಟ್ ಪಂದ್ಯದಲ್ಲಿ ವಾಪಸಾಗುವ ವಿಶ್ವಾಸದಲ್ಲಿದೆ. ಪ್ರಮುಖ ವೇಗಿ ಮಿಚೆಲ್ ಸ್ಟಾರ್ಕ್ ತಂಡಕ್ಕೆ ವಾಪಸಾಗಿದ್ದಾರೆ. ಟ್ರಾವಿಸ್ ಹೆಡ್ ಕೂಡ ತಂಡಕ್ಕೆ ಮರಳಿರುವುದು ವಿಶ್ವಾಸ ಹೆಚ್ಚಿಸಿದೆ. ಎಡಗೈ ಸ್ಪಿನ್ನರ್ ಮ್ಯಾಟ್ ಕುಹ್ನೆಮನ್ ಪದಾರ್ಪಣೆ ಮಾಡುವ ಸಾಧ್ಯತೆ ಇದ್ದು, ಭಾರತಕ್ಕೆ ಕಠಿಣ ಸವಾಲಾಕಲು ಸಜ್ಜಾಗಿದೆ.

ಉಭಯ ತಂಡಗಳ ವಿವರ
ಭಾರತ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ಅಕ್ಷರ್ ಪಟೇಲ್ , ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್.
ಆಸ್ಟ್ರೇಲಿಯಾ: ಪ್ಯಾಟ್ ಕಮ್ಮಿನ್ಸ್ (ನಾಯಕ), ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್ (ಉಪನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್‌ಚಾಗ್ನೆ, ನಾಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್ಶಾ, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಜೋಶ್ ಹೇಜಲ್‌ವುಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications