Ind Vs Aus 2nd Test: ಸೋಲಿನಿಂದ ಕಂಗೆಟ್ಟ ಆಸ್ಟ್ರೇಲಿಯಾ: ತಂಡಕ್ಕೆ ಹೊಸದಾಗಿ ಎಡಗೈ ಸ್ಪಿನ್ನರ್ ಸೇರ್ಪಡೆ

ನಾಗ್ಪುರದಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಮೊದಲನೇ ಟೆಸ್ಟ್‌ನಲ್ಲಿ ಸೋತ ಆಸ್ಟ್ರೇಲಿಯಾ ಮುಖಭಂಗಕ್ಕೆ ಒಳಗಾಗಿದೆ. 2ನೇ ಪಂದ್ಯವನ್ನು ಪ್ರತಿಷ್ಟೆಯಾಗಿ ತೆಗೆದುಕೊಂಡಿರುವ ಕಾಂಗರೂ ಪಡೆ ಹೊಸದಾಗಿ ಎಡಗೈ ಸ್ಪಿನ್ನರ್ ನನ್ನು ತಂಡಕ್ಕೆ ಸೇರಿಸಿಕೊಂಡಿದೆ.
ಭಾರತದ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾದ ಆಸ್ಟ್ರೇಲಿಯಾ ತಂಡದಲ್ಲಿ ನಾಲ್ವರು ಸ್ಪಿನ್ನರ್ ಗಳು ಅವಕಾಶ ಪಡೆದಿದ್ದರು. ಮಿಚೆಲ್ ಸ್ವೆಪ್ಸನ್, ಆಷ್ಟನ್ ಅಗರ್, ನಾಥನ್ ಲಿಯಾನ್ ಮತ್ತು ಯುವ ಆಟಗಾರ ಟಾಡ್ ಮುರ್ಫಿ ತಂಡದಲ್ಲಿದ್ದರು, ಆದರೆ ಮೊದಲನೇ ಟೆಸ್ಟ್‌ನಲ್ಲಿ ಭಾರತದ ಸ್ಪಿನ್ನರ್ ಗಳು ಹೆಚ್ಚಿನ ಪರಿಣಾಮ ಬೀರಿದರು, ಟಾಡ್ ಮುರ್ಫಿ ಕೂಡ 7 ವಿಕೆಟ್ ಪಡೆದು ಮಿಂಚಿದ್ದರು.
2ನೇ ಪಂದ್ಯ ದೆಹಲಿಯಲ್ಲಿ ನಡೆಯಲಿದ್ದು, ಅದು ಕೂಡ ಸ್ಪಿನ್‌ಗೆ ಹೆಚ್ಚಿನ ಸಹಕಾರ ನೀಡಲಿದೆ. ಇದೇ ಕಾರಣಕ್ಕೆ ಆಸ್ಟ್ರೇಲಿಯಾ ಮತ್ತೊಬ್ಬ ಸ್ಪಿನ್ನರ್ ನನ್ನು ತಂಡಕ್ಕೆ ಸೇರಿಸಿಕೊಳ್ಳಲು ಮುಂದಾಗಿದೆ. ಎಡಗೈ ಸ್ಪಿನ್ನರ್ ಮ್ಯಾಥ್ಯೂ ಕುಹ್ನೆಮನ್ ಆಸ್ಟ್ರೇಲಿಯಾ ತಂಡಕ್ಕೆ ಆಯ್ಕೆಯಾಗಿದ್ದಾರೆ. ಲೆಗ್ ಸ್ಪಿನ್ನರ್ ಮಿಚೆಲ್ ಸ್ವೆಪ್ಸನ್ ಬದಲಿಗೆ ಆಯ್ಕೆ ಮಾಡಲಾಗಿದೆ.
ದೆಹಲಿಯಲ್ಲಿ ಮ್ಯಾಥ್ಯೂ ಕುಹ್ನೆಮನ್ ಆಸ್ಟ್ರೇಲಿಯಾ ತಂಡವನ್ನು ಸೇರಿಕೊಳ್ಳಲಿದ್ದಾರೆ. ಆಷ್ಟನ್ ಅಗರ್ ಮೇಲೆ ಹೆಚ್ಚಿನ ನಂಬಿಕೆಯಿಲ್ಲದ ಕಾರಣ ದೆಹಲಿಯಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಕುಹ್ನೆಮನ್ ಆಡುವ ಬಳಗದಲ್ಲಿ ಸ್ಥಾನ ಪಡೆಯುವುದು ಖಚಿತವಾಗಿದೆ.

ಮೂವರು ಸ್ಪಿನ್ನರ್ ಗಳು ಆಡುವ ಸಾಧ್ಯತೆ
ಮೊದಲನೇ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ಇಬ್ಬರು ಸ್ಪಿನ್ನರ್ ಗಳನ್ನು ಕಣಕ್ಕಿಳಿಸಿತ್ತು. ಆದರೆ ಭಾರತ ತಂಡ ಮೂವರು ಸ್ಪಿನ್ನರ್ ಗಳೊಂದಿಗೆ ಆಡಿತ್ತು. ದೆಹಲಿ ಪಿಚ್ ಹೆಚ್ಚಿನದಾಗಿ ಸ್ಪಿನ್ನರ್ ಗಳಿಗೆ ನೆರವು ನೀಡುವುದರಿಂದ ಆಸ್ಟ್ರೇಲಿಯಾ ಕೂಡ ಮೂವರು ಸ್ಪಿನ್ನರ್ ಗಳೊಂದಿಗೆ ಆಡುವ ಸಾಧ್ಯತೆ ಇದೆ.
ಲೆಗ್ ಸ್ಪಿನ್ನರ್ ಮಿಚೆಲ್ ಸ್ವೆಪ್ಸನ್ ಮಗುವಿನ ನಿರೀಕ್ಷೆಯಲ್ಲಿದ್ದು ಮತ್ತೆ ತವರಿಗೆ ಮರಳಲು ಸಿದ್ಧವಾಗಿದ್ದರು. ಅವರ ಸ್ಥಾನಕ್ಕೆ ಮ್ಯಾಥ್ಯೂ ಕುಹ್ನೆಮನ್‌ರನ್ನು ಆಯ್ಕೆ ಮಾಡಲಾಗಿದ್ದು, ಮೊದಲ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯವನ್ನಾಡಲು ಸಜ್ಜಾಗಿದ್ದಾರೆ.

ಫಿಟ್ ಆಗಿದ್ದಾರೆ ಪ್ರಮುಖ ಆಟಗಾರರು
ಅನುಭವಿ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಮತ್ತು ಸ್ಟಾರ್ ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ಫಿಟ್ ಆಗಿದ್ದು ಎರಡನೇ ಟೆಸ್ಟ್ ಪಂದ್ಯದಲ್ಲಿ ಆಡುವ ಸಾಧ್ಯತೆ ಇದೆ. ಉತ್ತಮ ಫಾರ್ಮ್‌ನಲ್ಲಿದ್ದ ಟ್ರಾವಿಸ್ ಹೆಡ್ ಗಾಯಗೊಂಡಿರುವುದು ತಂಡವನ್ನು ಚಿಂತೆಗೀಡು ಮಾಡಿದೆ.
ಎರಡನೇ ಟೆಸ್ಟ್‌ನಲ್ಲಿ ಸಾಕಷ್ಟು ಬಲಿಷ್ಠವಾದ ತಂಡವನ್ನು ಕಣಕ್ಕಿಳಿಸಲು ಆಸ್ಟ್ರೇಲಿಯಾ ಚಿಂತನೆ ನಡೆಸಿದೆ. ಸ್ಟಾರ್ಕ್, ಗ್ರೀನ್ ವಾಪಸಾದರೆ ತಂಡಕ್ಕೆ ಹೆಚ್ಚಿನ ಬಲ ಬರಲಿದೆ. ಮೊದಲನೇ ಪಂದ್ಯದಲ್ಲಿ ಟಾಡ್ ಮರ್ಫಿ 7 ವಿಕೆಟ್ ಪಡೆದುಕೊಂಡಿದ್ದು ತಂಡಕ್ಕೆ ಆತ್ಮವಿಶ್ವಾಸ ನೀಡಿದೆ. ಇದೇ ಕಾರಣಕ್ಕೆ ಅವರು ಮತ್ತೊಬ್ಬ ಹೊಸ ಸ್ಪಿನ್ನರ್ ನನ್ನು ಕಣಕ್ಕಿಳಿಸಲು ಸಿದ್ಧವಾಗಿದ್ದಾರೆ. ನಾಥನ್ ಲಿಯಾನ್ ಮತ್ತು ಟಾಡ್ ಮರ್ಫಿ ಜೊತೆ ಕುಹ್ನೆಮನ್ ಮೂರನೇ ಸ್ಪಿನ್ನರ್ ಆಗಿ ಆಡಲಿದ್ದಾರೆ.

ಒಂದೇ ಒಂದು ಪಂದ್ಯವನ್ನು ಗೆದ್ದಿರುವ ಆಸ್ಟ್ರೇಲಿಯಾ
1987ರಿಂದ ಭಾರತ ತಂಡದ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ (ಮೊದಲು ಫಿರೋಜ್ ಷಾ ಕೋಟ್ಲಾ ಸ್ಟೇಡಿಯಂ) ಟೆಸ್ಟ್ ಪಂದ್ಯವನ್ನು ಸೋತಿಲ್ಲ. ಇದು ಆಸ್ಟ್ರೇಲಿಯಾ ತಂಡದ ಚಿಂತೆಗೆ ಕಾರಣವಾಗಿದೆ. ಆಸ್ಟ್ರೇಲಿಯಾ ಇಲ್ಲಿ 7 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 1959ರಲ್ಲಿ ರಿಚಿ ಬೆನಾಡ್ ಅವರ ನಾಯಕತ್ವದಲ್ಲಿ ಒಂದೇ ಒಂದು ಟೆಸ್ಟ್ ಪಂದ್ಯವನ್ನು ಗೆದ್ದಿದೆ.
ಅರುಣ್ ಜೇಟ್ಲಿ ಕ್ರೀಡಾಂಗಣ ಇತ್ತೀಚಿನ ದಿನಗಳಲ್ಲಿ ಸ್ಪಿನ್ನರ್ ಗಳಿಗೆ ಹೆಚ್ಚಿನ ನೆರವು ನೀಡುತ್ತಿದೆ. ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕೆನ್ನುವ ಪಣ ತೊಟ್ಟಿರುವ ಆಸ್ಟ್ರೇಲಿಯಾ ತಂಡದಲ್ಲಿ ಪ್ರಮುಖ ಬದಲಾವಣೆ ಮಾಡಲು ನಿರ್ಧರಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications