KL Rahul: ಮತ್ತೆ ವಿಫಲವಾದ ಕೆಎಲ್ ರಾಹುಲ್: ಕನ್ನಡಿಗನ ಸ್ಥಾನದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ದ್ರಾವಿಡ್

ಟೀಮ್ ಇಂಡಿಯಾದ ಅನುಭವಿ ಆಟಗಾರ ಕೆಎಲ್ ರಾಹುಲ್ ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿಯೂ ಕಳಪೆ ಪ್ರದರ್ಶನ ನೀಡಿ ಟೀಕೆಗೆ ಗುರಿಯಾಗಿದ್ದಾರೆ. ಎಲ್ಲಾ ಮಾದರಿಯಲ್ಲಿಯೂ ರನ್‌ಗಳಿಸಲು ವಿಫಲವಾಗುತ್ತಿರುವ ಕೆಎಲ್ ರಾಹುಲ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿಯೂ ಭಾರೀ ನಿರಾಸೆ ಅನುಭವಿಸಿದ್ದರು. ಇದೀಗ ಎರಡಬೇ ಟೆಸ್ಟ್ ಪಂದ್ಯದಲ್ಲಿ ಆಡಿದ ಎರಡು ಇನ್ನಿಂಗ್ಸ್‌ನಲ್ಲಿಯೂ ರಾಹುಲ್ ಕಳಪೆ ಪ್ರದರ್ಶನ ನೀಡಿದ್ದು ಅಭಿಮಾನಗಳ ಆಕ್ರೋಶದ ಕಟ್ಟೆಯೊಡೆದಿದೆ.
ಈ ವಿಚಾರವಾಗಿ ಟೀಮ್ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮಹತ್ವದ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರು ಕೆಎಲ್ ರಾಹುಲ್ ಮೇಲೆ ಮ್ಯಾನೇಜ್‌ಮೆಂಟ್‌ಗೆ ಸಂಪೂರ್ಣ ಭರವಸೆಯಿದೆ ಎಂದಿದ್ದಾರೆ. ಅಲ್ಲದೆ ಕೆಎಲ್ ರಾಹುಲ್ ಅವರಂಥಾ ಆಟಗಾರರಿಗೆ ಬೆಂಬಲ ನೀಡುವ ಅಗತ್ಯವಿದೆ" ಎಂದಿದ್ದಾರೆ ಕೋಚ್ ರಾಹುಲ್ ದ್ರಾವಿಡ್.

ಎರಡು ಇನ್ನಿಂಗ್ಸ್‌ನಲ್ಲಿಯೂ ರಾಹುಲ್ ವಿಫಲ
ಟೀಮ್ ಇಂಡಿಯಾದ ಅನುಭವಿ ಆಟಗಾರ ಕೆಎಲ್ ರಾಹುಲ್ ಮೊದಲ ಪಂದ್ಯದಲ್ಲಿ ವೈಫಲ್ಯ ಅನುಭವಿಸಿದ ಬಳಿಕ ಎರಡನೇ ಪಂದ್ಯದಕ್ಕೂ ರಾಹುಲ್ ಮೇಲೆ ನಂಬಿಕೆಯಿಟ್ಟು ಮತ್ತೊಂದು ಅವಕಾಶ ನೀಡಲಾಯಿತು. ಈ ಇನ್ನಿಂಗ್ಸ್‌ನಲ್ಲಿ ಕೆಎಲ್ ರಾಹುಲ್ 17 ರನ್‌ಗಳಿಸಿದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ ಎರಡು ರನ್‌ಗೆ ಒಂದು ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಹೀಗಾಗಿ ಶುಬ್ಮನ್ ಗಿಲ್‌ಗೆ ಅವಕಾಶ ನೀಡಬೇಕು ಎಂಬ ಅಭಿಪ್ರಾಯಗಳು ಜೋರಾಗುತ್ತಿದೆ. ವೈಟ್‌ಬಾಲ್ ಕ್ರಿಕೆಟ್‌ನಲ್ಲಿ ಗಿಲ್ ಅಮೋಘ ಫಾರ್ಮ್ ಪ್ರದರ್ಶಿಸಿದ್ದು ಟೆಸ್ಟ್‌ನಲ್ಲಿಯೂ ಅಂಥಾದ್ದೇ ಪ್ರದರ್ಶನದ ಭರವಸೆಯಲ್ಲಿದ್ದಾರೆ.

"ಕಮ್‌ಬ್ಯಾಕ್ ಪ್ರಯತ್ನಕ್ಕೆ ಬೆಂಬಲಬೇಕು
ಇನ್ನು ಇದೇ ಸಂದರ್ಭದಲ್ಲಿ ರಾಹುಲ್ ದ್ರಾವಿಡ್ ಅನುಭವಿ ಆಟಗಾರ ಕೆಎಲ್ ರಾಹುಲ್‌ಗೆ ಇಂಥಾ ಸಂದರ್ಭದಲ್ಲಿ ಬೆಂಬಲ ನೀಡಬೇಕಾದ ಅಗತ್ಯವಿದೆ ಎಂದಿದ್ದಾರೆ. "ಇದು ಕೆಲ ಕಠಿಣ ಸಂದರ್ಭಗಳು ಮಾತ್ರ. ವಿದೇಶಿ ಪಿಚ್‌ಗಳಲ್ಲಿ ಅವರು ಭಾರತದ ಅತ್ಯಂತ ಯಶಸ್ವೀ ಓಪನರ್ ಎನಿಸಿಕೊಂಡಿದ್ದಾರೆ. ದಕ್ಷಿಣ ಆಫ್ರಿಕಾ ಹಾಗೂ ಇಂಗ್ಲೆಂಡ್‌ನಲ್ಲಿ ಅವರು ಶತಕವವನ್ನು ಹೊಂದಿದ್ದಾರೆ. ಅವರಿಗೆ ನಾವು ಬೆಂಬಲ ನೀಡುವುದನ್ನು ಮುಂದುವರಿಸುತ್ತೇವೆ" ಎಂದಿದ್ದಾರೆ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್.

ಬೆಂಬಲ ನೀಡುವುದು ಅಗತ್ಯ ಎಂದ ಕೋಚ್ ದ್ರಾವಿಡ್
ಮುಂದುವರಿದು ಮಾತನಾಡಿದ ಕೋಚ್ ರಾಹುಲ್ ದ್ರಾವಿಡ್, "ಇಂಥಾ ಕಠಿಣ ಪರಿಸ್ಥಿತಿಯಿಂದ ಹೊರಬರುವ ಗುಣಮಟ್ಟ ಹಾಗೂ ಚಾಕಚಕ್ಯತೆ ಅವರಲ್ಲಿದೆ ಎಂಬುದನ್ನು ನಾನು ನಂಬುತ್ತೇನೆ. ಈ ಗುಂಪಿನೊಂದಿಗೆ ಕರ್ತವ್ಯ ನಿರ್ವಹಿಸುವುದು ಅದ್ಭುತವಾದ ಅನುಭವ. ಭಿನ್ನ ಮಾದರಿಗಳಲ್ಲಿ ನಿರ್ವಹಿಸುವುದು ಕಠಿಣವಾದ ಸವಾಲಾಗಿದೆ. ಆದರೆ ಇಲ್ಲಿ ಹೆಚ್ಚಿನ ತಾಂತ್ರಿಕವಾದ ಕೋಚಿಂಗ್‌ನ ಅಗತ್ಯವಿರುವುದಿಲ್ಲ. ಕಠಿಣ ಸಂದರ್ಭಗಳಲ್ಲಿ ಅವರಿಗೆ ಬೆಂಬಲ ನೀಡುವುದು ಬಹಳ ಮುಖ್ಯವಾಗುತ್ತದೆ" ಎಂದಿದ್ದಾರೆ ಕೋಚ್ ದ್ರಾವಿಡ್.

ಗಿಲ್ ಬೆಂಚ್ ಕಾಯುವುದು ನಿಶ್ಚಿತ?
ಇನ್ನು ಇತ್ತೀಚಿನ ದಿನಗಳಲ್ಲಿ ಅದ್ಭುತ ಫಾರ್ಮ್ ಪ್ರದರ್ಶಿಸಿರುವ ಟೀಮ್ ಇಂಡಿಯಾದ ಯುವ ಆಟಗಾರ ಶುಬ್ಮನ್ ಗಿಲ್ ಒಂದಾದ ಬಳಿಕ ಒಂದರಂತೆ ಶತಕ ಸಿಡಿಸಿ ಮಿಂಚಿದ್ದಾರೆ. ವೈಟ್‌ಬಾಲ್ ಕ್ರಿಕೆಟ್‌ನಲ್ಲಿ ನೀಡಿರುವ ಅದ್ಭುತ ಪ್ರದರ್ಶನದ ಕಾರಣದಿಂದಾಗಿ ಶುಬ್ಮನ್ ಗಿಲ್ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಹೂ ಆಯ್ಕೆಯಾಗಿದ್ದರು. ಆದರೆ ಮೊದಲ ಎರಡು ಪಂದ್ಯಗಳಿಗೆ ಆಯ್ಕೆ ಮಾಡಿರುವ ತಂಡದಲ್ಲಿ ಗಿಲ್ ಸ್ಥಾನವನ್ನು ಪಡೆದುಕೊಂಡಿದ್ದರು ಕೂಡ ಆಡುವ ಬಳಗದಲ್ಲಿ ಅವರಿಗೆ ಸ್ಥಾನ ದೊರೆತಿಲ್ಲ. ರಾಹುಲ್ ಕಳಪೆ ಪ್ರದರ್ಶನದ ಕಾರಣದಿಂದಾಗಿ ಗಿಲ್‌ಗೆ ತಂಡದಲ್ಲಿ ಸ್ಥಾನ ದೊರೆಯಬಹುದು ಎಂಬ ನಿರೀಕ್ಷೆ ಮೂಡಿಸಿತ್ತು. ಆದರೆ ಕೋಚ್ ರಾಹುಲ್ ದ್ರಾವಿಡ್ ಹೇಳಿಕೆಯ ಪ್ರಕಾರ ಶುಬ್ಮನ್ ಗಿಲ್‌ಗೆ ಅಂತಿಮ ಎರಡು ಪಂದ್ಯದಲ್ಲಿಯೂ ಅವಕಾಶ ದೊರೆಯುವ ಸಾಧ್ಯತೆ ಕಡಿಮೆಯಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications