IND vs AUS 2nd Test: ಡೇವಿಡ್ ವಾರ್ನರ್‌ಗೆ ಶಾಕ್: ಎರಡನೇ ಟೆಸ್ಟ್ ಪಂದ್ಯದಲ್ಲಿ ಇಲ್ಲ ಅವಕಾಶ

ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಮೊದಲನೇ ಪಂದ್ಯದಲ್ಲಿ ಇನ್ನಿಂಗ್ಸ್ ಮತ್ತು 132 ರನ್‌ಗಳ ಸೋಲನುಭವಿಸಿದ ನಂತರ ಆಸ್ಟ್ರೇಲಿಯಾ ಎರಡನೇ ಟೆಸ್ಟ್ ಪಂದ್ಯದಲ್ಲಿ ಮಹತ್ವದ ಬದಲಾವಣೆ ಮಾಡಲು ಮುಂದಾಗಿದೆ.
ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್‌ಗೆ ಅವಕಾಶ ಸಿಗುವುದು ಈ ಅನುಮಾನ ಎನ್ನಲಾಗಿದೆ. ವಾರ್ನರ್ ಬದಲಿಗೆ ತಂಡದಲ್ಲಿ ಹೆಚ್ಚುವರಿ ಸ್ಪಿನ್ನರ್ ಗೆ ಅವಕಾಶ ನೀಡಲು ಆಸ್ಟ್ರೇಲಿಯಾ ತಂಡದ ಮ್ಯಾನೇಜ್‌ಮೆಂಟ್ ಚಿಂತಿಸುತ್ತಿದೆ ಎನ್ನಲಾಗಿದೆ.
ಭಾರತದಲ್ಲಿ ಡೇವಿಡ್ ವಾರ್ನರ್ ಟೆಸ್ಟ್ ಅಂಕಿ ಅಂಶಗಳು ಅಷ್ಟೇನು ಉತ್ತಮವಾಗಿಲ್ಲ. ಭಾರತದ ವಿರುದ್ಧ ಆಡಿರುವ 16 ಪಂದ್ಯಗಳಲ್ಲಿ ಅವರು 11 ಬಾರಿ ರವಿಚಂದ್ರನ್ ಅಶ್ವಿನ್ ಬೌಲಿಂಗ್‌ನಲ್ಲಿ ಔಟಾಗಿದ್ದಾರೆ.
ಎರಡನೇ ಟೆಸ್ಟ್ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಪಿಚ್ ಸ್ಪಿನ್ನರ್ ಗೆ ಹೆಚ್ಚಿನ ನೆರವು ನೀಡಲಿದೆ ಎಂದು ಹೇಳಲಾಗುತ್ತಿದೆ. ನಾಗ್ಪುರ ಟೆಸ್ಟ್‌ನಲ್ಲಿ ಸೋಲಿನಿಂದ ಪಾಠ ಕಲಿತಿರುವ ಆಸ್ಟ್ರೇಲಿಯಾ ಹೆಚ್ಚುವರಿ ಸ್ಪಿನ್ನರ್ ನನ್ನು ತಂಡಕ್ಕೆ ಸೇರಿಸಿಕೊಳ್ಳಲು ರಣತಂತ್ರ ರೂಪಿಸಿದೆ.
ತಂಡದ ಸ್ಪಿನ್ನರ್ ಮಿಚೆಲ್ ಸ್ವೆಪ್ಸನ್ ಮಗುವಿನ ನಿರೀಕ್ಷೆಯಲ್ಲಿದ್ದು ವಾಪಸ್ ಆಸ್ಟ್ರೇಲಿಯಾಗೆ ತೆರಳಿದ್ದಾರೆ. ಸ್ವೆಪ್ಸನ್ ಬದಲಿಗೆ ಕ್ರಿಕೆಟ್ ಆಸ್ಟ್ರೇಲಿಯಾ ಎಡಗೈ ಸ್ಪಿನ್ನರ್ ಮ್ಯಾಟ್ ಕುಹ್ನೆಮನ್‌ರನ್ನು ಆಯ್ಕೆ ಮಾಡಿದೆ. ಶೀಘ್ರದಲ್ಲೇ ದೆಹಲಿಯಲ್ಲಿ ತಂಡವನ್ನು ಸೇರಿಕೊಳ್ಳಲಿದ್ದು, ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯಕ್ಕೆ ಪದಾರ್ಪಣೆ ಮಾಡಲು ಸಜ್ಜಾಗಿದ್ದಾರೆ.

ಎರಡನೇ ಟೆಸ್ಟ್‌ಗಾಗಿ ಪ್ರಮುಖ ಬದಲಾವಣೆ
ಮೊದಲ ಟೆಸ್ಟ್ ಪಂದ್ಯದಲ್ಲಿ ಪ್ರಮುಖ ಆಟಗಾರರು ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದರು. ವೇಗಿಗಳಾದ ಜೋಶ್ ಹೇಜಲ್‌ವುಡ್, ಮಿಚೆಲ್ ಸ್ಟಾರ್ಕ್, ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್, ಟ್ರಾವಿಸ್ ಹೆಡ್ ಹೊರಗುಳಿಯಬೇಕಾಯಿತು.
ಎರಡನೇ ಟೆಸ್ಟ್ ಪಂದ್ಯಕ್ಕೆ ಜೋಶ್ ಹೇಜಲ್‌ವುಡ್ ಹೊರತುಪಡಿಸಿ ಉಳಿದ ಆಟಗಾರರು ಆಡುವ ಸಾಧ್ಯತೆ ಇದೆ. ಪ್ರಮುಖ ವೇಗಿ ಮಿಚೆಲ್ ಸ್ಟಾರ್ಕ್ 2ನೇ ಟೆಸ್ಟ್‌ನಲ್ಲಿ ಆಡುವುದು ಖಚಿತವಾಗಿದೆ. ಗ್ರೀನ್ ಕೂಡ ಮ್ಯಾಟ್ ರೆನ್ಶಾ ಬದಲಿಗೆ ಕಣಕ್ಕಿಳಿಯಲಿದ್ದಾರೆ.
ಡೇವಿಡ್ ವಾರ್ನರ್ ಬದಲಾಗಿ ಆಲ್‌ರೌಂಡರ್ ಟ್ರಾವಿಸ್ ಹೆಡ್ ಕಣಕ್ಕಿಳಿಯುವ ಸಾಧ್ಯತೆ ಇದೆ. ಮ್ಯಾಟ್ ಕುಹ್ನೆಮನ್ ಕೂಡ ಮೊದಲ ಅಂತಾರಾಷ್ಟ್ರೀಯ ಟೆಸ್ಟ್ ಆಡುವ ಉತ್ಸಾಹದಲ್ಲಿದ್ದಾರೆ.

ಇನ್ನೊಂದು ಅವಕಾಶ ನೀಡಲು ಸಲಹೆ
ಇನ್ನು ಡೇವಿಡ್ ವಾರ್ನರ್ ಅನುಭವಿ ಬ್ಯಾಟರ್ ಆಗಿದ್ದು ಅವರಿಗೆ ಇನ್ನೊಂದು ಅವಕಾಶ ನೀಡಬೇಕು ಎಂದು ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಮಾರ್ಕ್ ಟೇಲರ್ ತಿಳಿಸಿದ್ದಾರೆ.
"ಡೇವಿಡ್ ವಾರ್ನರ್ ಸಾಕಷ್ಟು ಸಮಯದಿಂದ ತಂಡದಲ್ಲಿದ್ದಾರೆ. ಅವರಿಗೆ ಇನ್ನೂ ಸಾಕಷ್ಟು ಅವಕಾಶಗಳಿವೆ, ಅವರಿಂದ ಉತ್ತಮ ಇನ್ನಿಂಗ್ಸ್ ಬರಬೇಕೆಂದರೆ ಅವರಿಗೆ ಮುಂದಿನ ಟೆಸ್ಟ್ ಪಂದ್ಯದಲ್ಲಾದರೂ ಅವಕಾಶ ನೀಡಬೇಕು. ಡೇವಿಡ್ ವಾರ್ನರ್ ಮತ್ತು ಉಸ್ಮಾನ್ ಖವಾಜ ಎರಡನೇ ಇನ್ನಿಂಗ್ಸ್‌ನಲ್ಲಿ ಹೊಸ ಚೆಂಡಿನಲ್ಲಿ ಜಡೇಜಾ ಮತ್ತು ಅಶ್ವಿನ್‌ರನ್ನು ಆದರೆ ಇಬ್ಬರೂ ರನ್ ಗಳಿಸುವಲ್ಲಿ ವಿಫಲವಾದರು, ಆದರೂ ಎರಡನೇ ಟೆಸ್ಟ್‌ನಲ್ಲಿ ವಾರ್ನರ್ ಗೆ ಒಂದು ಅವಕಾಶ ನೀಡಬೇಕು" ಎಂದು ಹೇಳಿದರು.

ಎರಡನೇ ಟೆಸ್ಟ್‌ಗೆ ಸಂಭಾವ್ಯ ಬಳಗ
ಅತ್ಯುತ್ತಮ ಫಾರ್ಮ್‌ನಲ್ಲಿರುವ ಟ್ರಾವಿಸ್ ಹೆಡ್ ಎರಡನೇ ಟೆಸ್ಟ್‌ನಲ್ಲಿ ವಾರ್ನರ್ ಬದಲಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಮಧ್ಯಮ ಕ್ರಮಾಂಕದ ಬ್ಯಾಟರ್, ಮುಂದಿನ ಟೆಸ್ಟ್‌ನಲ್ಲಿ ಖವಾಜ ಜೊತೆ ಆರಂಭಿಕನಾಗಿ ಆಡಿಸಲು ಆಸ್ಟ್ರೇಲಿಯಾ ಚಿಂತನೆ ನಡೆಸಿದೆ ಎನ್ನಲಾಗಿದೆ.
ಆಸ್ಟ್ರೇಲಿಯಾ ಸಂಭಾವ್ಯ ಬಳಗ: ಡೇವಿಡ್ ವಾರ್ನರ್ / ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಪೀಟರ್ ಹ್ಯಾಂಡ್ಸ್ಕಾಂಬ್ / ಕ್ಯಾಮರೂನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮ್ಯಾಟ್ ಕುಹ್ನೆಮನ್, ಪ್ಯಾಟ್ ಕಮ್ಮಿನ್ಸ್ (ನಾಯಕ), ನಾಥನ್ ಲಿಯಾನ್, ಟಾಡ್ ಮರ್ಫಿ, ಮಿಚೆಲ್ ಸ್ಟಾರ್ಕ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications