Ind vs Aus 2nd Test: ವಿರಾಟ್ ಕೊಹ್ಲಿ ಬ್ಯಾಟಿಂಗ್ ಅತ್ಯುತ್ತಮವಾಗಿತ್ತು ಎಂದು ಹೊಗಳಿದ ಗಂಭೀರ್!

ಫಾರ್ಮ್‌ಗೆ ಮರಳಿದ ಬಳಿಕ ಟಿ20 ಮತ್ತು ಏಕದಿನ ಮಾದರಿಯಲ್ಲಿ ಶತಕಗಳನ್ನು ಸಿಡಿಸಿ ಮಿಂಚಿರುವ ಕೊಹ್ಲಿ ಟೆಸ್ಟ್ ಮಾದರಿಯಲ್ಲಿ ಶತಕ ಗಳಿಸಲು ಕಾಯುತ್ತಿದ್ದಾರೆ. ದೆಹಲಿಯಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ ದೊಡ್ಡ ಮೊತ್ತ ಗಳಿಸದೇ ಇದ್ದರೂ, ಅಮೂಲ್ಯವಾದ ರನ್ ಗಳಿಸಿ ತಂಡಕ್ಕೆ ಆಸರೆಯಾಗಿದ್ದರು.
ಭಾರತ ತಂಡದ ಮಾಜಿ ಆಟಗಾರ ಗೌತಮ್ ಗಂಭೀರ್, ವಿರಾಟ್ ಕೊಹ್ಲಿ ಬ್ಯಾಟಿಂಗ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೊದಲನೇ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ ಗಳಿಸಿದ ರನ್ ಸಾಕಷ್ಟು ಅಮೂಲ್ಯವಾದದ್ದು ಎಂದು ಅವರು ಹೊಗಳಿದ್ದಾರೆ.
ಮೊದಲ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ ತಮ್ಮ ಬ್ಯಾಟಿಂಗ್ ಮೇಲೆ ಸಾಕಷ್ಟು ನಿಯಂತ್ರಣ ಹೊಂದಿದ್ದರು ಎಂದು ಗಂಭೀರ್ ಹೇಳಿದರು. ದೆಹಲಿಯ ಅರುಣ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 262 ರನ್‌ಗಳಿಗೆ ಆಲೌಟ್ ಆಗಿತ್ತು. ಕೊಹ್ಲಿ ಮೊದಲನೇ ಇನ್ನಿಂಗ್ಸ್‌ನಲ್ಲಿ 44 ರನ್ ಗಳಿಸಿದ್ದಾಗ ವಿವಾದಾತ್ಮಕ ತೀರ್ಪಿಗೆ ಔಟಾಗಿದ್ದರು. ಎರಡನೇ ಇನ್ನಿಂಗ್ಸ್‌ನಲ್ಲಿ ಕೂಡ 20 ರನ್ ಗಳಿಸಿ ಭಾರತ 115 ರನ್‌ಗಳನ್ನು ಚೇಸ್ ಮಾಡಲು ನೆರವಾಗಿದ್ದರು.

ಅವರದ್ದು ಅತ್ಯುತ್ತಮ ಬ್ಯಾಟಿಂಗ್
ಸ್ಟಾರ್ ಸ್ಪೋರ್ಟ್ಸ್ ವಾಹಿನಿಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ, ಎರಡೂ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ಹೇಗಿತ್ತು ಎಂದು ಕೇಳಲಾದ ಪ್ರಶ್ನೆಗೆ ಗೌತಮ್ ಗಂಭೀರ್ ಉತ್ತರ ನೀಡಿದರು.
"ದೀರ್ಘಾವಧಿಯವರೆಗೆ ಕ್ರಿಕೆಟ್ ಆಡುವಾಗ ಎಲ್ಲಾ ರೀತಿಯಲ್ಲಿ ಔಟಾಗುವುದು ಸಹಜ. ಭಾರತದ ಮೊದಲ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ಅಸಾಧಾರಾಣವಾಗಿತ್ತು. ಅವರು ಬ್ಯಾಟಿಂಗ್ ಮೇಲೆ ಅದ್ಭುತ ನಿಯಂತ್ರಣ ಹೊಂದಿದ್ದರು. ಎರಡೂ ಇನ್ನಿಂಗ್ಸ್‌ನಿಂದ ಕೊಹ್ಲಿ 64 ರನ್ ಗಳಿಸಿದ್ದು, ಉತ್ತಮ ಮೊತ್ತವಾಗಿದೆ" ಎಂದು ಗಂಭೀರ್ ಹೇಳಿದ್ದಾರೆ.

ದೊಡ್ಡ ಮೊತ್ತ ಗಳಿಸುವ ನಿರೀಕ್ಷೆ
ಬಾರ್ಡರ್ ಗವಾಸ್ಕರ್ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಕೊಹ್ಲಿ ಹೆಚ್ಚಿನ ರನ್ ಗಳಿಸುವಲ್ಲಿ ವಿಫಲವಾದ ನಂತರ, ಮುಂದಿನ ಎರಡು ಪಂದ್ಯಗಳಲ್ಲಿ ಕೊಹ್ಲಿಯಿಂದ ದೊಡ್ಡ ಮೊತ್ತವನ್ನು ನಿರೀಕ್ಷೆ ಮಾಡುವುದಾಗಿ ಗೌತಮ್ ಗಂಭೀರ್ ಹೇಳಿದ್ದಾರೆ.
"ನಾನು ಈ ಮೊದಲೇ ಹೇಳಿದ್ದೇನೆ, ರನ್ ಗಳಿಸುವುದಕ್ಕಿಂತ ಹೆಚ್ಚಿನ ಆತ್ಮವಿಶ್ವಾಸವನ್ನು ಬ್ಯಾಟರ್ ಗೆ ಬೇರೆ ಯಾವುದೂ ನೀಡಲಾಗದು. ಇಷ್ಟು ದಿನ ಆಡಿದ ಆಟಗಾರನಿಗೆ ಹೇಗೆ ಬ್ಯಾಟಿಂಗ್ ಮಾಡುತ್ತಾರೆ ಎನ್ನುವುದಷ್ಟೇ ಮುಖ್ಯ. ಇದೇ ಆತ್ಮವಿಶ್ವಾಸ ಮತ್ತು ಲಯದೊಂದಿಗೆ ಕೊಹ್ಲಿ ಬ್ಯಾಟಿಂಗ್ ಮಾಡಿದರೆ ಮುಂದಿನ ಪಂದ್ಯಗಳಲ್ಲಿ ಅವರು ದೊಡ್ಡ ಮೊತ್ತ ಗಳಿಸುತ್ತಾರೆ ಎಂದು ನಾನು ನಂಬುತ್ತೇನೆ" ಎಂದು ಗಂಭೀರ್ ಹೇಳಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications