Ind vs Aus 2nd Test: ಶ್ರೇಯಸ್ ಪರೀಕ್ಷೆ ಫಿಟ್‌ನೆಸ್ ಪರೀಕ್ಷೆ: ಇನ್ನೊಂದು ದಿನದಲ್ಲಿ ಭವಿಷ್ಯ ನಿರ್ಧಾರ

ಭಾರತ ತಂಡದ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ ಫಿಟ್ ಆಗಿದ್ದು, ಎನ್‌ಸಿಎನಲ್ಲಿ ಫಿಟ್‌ನೆಸ್ ಪರೀಕ್ಷೆಗೆ ಒಳಗಾಗಲಿದ್ದಾರೆ. ಅವರು ಫಿಟ್‌ನೆಸ್ ಪರೀಕ್ಷೆಯ ವರದಿ ಬಂದ ನಂತರ ಅವರು ಆಸ್ಟ್ರೇಲಿಯಾ ವಿರುದ್ಧ ಸರಣಿಯಲ್ಲಿ ಆಡುವ ಬಗ್ಗೆ ನಿರ್ಧರಿಸಲಾಗುತ್ತದೆ.
ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಮುನ್ನ ಬೆನ್ನುನೋವಿಗೆ ತುತ್ತಾದ ಶ್ರೇಯಸ್ ಅಯ್ಯರ್ ಸರಣಿಯಿಂದ ಹೊರಗುಳಿದಿದ್ದರು. ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ತಂಡದಲ್ಲಿ ಸ್ಥಾನ ಪಡೆದರೂ, ಸಂಪೂರ್ಣವಾಗಿ ಫಿಟ್ ಆಗದ ಕಾರಣ ಮೊದಲನೇ ಟೆಸ್ಟ್‌ಗೆ ಅಲಭ್ಯರಾಗಿದ್ದರು.
ಸದ್ಯ ಬೆಂಗಳೂರಿನ ಎನ್‌ಸಿಎನಲ್ಲಿರುವ ಅವರು, ಫಿಟ್‌ನೆಸ್ ಪರೀಕ್ಷೆಯನ್ನು ಎದುರಿಸಲಿದ್ದಾರೆ. ವೈದ್ಯರು, ಫಿಸಿಯೋಗಳು ಅವರ ಫಿಟ್‌ನೆಸ್ ಬಗ್ಗೆ ಸೂಕ್ಷ್ಮವಾಗಿ ಗಮನಿಸುತ್ತಿದ್ದು 100 ಪ್ರತಿಶತ ಫಿಟ್ ಆದ ನಂತರವೇ ತಂಡಕ್ಕೆ ಮರಳಲಿದ್ದಾರೆ. ಮಂಗಳವಾರ ಶ್ರೇಯಸ್ ಅಯ್ಯರ್ ಫಿಟ್‌ನೆಸ್ ಪರೀಕ್ಷೆಗಳನ್ನು ತೆಗೆದುಕೊಳ್ಳಲಿದ್ದಾರೆ.
ಎನ್‌ಸಿಎನಲ್ಲಿರುವ ಫಿಸಿಯೋಗಳು ಅನುಮತಿ ನೀಡಿದ ನಂತರ ಅವರು ದೆಹಲಿಗೆ ಪ್ರಯಾಣ ಮಾಡಲಿದ್ದಾರೆ. ಒಂದು ವೇಳೆ ಅವರು ಫಿಟ್ ಆಗಿಲ್ಲವೆಂದಾದರೆ, ತಮ್ಮ ಫಿಟ್‌ನೆಸ್ ಮೇಲೆ ಮತ್ತೆ ಕೆಲಸ ಮಾಡಬೇಕಾಗುತ್ತದೆ. ಏಕದಿನ ವಿಶ್ವಕಪ್ ಇರುವುದರಿಂದ ಬಿಸಿಸಿಐ ಆಟಗಾರರ ಫಿಟ್‌ನೆಸ್ ಮೇಲೆ ಹೆಚ್ಚಿನ ಗಮನ ಹರಿಸುತ್ತಿದೆ.

ಇನ್ನೂ ಕ್ಲಿಯರೆನ್ಸ್ ಸಿಕ್ಕಿಲ್ಲ
"ಶ್ರೇಯಸ್ ಅಯ್ಯರ್ ಫಿಟ್ನೆಸ್‌ಗೆ ಸನಿಹದಲ್ಲಿದ್ದಾರೆ. ಅವರಿಗೆ ಇನ್ನೂ ಎನ್‌ಸಿಎ ಫಿಸಿಯೋಗಳಿಂದ ಫಿಟ್‌ನೆಸ್ ಕ್ಲಿಯರೆನ್ಸ್ ಸಿಕ್ಕಿಲ್ಲ, ಹಾಗಾಗಿ ಅವರಿಗೆ ಫಿಟ್‌ನೆಸ್ ಪರೀಕ್ಷೆಯ ಅಗತ್ಯವಿದೆ. ಮಂಗಳವಾರ ಶ್ರೇಯಸ್ ಅಯ್ಯರ್ ಫಿಟ್‌ನೆಸ್ ಪರೀಕ್ಷೆಯನ್ನು ತೆಗೆದುಕೊಳ್ಳುವುದು ಬಹುತೇಕ ಖಚಿತವಾಗಿದೆ. ಒಂದು ವೇಳೆ ಅವರು ಫಿಟ್‌ನೆಸ್ ಸಾಬೀತುಪಡಿಸಿದರೆ, ಗುರುವಾರ ದೆಹಲಿಯಲ್ಲಿ ಭಾರತ ತಂಡವನ್ನು ಸೇರಿಕೊಳ್ಳಲಿದ್ದಾರೆ" ಎಂದು ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಇನ್‌ಸೈಡ್ ಸ್ಪೋರ್ಟ್ಸ್ ವರದಿ ಮಾಡಿದೆ.

ಇನ್‌ಸ್ಟಾಗ್ರಾಂನಲ್ಲಿ ಫೋಟೊ ಹಂಚಿಕೊಂಡ ಶ್ರೇಯಸ್
ಬೆಂಗಳೂರಿನ ಎನ್‌ಸಿಎನಲ್ಲಿ ಫಿಟ್‌ನೆಸ್ ಮೇಲೆ ಕೆಲಸ ಮಾಡುತ್ತಿರುವ ಶ್ರೇಯಸ್ ಅಯ್ಯರ್, ಇನ್‌ಸ್ಟಾಗ್ರಾಂನಲ್ಲಿ ಮಿರರ್ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. ಅವರ ಜೊತೆ ಆಲ್‌ರೌಂಡ್ ವಾಷಿಂಗ್ಟನ್ ಸುಂದರ್ ಮತ್ತು ತಿಲಕ್ ವರ್ಮಾ ಕೂಡ ಜೊತೆಗಿರುವುದನ್ನು ನೋಡಬಹುದಾಗಿದೆ.
ಶ್ರೇಯಸ್ ಅಯ್ಯರ್ ಸದ್ಯ ಬಹುತೇಕ ಫಿಟ್ ಆಗಿರುವಂತೆ ಕಾಣಿಸುತ್ತಿದ್ದಾರೆ. ಪುನರ್ವಸತಿ ಚಟುವಟಿಕೆಗಳನ್ನು ಅವರು ಭಾಗವಹಿಸಿದ್ದಾರೆ. ಎರಡನೇ ಟೆಸ್ಟ್‌ನಲ್ಲಿ ಆಡದಿದ್ದರೂ ಅವರು ಮೂರನೇ ಟೆಸ್ಟ್‌ನಲ್ಲಿ ಆಡುವುದು ಬಹುತೇಕ ಖಚಿತವಾಗಿದೆ.
2022ರಲ್ಲಿ ಏಕದಿನ ಮತ್ತು ಟೆಸ್ಟ್ ಮಾದರಿಯಲ್ಲಿ ಶ್ರೇಯಸ್ ಅಯ್ಯರ್ ಭಾರತದ ಯಶಸ್ವೀ ಬ್ಯಾಟರ್ ಎನಿಸಿಕೊಂಡಿದ್ದಾರೆ. 5ನೇ ಕ್ರಮಾಂಕದಲ್ಲಿ ತಂಡದಲ್ಲಿ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications