Ind vs Aus 2nd Test: ದೆಹಲಿ ಅಂಗಳದಲ್ಲಿ ಭಾರತವೇ ಸಾಮ್ರಾಟ: ರೋಹಿತ್ ಪಡೆಗೆ 6 ವಿಕೆಟ್‌ಗಳ ಭರ್ಜರಿ ಜಯ

ಬಾರ್ಡರ್ ಗವಾಸ್ಕರ್ ಟ್ರೋಫಿಯ ಆರಂಭಿಕ ಪಂದ್ಯವನ್ನು ಮೂರೇ ದಿನದಲ್ಲಿ ಮುಗಿಸಿದ್ದ ಟೀಂ ಇಂಡಿಯಾ, ದೆಹಲಿ ಅಂಗಳದಲ್ಲಿ ಕೂಡ ಮೂರೇ ದಿನದಲ್ಲಿ ಕಾಂಗರೂ ಪಡೆಯನ್ನು ಬಗ್ಗು ಬಡಿಯುವ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.
ರವೀಂದ್ರ ಜಡೇಜಾ ಅದ್ಭುತ ಬೌಲಿಂಗ್ ದಾಲಿಗೆ ಸಿಲುಕಿದ ಆಸ್ಟ್ರೇಲಿಯಾ ಎರಡನೇ ಇನ್ನಿಂಗ್ಸ್‌ನಲ್ಲಿ 113 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಭಾರತಕ್ಕೆ 115 ರನ್‌ಗಳ ಸಾಧಾರಣ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ಭಾರತ ತಂಡ 4 ವಿಕೆಟ್ ಕಳೆದುಕೊಂಡು ಗುರಿಮುಟ್ಟುವ ಮೂಲಕ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.
115 ರನ್‌ಗಳ ಗುರಿಯನ್ನು ಬೆನ್ನತ್ತಿದ ನಾಯಕ ರೋಹಿತ್ ಶರ್ಮಾ 20 ಎಸೆತಗಳಲ್ಲಿ 3 ಬೌಂಡರಿ 2 ಸಿಕ್ಸರ್ ಸಹಿತ 31 ರನ್ ಗಳಿಸುವ ಮೂಲಕ ಅದ್ಭುತ ಆರಂಭ ನೀಡಿದರು. ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಬಾರಿ ರನೌಟ್ ಆಗುವ ಮೂಲಕ ನಿರಾಸೆ ಮೂಡಿಸಿದರು.
ಕೆಎಲ್ ರಾಹುಲ್ ಮತ್ತೆ ರನ್ ಗಳಿಸುವಲ್ಲಿ ವಿಫಲರಾದರು. ಕೇವಲ 1 ರನ್ ಗಳಿಸಿ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. ವಿರಾಟ್ ಕೊಹ್ಲಿ 31 ಎಸೆತಗಳಲ್ಲಿ 20 ರನ್ ಗಳಿಸಿದ್ದಾಗ ಮೊದಲ ಬಾರಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಸ್ಟಂಪ್‌ಔಟ್ ಆದರು. 100 ಪಂದ್ಯವನ್ನಾಡುತ್ತಿರುವ ಚೇತೇಶ್ವರ ಪೂಜಾರ ತಾಳ್ಮೆಯ ಆಟವಾಡಿದರು ಅಜೇಯ 31 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.
ಶ್ರೇಯಸ್ ಅಯ್ಯರ್ 10 ಎಸೆತಗಳಲ್ಲಿ 12 ರನ್ ಗಳಿಸಿದರೆ, ಶ್ರೀಕರ್ ಭರತ್ ಅತ್ಯುತ್ತಮ ಇನ್ನಿಂಗ್ಸ್ ಆಡಿದರು. 22 ಎಸೆತಗಳಲ್ಲಿ 3 ಬೌಂಡರಿ 1 ಭರ್ಜರಿ ಸಿಕ್ಸರ್ ಸಹಿತ 23 ರನ್ ಗಳಿಸಿ ಬೇಗನೆ ಪಂದ್ಯವನ್ನು ಮುಗಿಸಲು ಕಾರಣವಾದರು.

ಜಡೇಜಾ ಮೋಡಿಗೆ ಕಂಗಾಲಾದ ಕಾಂಗರೂ ಪಡೆ
ಭಾರತವನ್ನು ಮೊದಲ ಇನ್ನಿಂಗ್ಸ್‌ನಲ್ಲಿ 262 ರನ್‌ಗಳಿಗೆ ಆಲೌಟ್ ಮಾಡುವ 1 ರನ್‌ಗಳ ಮುನ್ನಡೆ ಪಡೆದುಕೊಂಡ ಆಸ್ಟ್ರೇಲಿಯಾ ಎರಡನೇ ಇನ್ನಿಂಗ್ಸ್‌ನಲ್ಲಿ ಅತ್ಯುತ್ತಮವಾಗಿ ಆರಂಭಿಸಿತು. ಎರಡನೇ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ 1 ವಿಕೆಟ್ ಕಳೆದುಕೊಂಡು 61 ರನ್ ಗಳಿಸುವ ಮೂಲಕ ಉತ್ತಮ ಸ್ಥಿತಿಯಲ್ಲಿತ್ತು.
ಟ್ರಾವಿಸ್ ಹೆಡ್ 40 ಎಸೆತಗಳಲ್ಲಿ 39 ರನ್ ಗಳಿಸಿ ಉತ್ತಮ ಫಾರ್ಮ್‌ನಲ್ಲಿದ್ದರು. ಆದರೆ ಮೂರನೇ ದಿನದಾಟದ ಆರಂಭದಲ್ಲೇ ಅಶ್ವಿನ್ ಅವರ ವಿಕೆಟ್ ಪಡೆಯುವ ಮೂಲಕ ಆಘಾತ ನೀಡಿದರು. ನಂತರ ದಾಳಿಗಿಳಿದ ಜಡೇಜಾ ಆಸ್ಟ್ರೇಲಿಯಾ ತಂಡದ ಬ್ಯಾಟಿಂಗ್ ಬಲವನ್ನು ಮುರಿದರು.
ಎರಡನೇ ಇನ್ನಿಂಗ್ಸ್‌ನಲ್ಲಿ 7 ವಿಕೆಟ್ ಪಡೆಯುವ ಮೂಲಕ 2ನೇ ಟೆಸ್ಟ್‌ನಲ್ಲಿ 10 ವಿಕೆಟ್ ಪಡೆದರು. ಜಡೇಜಾ ಮಾರಕ ದಾಳಿಗೆ ಸಿಲುಕಿ ಆಸ್ಟ್ರೇಲಿಯಾ ಎರಡನೇ ಇನ್ನಿಂಗ್ಸ್‌ನಲ್ಲಿ 113 ರನ್‌ಗಳಿಗೆ ಆಲೌಟ್ ಆಗುವ ಮೂಲಕ 114 ರನ್‌ಗಳ ಮುನ್ನಡೆ ಪಡೆದುಕೊಂಡಿತು. ರವೀಂದ್ರ ಜಡೇಜಾ ಕೂಡ 2ನೇ ಇನ್ನಿಂಗ್ಸ್‌ನಲ್ಲಿ 3 ವಿಕೆಟ್ ಪಡೆದರು. ಅವರು ಮೊದಲ ಇನ್ನಿಂಗ್ಸ್‌ನಲ್ಲಿ ಕೂಡ 3 ವಿಕೆಟ್ ಪಡೆದುಕೊಂಡಿದ್ದರು.

ಟ್ರೋಫಿ ಉಳಿಸಿಕೊಂಡ ಭಾರತ
4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 2-0 ಮುನ್ನಡೆ ಪಡೆದುಕೊಳ್ಳುವ ಮೂಲಕ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಉಳಿಸಿಕೊಂಡಿದೆ. ಆಸ್ಟ್ರೇಲಿಯಾ ಉಳಿದ ಎರಡು ಪಂದ್ಯಗಳನ್ನು ಗೆದ್ದರೆ ಮಾತ್ರ ಅವರು ಸರಣಿಯನ್ನು ಡ್ರಾ ಮಾಡಿಕೊಳ್ಳಲು ಅವಕಾಶವಿದೆ.
ಈ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಭಾರತ ಆಸ್ಟ್ರೇಲಿಯಾ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 100 ನೇ ಪಂದ್ಯ ಗೆದ್ದ ಸಾಧನೆ ಮಾಡಿದೆ.

ಮುಂದುವರಿದ ಜಡೇಜಾ ಪ್ರಾಬಲ್ಯ
ರವೀಂದ್ರ ಜಡೇಜಾ ಆಸ್ಟ್ರೇಲಿಯಾ ಬ್ಯಾಟರ್ ಗಳಿಗೆ ಸಿಂಹಸ್ವಪ್ನವಾಗಿದ್ದಾರೆ. ನಾಗ್ಪುರ ಟೆಸ್ಟ್‌ನಲ್ಲಿ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಜೊತೆಗೆ 7 ವಿಕೆಟ್ ಪಡೆದು ಪಂದ್ಯದ ಶ್ರೇಷ್ಠ ಆಟಗಾರ ಪ್ರಶಸ್ತಿ ಪಡೆದಿದ್ದರು. ದೆಹಲಿ ಪಂದ್ಯದಲ್ಲಿ ಕೂಡ 10 ವಿಕೆಟ್ ಪಡೆದರು. ಮೊದಲ ಇನ್ನಿಂಗ್ಸ್‌ನಲ್ಲಿ 3 ವಿಕೆಟ್ ಪಡೆದ ಜಡೇಜಾ ಎರಡನೇ ಇನ್ನಿಂಗ್ಸ್‌ನಲ್ಲಿ 7 ವಿಕೆಟ್ ಪಡೆದು ಮಿಂಚಿದರು. ಸರಣಿಯ ಎರಡೂ ಪಂದ್ಯಗಳಲ್ಲಿ ಪಂದ್ಯಶ್ರೇಷ್ಠ ಆಟಗಾರ ಪ್ರಶಸ್ತಿಗೆ ಭಾಜನರಾದರು.
ಸರಣಿಯ ಮೂರನೇ ಪಂದ್ಯ ಮಾರ್ಚ್ 1 ರಂದು ಇಂದೋರ್ ನ ಹೋಳ್ಕರ್ ಸ್ಟೇಡಿಯಂನಲ್ಲಿ ಆರಂಭವಾಗಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications