IND vs AUS 3rd ODI: ಭಾರತ vs ಆಸ್ಟ್ರೇಲಿಯಾ; ಯಾರಿಗೆ ಬೇವು, ಯಾರಿಗೆ ಬೆಲ್ಲ?; ಸಂಭಾವ್ಯ 11ರ ಬಳಗ

ಬುಧವಾರ, ಮಾರ್ಚ್ 22ರಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಆತಿಥೇಯ ಭಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿವೆ.
ಮೊದಲ ಎರಡು ಪಂದ್ಯಗಳನ್ನು ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿದ್ದರಿಂದ ಮೂರನೇ ಪಂದ್ಯವು ಸರಣಿ ನಿರ್ಣಾಯಕ ಹಾಗೂ ರೋಚಕತೆಯಿಂದ ಕೂಡಿದೆ.
ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು 2-1 ಅಂತರದಿಂದ ಸೋಲಿಸಿದ ನಂತರ ಭಾರತ ತಂಡ 5 ವಿಕೆಟ್‌ಗಳ ಜಯದೊಂದಿಗೆ ತನ್ನ ಏಕದಿನ ಸರಣಿ ಅಭಿಯಾನವನ್ನು ಆರಂಭಿಸಿತು.
ಟೆಸ್ಟ್ ಸರಣಿಯಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಮಿಂಚಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದ ಆಲ್‌ರೌಂಡರ್ ರವೀಂದ್ರ ಜಡೇಜಾ, ಮೊದಲ ಏಕದಿನ ಪಂದ್ಯದಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ನಂತರ 2ನೇ ಏಕದಿನ ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ತಂಡ ಪುಟಿದೆದ್ದು ಆಲ್‌ರೌಂಡ್ ಪ್ರದರ್ಶನ ನೀಡಿತು. ವೇಗಿಗಳು ಮಾರಕ ಬೌಲಿಂಗ್ ನಡೆಸಿ ಆತಿಥೇಯ ತಂಡವನ್ನು ಕೇವಲ 117 ರನ್‌ಗಳಿಗೆ ನಿಯಂತ್ರಿಸುವಲ್ಲಿ ಯಶಸ್ವಿಯಾದರು. ನಂತರ ಯಾವುದೇ ವಿಕೆಟ್ ನಷ್ಟವಿಲ್ಲದೆ ನಿಗದಿತ ಗುರಿ ತಲುಪಿ ಸರಣಿ ಸಮಬಲಗೊಳಿಸಿದರು.
ಭಾರತ ತಂಡದಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಫಾರ್ಮ್ ಕಳವಳಕಾರಿಯಾಗಿದ್ದು, ಕಳೆದೆರಡು ಪಂದ್ಯದಲ್ಲಿ ಡಗ್ ಔಟ್ ಆದರು. ಹೀಗಾಗಿ ಮೂರನೇ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಬದಲಿಗೆ ಇಶಾನ್ ಕಿಶನ್ ಅವಕಾಶ ಪಡೆಯುವ ಸಾಧ್ಯತೆ ಇದೆ.
ಭಾರತ vs ಆಸ್ಟ್ರೇಲಿಯಾ 3ನೇ ಏಕದಿನ ಪಂದ್ಯದ ವಿವರ
ಸ್ಥಳ ಮತ್ತು ಸಮಯ: ಭಾರತ vs ಆಸ್ಟ್ರೇಲಿಯಾ 3ನೇ ಏಕದಿನ ಪಂದ್ಯವು ಬುಧವಾರ, ಮಾರ್ಚ್ 22ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ. ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 1.30ಕ್ಕೆ ಆರಂಭವಾಗಲಿದೆ.
ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ: ಭಾರತ vs ಆಸ್ಟ್ರೇಲಿಯಾ 3ನೇ ಏಕದಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರವಾಗಲಿದೆ. ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮ್ ಆಗಿ ವೀಕ್ಷಿಸಬಹುದು.

ಭಾರತ vs ಆಸ್ಟ್ರೇಲಿಯಾ 3ನೇ ಏಕದಿನ ಪಿಚ್ ವರದಿ:
ಚೆನ್ನೈನ ಎಂಎ ಚಿದಂಬರಂ ಪಿಚ್ ಐತಿಹಾಸಿಕವಾಗಿ ಬ್ಯಾಟಿಂಗ್‌ಗೆ ಅನುಕೂಲಕರವಾಗಿದೆ. ಇದೇ ವೇಳೆ ಸ್ಪಿನ್ನರ್‌ಗಳು ಪಂದ್ಯದ ಮೇಲೆ ಗಮನಾರ್ಹ ಪರಿಣಾಮ ಬೀರುವ ಸಾಧ್ಯತೆ ಇದೆ. ನಿರೀಕ್ಷಿತವಾಗಿ ತಂಡಗಳು ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಮಾಡುವ ಗುರಿಯನ್ನು ಹೊಂದಿರುತ್ತವೆ.
ಭಾರತ vs ಆಸ್ಟ್ರೇಲಿಯಾ ಸಂಭಾವ್ಯ ಆಡುವ 11ರ ಬಳಗ
ಭಾರತ ತಂಡ: ಶುಭ್ಮನ್ ಗಿಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಇಶಾನ್ ಕಿಶನ್/ ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ.
ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್ (ನಾಯಕ), ಮಾರ್ನಸ್ ಲ್ಯಾಬುಶ್ಚಾಗ್ನೆ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಮಾರ್ಕಸ್ ಸ್ಟೊಯಿನಿಸ್, ಸೀನ್ ಅಬೋಟ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications