IND vs AUS 3rd ODI: ಭಾರತ vs ಆಸ್ಟ್ರೇಲಿಯಾ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ & ಲೈವ್ ಸ್ಕೋರ್

ಬುಧವಾರ, ಮಾರ್ಚ್ 22ರಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಏಕದಿನ ಸರಣಿಯ ಅಂತಿಮ ಹಾಗೂ ಸರಣಿ ನಿರ್ಣಾಯಕ ಪಂದ್ಯದಲ್ಲಿ ಆತಿಥೇಯ ಭಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ತಂಡಗಳು ಸೆಣಸಾಡುತ್ತಿವೆ.
ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವನ್ ಸ್ಮಿತ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಮೊದಲು ಬೌಲಿಂಗ್ ಮಾಡಲಿದೆ.
ಮೊದಲ ಎರಡು ಪಂದ್ಯಗಳಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿದ್ದರಿಂದ ಮೂರನೇ ಪಂದ್ಯವು ಸರಣಿ ನಿರ್ಣಾಯಕ ಹಾಗೂ ರೋಚಕತೆಯಿಂದ ಕೂಡಿದೆ.
ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು 2-1 ಅಂತರದಿಂದ ಸೋಲಿಸಿದ ನಂತರ ಭಾರತ ತಂಡ 5 ವಿಕೆಟ್‌ಗಳ ಜಯದೊಂದಿಗೆ ತನ್ನ ಏಕದಿನ ಸರಣಿ ಅಭಿಯಾನವನ್ನು ಆರಂಭಿಸಿತು. ನಂತರ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 10 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿತು.

ಇನ್ನು ಈ ಪಂದ್ಯದಲ್ಲಿ ಭಾರತ ತಂಡ ಯಾವುದೇ ಬದಲಾವಣೆ ಮಾಡದೇ ಕಳೆದ ಪಂದ್ಯದ ತಂಡವನ್ನೇ ಆಡುತ್ತಿದೆ. ಆಸ್ಟ್ರೇಲಿಯಾ ತಂಡದಲ್ಲಿ ಎರಡು ಬದಲಾವಣೆ ಮಾಡಿದ್ದು, ಡೇವಿಡ್ ವಾರ್ನರ್ ಮತ್ತು ಆಶ್ಟನ್ ಅಗರ್ ಆಡುವ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ
ಭಾರತ vs ಆಸ್ಟ್ರೇಲಿಯಾ 3ನೇ ಏಕದಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರವಾಗಲಿದೆ. ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮ್ ಆಗಿ ವೀಕ್ಷಿಸಬಹುದು.
ಭಾರತ vs ಆಸ್ಟ್ರೇಲಿಯಾ ಸಂಭಾವ್ಯ ಆಡುವ 11ರ ಬಳಗ
ಭಾರತ ತಂಡ: ಶುಭ್ಮನ್ ಗಿಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ.
ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್ (ನಾಯಕ), ಮಾರ್ನಸ್ ಲ್ಯಾಬುಶ್ಚಾಗ್ನೆ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಾರ್ಕಸ್ ಸ್ಟೊಯಿನಿಸ್, ಆಶ್ಟನ್ ಅಗರ್, ಸೀನ್ ಅಬೋಟ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications